ಆಗಸ್ಟ್‌ 5ರಂದು ತೆಪ್ಪಕಾಡಿಗೆ ಭೇಟಿ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌

ಚಾಮರಾಜನಗರ, ಆಗಸ್ಟ್‌, 04: ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ತೆಪ್ಪಕಾಡು ಆನೆ ಶಿಬಿರ ಗುಂಡ್ಲುಪೇಟೆ ಗಡಿಭಾಗದಲ್ಲಿ ಬರುವುದರಿಂದ ಜೊತೆಗೆ ಪ್ರವಾಸ ಮಾರ್ಗ ದಿಢೀರ್ ಬದಲಾಗಿ ರಸ್ತೆ ಮಾರ್ಗದಲ್ಲಿ ಸಂಚರಿಸಬೇಕಾದ ಪ್ರಮೇಯ ಬರಬಹುದೆಂದು ಗುಂಡ್ಲುಪೇಟೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.‌ ಮೈಸೂರಿನಿಂದ ಬಂಡೀಪುರದ ಗಡಿವರೆಗೆ ರಾಷ್ಟ್ರಪತಿಗಳ ಕಾನ್ವೆ ಶುಕ್ರವಾರ ಸಂಜೆ ಪೂರ್ವ ತಾಲೀಮು ನಡೆಸಿದ್ದು, ಗುಂಡ್ಲುಪೇಟೆ ಹೊರವಲಯದಲ್ಲಿ ಈಗಾಗಲೇ ಹೆಲಿಪ್ಯಾಡ್ ಅನ್ನು ಕೂಡ ನಿರ್ಮಾಣ ಮಾಡಲಾಗಿದೆ.

President Droupadi Murmu will visits Theppakadu Elephant Camp on August 5

150 ಪೊಲೀಸ್ ಸಿಬ್ಬಂದಿಗಳ ತಂಡವನ್ನು ಈಗಾಗಲೇ ನಿಯೋಜನೆ ಮಾಡಲಾಗಿದೆ. ರೂಟ್ ಮ್ಯಾಪ್ ಪ್ರಕಾರ ಅವರು ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸಲಿದ್ದು, ಹವಾಮಾನ ವೈಪರೀತ್ಯಗಳಿಂದ ರಸ್ತೆ ಮೂಲಕ ಸಂಚರಿಸಬೇಕಾದರೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಚಾಮರಾಜನಗರ ಎಸ್‌ಪಿ ಪದ್ಮಿನಿ ಸಾಹು ಮಾಹಿತಿ ನೀಡಿದ್ದಾರೆ.

President Droupadi Murmu will visits Theppakadu Elephant Camp on August 5

ತೆಪ್ಪಕಾಡಿನಲ್ಲಿ ಆಸ್ಕರ್ ವಿಜೇತ ಡಾಕ್ಯುಮೆಂಟರಿಯಾದ ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೊಮ್ಮ ಹಾಗೂ ಬೆಳ್ಳಿ ದಂಪತಿ ವಾಸ ಮಾಡುತ್ತಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ವೇಳೆ ಬೊಮ್ಮನ್ ದಂಪತಿಗಳನ್ನು ಭೇಟಿ ಮಾಡಲಿದ್ದಾರೆ. ಕೆಲ ತಿಂಗಳುಗಳ ಹಿಂದೆಯಷ್ಟೇ ಪ್ರಧಾನಿ ಮೋದಿ ಅವರು ಕೂಡ ತೆಪ್ಪಕಾಡಿಗೆ ಭೇಟಿ ಕೊಟ್ಟಿದ್ದರು.

ಮೈಸೂರಿಗೆ ಆಗಮಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಸ್ಟ್‌ 5ರಂದು ಮಧ್ಯಾಹ್ನ 12:30ಕ್ಕೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ಮಧುಮಲೈಗೆ ನಿರ್ಗಮಿಸುವರು. ನಂತರ ಸಂಜೆ 5:45ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸಿ ಚೆನ್ನೈಗೆ ನಿರ್ಗಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾನಾ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಿದರು. "ರಾಷ್ಟ್ರಪತಿ ಆಗಮಿಸುವ ಸಂದರ್ಭದಲ್ಲಿ ಯಾವುದೇ ರೀತಿಯ ಅನಾನುಕೂಲ ಆಗದಂತೆ ಶಿಷ್ಟಾಚಾರ ಪ್ರಕಾರ ಎಲ್ಲ ರೀತಿಯ ಕ್ರಮಕೈಗೊಳ್ಳಬೇಕು, ಗೊಂದಲಕ್ಕೆ ಆಸ್ಪದ ಇಲ್ಲದಂತೆ ಇಲಾಖೆಗಳು ಸಮನ್ವಯದೊಂದಿಗೆ ಸಿದ್ಧತೆ ಮಾಡಿಕೊಳ್ಳಬೇಕು," ಎಂದು ಸೂಚನೆ ನೀಡಿದರು.

"ರೂಮ್‌ಗಳ ವ್ಯವಸ್ಥೆಯನ್ನು ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳು ಪರಿಶೀಲಿಸಬೇಕು. ಅದೇ ರೀತಿ ವಿದ್ಯುಚ್ಛಕ್ತಿ ಹಾಗೂ ಪರ್ಯಾಯ ವ್ಯವಸ್ಥೆ ಸಮರ್ಪಕವಾಗಿರುವ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ, ವರದಿ ನೀಡಬೇಕು," ಎಂದರು.

"ವಿಮಾನ ನಿಲ್ದಾಣ, ಕಾರ್ಯಕ್ರಮ ಸ್ಥಳದಲ್ಲಿ ತುರ್ತು ವೆದ್ಯಕೀಯ ವ್ಯವಸ್ಥೆ, ವೈದ್ಯರ ತಂಡ, ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಬೇಕು. ಆಹಾರ ಸುರಕ್ಷತೆ, ಭದ್ರತೆ ಮತ್ತು ಶಿಷ್ಟಾಚಾರ ಪಾಲನೆಗೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು," ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಧಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+