ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಷ್ಟ್ರಪತಿ ಭೇಟಿ; ಬಿಳಿಗಿರಿ ರಂಗನ ಬೆಟ್ಟಕ್ಕೆ ಭಕ್ತರ ಪ್ರವೇಶ ನಿಷೇಧ

|
Google Oneindia Kannada News

ಚಾಮರಾಜನಗರ, ಅಕ್ಟೋಬರ್ 06; ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಅಕ್ಟೋಬರ್ 7ರಂದು ಬಿಳಿಗಿರಿ ರಂಗನ ಬೆಟ್ಟಕ್ಕೆ ಅವರು ಭೇಟಿ ನೀಡಲಿದ್ದು, ಈ ಹಿನ್ನಲೆಯಲ್ಲಿ ಬುಧವಾರ ಮತ್ತು ಗುರುವಾರ ಭಕ್ತರ ಪ್ರವೇಶ ನಿಷೇಧಿಸಲಾಗಿದೆ.

ಚಾಮರಾಜನಗರ, ಮಂಗಳೂರು, ಚಿಕ್ಕಮಗಳೂರು ಭೇಟಿಗಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಜ್ಯಕ್ಕೆ ಆಗಮಿಸಲಿದ್ದಾರೆ. ರಾಷ್ಟ್ರಪತಿಗಳ ಭದ್ರತಾ ಪಡೆಯ ಅಧಿಕಾರಿಗಳು ಬಿಳಿಗಿರಿ ರಂಗನ ಬೆಟ್ಟಕ್ಕೆ ಮಂಗಳವಾರ ಭೇಟಿ ನೀಡಿದರು.

ರಾಷ್ಟ್ರಪತಿ ಆಗಮನ ಹಿನ್ನೆಲೆ ಬಿಳಿಗಿರಿರಂಗನಬೆಟ್ಟಕ್ಕೆ 2 ದಿನ ಪ್ರವೇಶ ನಿಷೇಧರಾಷ್ಟ್ರಪತಿ ಆಗಮನ ಹಿನ್ನೆಲೆ ಬಿಳಿಗಿರಿರಂಗನಬೆಟ್ಟಕ್ಕೆ 2 ದಿನ ಪ್ರವೇಶ ನಿಷೇಧ

ಚಾಮರಾಜನಗರ ಮೆಡಿಕಲ್ ಕಾಲೇಜು ಮತ್ತು ಬಿಳಿಗಿರಿ ರಂಗನ ಬೆಟ್ಟ ಸಮೀಪ ನಿರ್ಮಾಣ ಮಾಡಲಾಗಿರುವ ಹೆಲಿಪ್ಯಾಡ್‌ಗಳನ್ನು ಪರಿಶೀಲಿಸಿದರು. ನಾಲ್ಕು ಬಾರಿ ಹೆಲೆಕಾಪ್ಟರ್ ಪ್ರಾಯೋಗಿಕ ಹಾರಾಟ ನಡೆಸಿದರು. ರಸ್ತೆ ಮಾರ್ಗದ ಮೂಲಕವೂ ಸಂಚಾರ ನಡೆಸಿದರು.

ರಾಷ್ಟ್ರಪತಿ ರಾಮನಾಥ್ ಕೋವಿಂದ್ 3 ದಿನಗಳ ರಾಜ್ಯ ಪ್ರವಾಸ: ಯಾವ ಜಿಲ್ಲೆಗಳಿಗೆ ಭೇಟಿ?ರಾಷ್ಟ್ರಪತಿ ರಾಮನಾಥ್ ಕೋವಿಂದ್ 3 ದಿನಗಳ ರಾಜ್ಯ ಪ್ರವಾಸ: ಯಾವ ಜಿಲ್ಲೆಗಳಿಗೆ ಭೇಟಿ?

 President Visit Devotees Entry Banned To Biligiri Rangana Betta

ಬಿಳಿಗಿರಿ ರಂಗನ ಬೆಟ್ಟಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ಖಾಸಗಿ ಭೇಟಿಯಾಗಿದೆ. ಆದ್ದರಿಂದ ಪತ್ರಕರ್ತರಿಗೂ ಪ್ರವೇಶಕ್ಕೆ ಸಹ ನಿರ್ಬಂಧ ವಿಧಿಸಲಾಗಿದೆ. ಭಕ್ತರು ಸಹ ಅಕ್ಟೋಬರ್ 6 ಮತ್ತು 7 ರಂದು ಬೆಟ್ಟಕ್ಕೆ ಭೇಟಿ ನೀಡುವಂತಿಲ್ಲ.

ಬಿಳಿಗಿರಿ ರಂಗನಾಥನ ಬೆಟ್ಟ ಇನ್ಮುಂದೆ ಪರಿಸರ ಸೂಕ್ಷ್ಮವಲಯ; ವಾಣಿಜ್ಯ ಚಟುವಟಿಕೆಗೆ ಬ್ರೇಕ್!ಬಿಳಿಗಿರಿ ರಂಗನಾಥನ ಬೆಟ್ಟ ಇನ್ಮುಂದೆ ಪರಿಸರ ಸೂಕ್ಷ್ಮವಲಯ; ವಾಣಿಜ್ಯ ಚಟುವಟಿಕೆಗೆ ಬ್ರೇಕ್!

ಚಾಮರಾಜನಗರ ಜಿಲ್ಲಾಡಳಿತ ಅಕ್ಟೋಬರ್ 7ರಂದು ವಡ್ಡಗೆರೆ ಹೆಲಿಪ್ಯಾಡ್, ಬಿಳಿಗಿರಿ ರಂಗನ ಬೆಟ್ಟ, ಚಾಮರಾಜನಗರ ವೈದ್ಯಕೀಯ ಕಾಲೇಜು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ.

15 ಕಿ. ಮೀ. ವ್ಯಾಪ್ತಿಯಲ್ಲಿ ಮಾನವ ರಹಿತ ಏರ್ ಕ್ರಾಫ್ಟ್‌ ಬಳಕೆ, ಏರ್ ಬಲೂನ್ ಹಾರಾಟ, ಬ್ಯಾನರ್, ಬಂಟಿಂಗ್ಸ್ ಹಾಕುವಂತಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ. ರಾಷ್ಟ್ರಪತಿಗಳ ಭದ್ರತಾ ಸಿಬ್ಬಂದಿ ಜಿಲ್ಲಾ ಪೊಲೀಸರಿಗೂ ಹಲವು ಸೂಚನೆಗಳನ್ನು ನೀಡಿದ್ದಾರೆ.

ಬಿಳಿಗಿರಿ ರಂಗನ ಬೆಟ್ಟದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ರಾಷ್ಟ್ರಪತಿಗಳ ಜೊತೆ ಪಾಲ್ಗೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಬಸವರಾಜ್ ಬೊಮ್ಮಾಯಿ ಚಾಮರಾಜನಗರ ನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಮಂಗಳೂರಿನಲ್ಲಿ ವಾಸ್ತವ್ಯ; ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಗೆ ಭೇಟಿ ನೀಡಲಿರುವ ರಾಷ್ಟ್ರಪತಿಗಳು ಅದಕ್ಕಾಗಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅಕ್ಟೋಬರ್ 7 ಮತ್ತು 8ರಂದು ರಾಮನಾಥ್ ಕೋವಿಂದ್ ಮಂಗಳೂರಿನ ಸರ್ಕ್ಯುಟ್ ಹೌಸ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಸರ್ಕ್ಯುಟ್ ಹೌಸ್‌ನಲ್ಲಿ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಲಾಗುತ್ತಿದೆ. ಕಟ್ಟಡಕ್ಕೆ ಸುಣ್ಣ-ಬಣ್ಣ ಮಾಡಿ ತಯಾರಿ ಮಾಡಲಾಗುತ್ತಿದೆ. ಸರ್ಕ್ಯುಟ್ ಹೌಸ್‌ನಲ್ಲಿ ಸಂಪರ್ಕಿಸುವ ಕದ್ರಿ ಪಾರ್ಕ್, ಕೆಪಿಟಿ ರಸ್ತೆಯನ್ನು ದುರಸ್ತಿ ಮಾಡಲಾಗಿದೆ.

ಮಂಗಳೂರು ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ರಾಷ್ಟ್ರಪತಿಗಳು ಮಂಗಳೂರಿನ ಸರ್ಕ್ಯುಟ್ ಹೌಸ್‌ಗೆ ಆಗಮಿಸಲಿದ್ದಾರೆ. ಆದ್ದರಿಂದ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಲಾಗಿದೆ. ಅವೈಜ್ಞಾನಿಕ ಹಂಪ್‌ಗಳನ್ನು ತೆರವುಗೊಳಿಸಲಾಗಿದೆ.

ಸರ್ಕ್ಯುಟ್ ಹೌಸ್‌ ರಸ್ತೆ, ಪ್ರವೇಶ ದ್ವಾರ, ಅಕ್ಕಪಕ್ಕದ ಜಾಗವನ್ನು ಸ್ವಚ್ಚಗೊಳಿಸಲಾಗುತ್ತಿದೆ. ಸ್ಮಾರ್ಟ್‌ ಸಿಟಿ ಯೋಜನೆಯಡಿ ಕದ್ರಿ ಪಾರ್ಕ್ ರಸ್ತೆ ಅಭಿವೃದ್ಧಿ ನಡೆಯುತ್ತಿದ್ದು, ಕಾಮಗಾರಿ ಅಂತಿಮ ಹಂತದಲ್ಲಿದೆ. ಅದನ್ನು ತಕ್ಷಣ ಪೂರ್ಣಗೊಳಿಸಿ ಎಂದು ಸೂಚನೆ ಕೊಡಲಾಗಿದೆ.

ಬಿಗಿ ಭದ್ರತೆ; ಸರ್ಕ್ಯುಟ್ ಹೌಸ್‌ನಲ್ಲಿ ರಾಷ್ಟ್ರಪತಿಗಳು ವಾಸ್ತವ್ಯ ಹೂಡುವುದರಿಂದ ಸುತ್ತಮುತ್ತಲ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ರಾಷ್ಟ್ರಪತಿಗಳ ಭದ್ರತಾ ಪಡೆ ಸಿಬ್ಬಂದಿ ಜಿಲ್ಲಾಡಳಿತ ಮತ್ತು ಮಂಗಳೂರು ಪೊಲೀಸರು ಜೊತೆ ವಿವರವಾದ ಚರ್ಚೆ ನಡೆಸಿದ್ದಾರೆ.

ರಾಷ್ಟ್ರಪತಿಗಳ ಕಾರ್ಯಕ್ರಮಗಳು

* ಅಕ್ಟೋಬರ್ 6ರಂದು ರಾಜ್ಯ ಪ್ರವಾಸ ಆರಂಭ

* ಅಕ್ಟೋಬರ್ 6 ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ

* ಅಕ್ಟೋಬರ್ 7ರ ಸಂಜೆ ಮಂಗಳೂರಿಗೆ ಆಗಮನ

* ಅಕ್ಟೋಬರ್ 8ರಂದು ಶೃಂಗೇರಿ ಮಠಕ್ಕೆ ಭೇಟಿ. ಮಂಗಳೂರಿಗೆ ವಾಪಸ್

Recommended Video

ಧೋನಿ ಮನದ ಮಾತು | Oneindia Kannada

* ಅಕ್ಟೋಬರ್ 9ರಂದು ಮಂಗಳೂರು ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ಪ್ರಯಾಣ

English summary
The Chamarajanagar district administration has banned the entry of devotees to Biligiri Rangana Betta due to president Ram Nath Kovind visit. Devotees not visit temple on October 6 and 7.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X