Priyanka Gandhi: ಹನೂರಿನಲ್ಲಿ ಚುನಾವಣಾ ಪ್ರಚಾರ ಮಾಡಲಿರುವ ಪ್ರಿಯಾಂಕಾ ಗಾಂಧಿ, ಬಿಜೆಪಿಗೆ ಟಕ್ಕರ್ ಕೊಡಲು ಪ್ಲಾನ್
ಚಾಮರಾಜನಗರ, ಏಪ್ರಿಲ್, 25: ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯ ನಾಯಕರ ಪರವಾಗಿ ರಾಷ್ಟ್ರೀಯ ನಾಯಕರು ಅಬ್ಬರದ ಪ್ರಚಾರಕ್ಕಿಳಿದಿದ್ದಾರೆ. ಅದೇ ರೀತಿಯಲ್ಲಿ ಕಿತ್ತೂರು ಕರ್ನಾಟಕ ಭಾಗದಲ್ಲಿ ಸಹೋದರ ರಾಹುಲ್ ಗಾಂಧಿ ಪ್ರಚಾರ ಮಾಡುತ್ತಿರುವವ ಬೆನ್ನಲ್ಲೇ ಇದೀಗ ಪ್ರಿಯಾಂಕಾ ಗಾಂಧಿ ಎಂಟ್ರಿ ಕೊಡುತ್ತಿದ್ದು, ಇಂದಿನಿಂದ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರಿಗೆ ಮಧ್ಯಾಹ್ನ 2:30ರ ಸುಮಾರಿಗೆ ಬರಲಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು, ಈ ವೇಳೆ ಗಿರಿಜನ ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ. ಗಿರಿಜನ ಮಹಿಳೆಯರ ಅಭಿವೃದ್ಧಿಗೆ ಕಾಂಗ್ರೆಸ್ ನೀತಿ, ಕಾರ್ಯಕ್ರಮಗಳ ಬಗ್ಗೆಯೂ ತಿಳಿಸಲಿದ್ದಾರೆ.

ಇನ್ನು, ಸಂವಾದದ ಬಳಿಕ ಜಿಲ್ಲೆಯ ನಾಲ್ಕು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಚುನಾವಣಾ ಭಾಷಣ ಮಾಡಲಿದ್ದಾರೆ. ಆದ್ದರಿಂದ ಈಗಾಗಲೇ ಹನೂರಿನಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಸೋಮವಾರವಷ್ಟೇ ಗುಂಡ್ಲುಪೇಟೆಯಲ್ಲಿ ಅಮಿತ್ ಶಾ ರೋಡ್ ಶೋ ಮಾಡಿ ಕಮಲ ಪಡೆಗೆ ರಣೋತ್ಸಾಹ ತುಂಬಿದ್ದರು. ಇದೀಗ ಕಾಂಗ್ರೆಸ್ ನಾಯಕಿ ಎಂಟ್ರಿ ಕೊಡುತ್ತಿದ್ದು, ಕೈ ಪಡೆಗೆ ಶಕ್ತಿ ತುಂಬಲಿದ್ದಾರೆ ಎಂದು ಹನೂರು ಶಾಸಕ ನರೇಂದ್ರ ಮಾಹಿತಿ ನೀಡಿದ್ದಾರೆ.
ರೋಡ್ ಶೋ ಮಾಡಿದ್ದ ಅಮಿತ್ ಶಾ
ಈಗಾಗಲೇ ಚುನಾವಣಾ ಚಾಣಕ್ಯ ಎಂದೇ ಜನಪ್ರಿಯತೆ ಪಡೆದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ರೋಡ್ ಶೋ ನಡೆಸಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದ್ದಾರೆ.
ಮೈಸೂರಿನಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ದೇವರ ದರ್ಶನ ಪಡೆದು ಚುನಾವಣಾ ಪ್ರಚಾರ ಆರಂಭಿಸಿದ ಅಮಿತ್ ಶಾ ಮೊದಲಿಗೆ ಗುಂಡ್ಲುಪೇಟೆಗೆ ಬಂದು ಮಡಹಳ್ಳಿ ವೃತ್ತದಿಂದ ರೋಡ್ ಶೋ ಆರಂಭಿಸಿದರು. ಬಸ್ ನಿಲ್ದಾಣ, ಪೋಸ್ಟ್ ಆಫೀಸ್, ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಮೂಲಕ ಹಳೇ ಬಸ್ ನಿಲ್ದಾಣದ ತನಕ ಅಮಿತ್ ಶಾ ರೋಡ್ ಶೋ ನಡೆಸಿದ್ದು, ಮಾರ್ಗದುದ್ದಕ್ಕೂ ಕಾರ್ಯಕರ್ತರು ಹೂವಿನ ಮಳೆ ಸುರಿಸಿದರು.
ಬ್ಯಾರಿಕೇಡ್ ಹಿಂದೆ ಬಿಸಿಲಿನಲ್ಲಿ ತಾಸುಗಳಿಂದ ನಿಂತಿದ್ದ ಜನರ ಉತ್ಸಾಹ ಕಂಡ ಅಮಿತ್ ಶಾ ರೋಡ್ ಶೋ ವಾಹನದ ಮುಂದಕ್ಕೆ ಬನ್ನಿ ಎಂದು ಕಾರ್ಯಕರ್ತರನ್ನು ಕರೆದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಬಿ.ಎಸ್.ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್ ಪರವಾಗಿ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಕುಣಿದು ಕುಪ್ಪಳಿಸಿದರು. ರೋಡ್ ಶೋನಲ್ಲಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಸ್ಥಳೀಯಬಿಜೆಪಿ ಮುಖಂಡರು ಭಾಗಿಯಾಗಿದ್ದರು.
ಕಾಂಗ್ರೆಸ್ ವಿರುದ್ಧ ಮೀಸಲಾತಿ ಅಸ್ತ್ರ ಪ್ರಯೋಗ
ಹಳೇ ಬಸ್ ನಿಲ್ದಾಣದಲ್ಲಿ ಪ್ರಚಾರ ರಥದಲ್ಲಿ ಅಮಿತ್ ಶಾ ಮಾತನಾಡಿ, ಕಾಂಗ್ರೆಸ್ ವಿರುದ್ಧ ಮೀಸಲಾತಿ ಅಸ್ತ್ರ ಪ್ರಯೋಗ ಮಾಡಿದರು. ತಾವು ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿಯನ್ನು ಮತ್ತೆ ಜಾರಿ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅವರು ಹೇಗೆ ಮಾಡಿ ಯಾವ ಜಾತಿ ಮೀಸಲಾತಿಯನ್ನು ಕಿತ್ತುಕೊಳ್ಳುತ್ತಾರೆ. ಲಿಂಗಾಯತರದ್ದೋ, ಒಕ್ಕಲಿಗರದ್ದೋ ಇಲ್ಲವೇ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಡಿಮೆ ಮಾಡಿ ಮುಸ್ಲಿಂರಿಗೆ ಕೊಡುತ್ತಾರೋ ಎಂದು ಪ್ರಶ್ನಿಸಿದರು.
ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಉತ್ತಮ ವಾತಾವರಣ ಇದ್ದು ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ಈ ಬಾರಿ ಕಮಲ ಅರಳಲಿದೆ. ಗುಂಡ್ಲುಪೇಟೆ ಅಭ್ಯರ್ಥಿ ನಿರಂಜನಕುಮಾರ್ ಅವರನ್ನು ಪ್ರಚಂಡ ಬಹುಮತ ಕೊಟ್ಟು ಗೆಲ್ಲಿಸಿ ಎಂದು ಅಮಿತ್ ಶಾ ಮತದಾರರಲ್ಲಿ ಮನವಿ ಮಾಡಿದರು.

Click it and Unblock the Notifications