• search
  • Live TV
ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಜೆಪಿ ಫ್ಲೆಕ್ಸ್‌ನಲ್ಲಿ ಬಿಎಸ್ಪಿ ಉಚ್ಚಾಟಿತ ಶಾಸಕ ಎನ್.ಮಹೇಶ್‌ ಭಾವಚಿತ್ರ

By ಚಾಮರಾಜನಗರ ಪ್ರತಿನಿಧಿ
|

ಚಾಮರಾಜನಗರ, ಜನವರಿ 11: ಇಂದು (ಸೋಮವಾರ) ನಡೆದ ಜನ ಸೇವಕ ಸಮಾವೇಶದ ಬಿಜೆಪಿ ಪ್ಲೆಕ್ಸ್‌ಗಳಲ್ಲಿ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಭಾವಚಿತ್ರ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ.

ಚಾಮರಾಜನಗರದಲ್ಲಿ ಇಂದು ಆಯೋಜಿಸಿರುವ ಜನಸೇವಕ ಸಮಾವೇಶದಲ್ಲಿ ಭಾಗವಹಿಸುವ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು, ಸಚಿವರು ಹಾಗೂ ಮುಖಂಡರಿಗೆ ಸ್ವಾಗತ ಕೋರುವ ಫ್ಲೆಕ್ಸ್‌ನಲ್ಲಿ ಬಿಎಸ್ಪಿ ಉಚ್ಚಾಟಿತ ಶಾಸಕ ಎನ್‌.ಮಹೇಶ್‌ ಅವರ ಫೋಟೋವನ್ನೂ ಹಾಕಲಾಗಿದೆ.

ಸಚಿವ ಸ್ಥಾನ ಸಿಗದಿದ್ದರೂ ಬಿಜೆಪಿಗೆ ಬೆಂಬಲ; ಉಚ್ಚಾಟಿತ ಶಾಸಕ

ಎನ್‌.ಮಹೇಶ್‌ ಅವರ ಭಾವಚಿತ್ರ ಬಿಜೆಪಿ ಫ್ಲೆಕ್ಸ್‌ನಲ್ಲಿ ಕಾಣಿಸಿಕೊಂಡಿರುವುದರಿಂದ ಎನ್‌.ಮಹೇಶ್ ಅವರು ಬಿಜೆಪಿಗೆ ಸೇರುತ್ತಾರೆ ಎಂಬ ಊಹಾಪೋಹಕ್ಕೆ ಮತ್ತಷ್ಟು ಪುಷ್ಟಿ ದೊರಕಿದಂತಾಗಿದೆ.

ಸಚಿವ ಸ್ಥಾನದ ಆಕಾಂಕ್ಷೆ ಯಾರಿಗೆ ಇರುವುದಿಲ್ಲ ಹೇಳಿ, ಸಚಿವ ಸ್ಥಾನ ಕೊಟ್ಟರೆ ಉತ್ತಮವಾದ ಕೆಲಸ ಮಾಡುವೆ. ಆದರೆ ಕೊಡುವುದು, ಬಿಡೋದು ಅವರಿಗೆ ಬಿಟ್ಟದ್ದು ಎಂದು ಮೈಸೂರಿನ ಸುತ್ತೂರಿನಲ್ಲಿ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದ್ದರು.

ಇಂದು ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೊಳ್ಳೇಗಾಲ ಶಾಸಕ ಎನ್.ಮಹೇಶ್‌ ಅವರು, ತಮಗೆ ಸಚಿವ ಸ್ಥಾನ ನೀಡದಿದ್ದರೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ಇರುವುದಾಗಿ ಸ್ಪಷ್ಟಪಡಿಸಿದ್ದರು. ಈ ಫ್ಲೆಕ್ಸ್‌ನಿಂದಾಗಿ ಮಹೇಶ್‌ ಬಿಜೆಪಿ ಸೇರ್ಪಡೆ ಪಕ್ಕಾ ಆಗಿದೆ ಎಂದು ಕಾರ್ಯಕರ್ತರ ವಲಯದಲ್ಲಿ ಚರ್ಚೆ ನಡೆದಿದೆ.

English summary
Surprisingly a portrait of Kollegala MLA N Mahesh appeared on BJP's Plex.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X