ಮಲೆ ಮಾದಪ್ಪನ ಬೆಟ್ಟದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಮ್ಮ ಹೆಸರಲ್ಲಿ ಅಭಿಮಾನಿಗಳಿಂದ ಪೂಜೆ
ಚಾಮರಾಜನಗರ, ಸೆಪ್ಟೆಂಬರ್, 02: ಸಿಎಂ ಸಿದ್ದರಾಮಯ್ಯ ಅವರ ಮೇಲೆ ಮೂಡಾ ಹಗರಣದ ಆರೋಪವಿದ್ದು, ಈ ಪ್ರಕರಣವನ್ನೇ ಅಸ್ತ್ರ ಮಡಿಕೊಂಡ ವಿಪಕ್ಷಗಳ ನಾಯಕರು ಸಿದ್ದರಾಮಯ್ಯ ವಿರುದ್ಧ ಆಕ್ರೊಶ ಹೊರಹಾಕುತ್ತಿದ್ದಾರೆ. ಇದರ ನಡುವೆಯೇ ಇದೀಗ ಸಿದ್ದರಾಮಯ್ಯ ಅಭಿಮಾನಿಗಳ ಬಳಕ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದೆ.
ಪ್ರಸಿದ್ಧ ಧಾರ್ಮಿಕ ಸ್ಥಳವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಮ್ಮ ಅವರ ಹೆಸರಿನಲ್ಲಿ ಯತೀಂದ್ರ ಯುವ ಬ್ರಿಗೇಡ್ ವತಿಯಿಂದ ಬೆನಕನ ಅಮಾವಾಸ್ಯೆ ಪೂಜೆ ಹಿನ್ನೆಲೆ ವಿಶೇಷ ಪೂಜೆ ಸಲ್ಲಿಸಿದರು.

ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬೆನಕನ ಅಮಾವಾಸ್ಯೆ ಪ್ರಯುಕ್ತ ಯತೀಂದ್ರ ಯುವ ಬ್ರಿಗೇಡ್ ವತಿಯಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಫೋಟೋ ಹಿಡಿದು ಸಿಎಂ ಮತ್ತು ಅವರ ಪತ್ನಿ ಪಾರ್ವತಮ್ಮನವರ ಹೆಸರಿನಲ್ಲಿ ಅಮಾವಾಸ್ಯೆ ಪೂಜೆ ಸಲ್ಲಿಸಿ ನ್ಯಾಯಾಲಯದಲ್ಲಿ ಸಿಎಂ ಪರ ಆದೇಶ ಬರಲೆಂದು ಪ್ರಾರ್ಥನೆ ಸಲ್ಲಿಸಿದರು.
ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಲ್ಲಿ ಕೊಡುವ ತೀರ್ಪು ಮಾಯಕಾರಣ ತೀರ್ಪಾಗಿ ಸಿದ್ದು ಪರ ಬರಲೆಂದು ವಿಶೇಷ ಪೂಜೆ ಸಲ್ಲಿಸಿ ಜಯಘೋಷ ಕೂಗಿದರು.
108 ಮನೆಯವರಿಂದ ಪೂಜೆ: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಸನ್ನಿಧಾನದಲ್ಲಿ ಶ್ರಾವಣ ಮಾಸ ಮುಕ್ತಾಯವಾಗಿದ್ದು, ಈ ಹಿನ್ನೆಲೆ ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ಕುಂಭಾಭಿಷೇಕ ಸಂಪ್ರದಾಯದಂತೆ ವಿಧಿ ವಿಧಾನಗಳೊಂದಿಗೆ ನೆರವೇರಿತು. ಸಂಪೂರ್ಣ ಮಾಹಿತಿ ಇಲ್ಲಿದೆ ಗಮನಿಸಿ.
ಮಲೆ ಮಹದೇಶ್ವರ ಬೆಟ್ಟದ ಸನ್ನಿಧಿಯಲ್ಲಿ ಸೋಮವಾರ ಶ್ರಾವಣ ಮಾಸದ ಕೊನೆಯ ದಿನದ ಶತಕುಂಭೋತ್ಸವ ಸೇವೆ ನೆರವೇರಿಸಲಾಯಿತು.
ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹದೇಶ್ವರ ಸ್ವಾಮಿ ಹಾಗೂ ಉಮಾ ಮಹೇಶ್ವರಸ್ವಾಮಿ ಉತ್ಸವ ಮೂರ್ತಿಗಳನ್ನು ವಿವಿಧ ಬಗೆಯ ಪುಷ್ಪಗಳಿಂದ ಅಲಂಕರಿಸಿ ಹುಲಿವಾಹನ, ಬಸವ ವಾಹನ, ರುದ್ರಾಕ್ಷಿ ಮಂಟಪದ ಜತೆ ದೊಡ್ಡ ಸತ್ತಿಗೆ, ಚಿಕ್ಕ ಸತ್ತಿಗೆ, ಬೆಳ್ಳಿ ಸತ್ತಿಗೆ, ನಂದಿಕಂಬಗಳ ಜತೆ ಮೆರವಣಿಯಲ್ಲಿ ದೇವಾಲಯದ ಬೇಡಗಂಪಣ ಅರ್ಚಕ ತಮ್ಮಡಿಗಳ 108 ಮನೆತನದವರು ಪೂಜೆ ಸಲ್ಲಿಸಿದರು. ಪದ್ಧತಿ ಪ್ರಕಾರ ಉಪವಾಸವಿದ್ದು, ಕೆಂಪು ಬಣ್ಣದ ಮಡಿ ವಸ್ತವನ್ನು ಧರಿಸಿಕೊಂಡು ಪೂಜೆ ಮಾಡಲಾಯಿತು.
ಮಜ್ಜನ ಬಾವಿಯಿಂದ 108 ಕಳಸಗಳಿಗೆ ನೀರು ತುಂಬಿ ಪೂಜೆ ಸಲ್ಲಿಸಿದ ನಂತರ ಶಿವ ಪಾರ್ವತಿಯ ವಿಗ್ರಹಕ್ಕೆ ಸಂಕಲ್ಪಾದಿ ಅಷ್ಟಗಂಧ ಪೂಜೆ, ಸಹಸ್ರನಾಮ ಬಿಲ್ವಾರ್ಚನೆ, ಧೂಪ ದೀಪದಾರತಿ ಬೆಳಗಿ ಮಹಾ ಮಂಗಳಾರತಿ ನೆರವೇರಿಸಲಾಯಿತು.
108 ಕುಂಭದ ಕಳಸಗಳನ್ನು ಅರ್ಚಕರು ದೇವಾಲಯ ಸುತ್ತ ಪ್ರದಕ್ಷಿಣೆ ಹಾಕಿದ ನಂತರ ದೇಗುಲ ಪ್ರವೇಶಿಸಿದರು. ಆಗಮಿಕ ಅರ್ಚಕರಿಂದ ಗಣಪತಿ ಹೋಮ, ನವಗ್ರಹ ಹೋಮ, ಪೂರ್ಣಾಹುತಿ ಸಲ್ಲಿಸಿದ ನಂತರ ಮಾದಪ್ಪನಿಗೆ ವಿಶೇಷ ಅಭಿಷೇಕ ಪೂಜಾ ಕಾರ್ಯಗಳ ಜೊತೆ 108 ಕುಂಭ ಹಾಗೂ ಎಳನೀರಿನ ಅಭಿಷೇಕ ನೆರವೇರಿತು.
ಈ ವೇಳೆ ಶ್ರೀ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು, ಸಾಲೂರು ಮಠ ವೇದ ಆಗಮ ಪಾಠಶಾಲೆಯ ಆಗಮಿಕರು, ವೇದ ಪಠಣ ವಿದ್ಯಾರ್ಥಿಗಳು, ಶ್ರೀ ಅರ್ಚಕ ಮುಖಂಡರು ಸೇರಿದಂತೆ ಇತರರಿದ್ದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications