ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಷ್ಟ್ರಪತಿ ರಾಮನಾಥ್ ಕೋವಿಂದ್ 3 ದಿನಗಳ ರಾಜ್ಯ ಪ್ರವಾಸ: ಯಾವ ಜಿಲ್ಲೆಗಳಿಗೆ ಭೇಟಿ?

|
Google Oneindia Kannada News

ಚಾಮರಾಜನಗರ, ಸೆಪ್ಟೆಂಬರ್ 25: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೂರು ದಿನಗಳ ಕಾಲ ಕರ್ನಾಟಕ ರಾಜ್ಯ ಪ್ರವಾಸವನ್ನು ಹಮ್ಮಿಕೊಂಡಿದ್ದು, ಅಕ್ಟೋಬರ್ 7ರಂದು ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ.

ಅ.6 ರಿಂದ 8ರವರೆಗೆ ರಾಮನಾಥ್ ಕೋವಿಂದ್ ಕರ್ನಾಟಕ ಪ್ರವಾಸದಲ್ಲಿರಲಿದ್ದು, ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ. ಅ.6ರ ಸಂಜೆ 5.30ಕ್ಕೆ ಬೆಂಗಳೂರಿನ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಾಧೀಶರು ಮತ್ತು ಅವರ ಕುಟುಂಬಸ್ಥರೊಂದಿಗೆ ಚಹಾ ಕೂಟದಲ್ಲಿ ಭಾಗಿಯಾಗಲಿದ್ದಾರೆ.

ಅ.07ರ ಬೆಳಗ್ಗೆ 11.40ಕ್ಕೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆಯಲಿದ್ದಾರೆ. ಬಳಿಕ 3.30 ರಿಂದ 4.30ರವರೆಗೆ ಚಾಮರಾಜನಗರ ಮೆಡಿಕಲ್ ಕಾಲೇಜಿನ 450 ಹಾಸಿಗೆಗಳ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ.

President Ramnath Kovind To Visit Chamarajanagar On Oct 7th And Chikkamagaluru On Oct 8

ನಂತರ ಅ.08 ರ ಬೆಳಗ್ಗೆ 11.50ಕ್ಕೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರಪತಿಗಳ ಪ್ರವಾಸ ಪಟ್ಟಿಯನ್ನು ರಾಷ್ಟ್ರಪತಿಗಳ ಆಪ್ತ ಕಾರ್ಯದರ್ಶಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ರಾಷ್ಟ್ರಪತಿ ಭವನದ ಸೂಚನೆ ಮೇರೆಗೆ ಚಾಮರಾಜನಗರದ ಎಡಿಸಿ ಕಾತ್ಯಾಯಿನಿ ದೇವಿ ನೇತೃತ್ವದಲ್ಲಿ ಬಿಳಿಗಿರಿರಂಗನ ಬೆಟ್ಟ ಹಾಗೂ ಚಾಮರಾಜನಗರದ ಯಡಪುರ ಬಳಿ ಜಾಗ ಗುರುತಿಸಿದ್ದಾರೆ.

ಚಾಮರಾಜನಗರ ಹೊರ ವಲಯದಲ್ಲಿರುವ ಯಡಬೆಟ್ಟದ ಮೆಡಿಕಲ್ ಕಾಲೇಜಿನ ಬಳಿ ಸುಮಾರು 163 ಕೋಟಿ ರೂ. ವೆಚ್ಚದಲ್ಲಿ 450 ಬೆಡ್ ಸೌಲಭ್ಯವುಳ್ಳ ಆಸ್ಪತ್ರೆ ನಿರ್ಮಾಣಗೊಂಡಿದ್ದು, ಉದ್ಘಾಟನೆಗಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮಿಸಲಿದ್ದಾರೆ.

Recommended Video

RCB ಉಳಿದರುವ ಪಂದ್ಯಗಳನ್ನು ಈ ರೀತಿ ಸೋಲುವ ಹಾಗಿಲ್ಲ | Oneindia Kannada

English summary
President Ramnath Kovind To visit Chamarajanagar And Chikkamagaluru district on October 7th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X