NEET Examination: ನೀಟ್ ಪರೀಕ್ಷೆ ರದ್ದುಪಡಿಸುವಂತೆ ಕನ್ನಡಪರ ಹೋರಾಟಗಾರರಿಂದ ರಾಷ್ಟ್ರಪತಿಗೆ ಮನವಿ
ಚಾಮರಾಜನಗರ, ಜೂನ್, 11: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ನಡೆಸಲಾಗುತ್ತಿರುವ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ ಆಯಾ ರಾಜ್ಯಗಳಿಗೆ ಈ ಪರೀಕ್ಷೆಗಳನ್ನು ನಡೆಸಲು ಅಧಿಕಾರ ನೀಡಬೇಕು ಎಂದು ಒತ್ತಾಯಿಸಿ ಕನ್ನಡಪರ ಹೋರಾಟಗಾರರು ನಗರದ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಲಕ್ಷ್ಮೀ ಅವರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಈ ಹಿಂದೆ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸುತ್ತಿದ್ದ ಪರೀಕ್ಷೆಗಳು ಆಯಾ ರಾಜ್ಯ ಸಂಬಂಧಪಟ್ಟದ್ದಾಗಿದ್ದವು. ಕಳೆದ ದಶಕದಿಂದ ಕೇಂದ್ರ ಸರ್ಕಾರವು ನೀಟ್ ಎಂಬ ಹೆಸರಿನಲ್ಲಿ ವೈದ್ಯಕೀಯ ಶಿಕ್ಷಣ ಪರೀಕ್ಷೆಗಳನ್ನು ದೇಶಾದ್ಯಂತ ನಡೆಸುತ್ತಿರುವುದು ಸರಿಯಷ್ಟೆ. ಆದರೆ ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಭಾರಿ ತಾಂತ್ರಿಕ ದೋಷವಾಗಿ ಲಕ್ಷಾಂತರ ಅರ್ಹ ವಿದ್ಯಾರ್ಥಿಗಳು ಈ ವೈದ್ಯಕೀಯ ಶಿಕ್ಷಣ ಪ್ರವೇಶದಿಂದ ವಂಚಿತರಾಗಿದ್ದಾರೆ ಎಂದು ದೂರಿದ್ದಾರೆ.

ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರ ನಡೆದಿರುವ ಶಂಕೆ ಇದೆ. ಮತ್ತು ಇದು ಇದೇ ರೀತಿ ಮುಂದುವರೆದರೆ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಬಹಳ ತೊಂದರೆ ಆಗಲಿದೆ. ಮತ್ತು ಅವರು ಶಾಶ್ವತವಾಗಿ ಈ ವೈದ್ಯಕೀಯ ಶಿಕ್ಷಣ ಪ್ರವೇಶದಿಂದ ಹೊರಗುಳಿಯಲಿದ್ದಾರೆ. ಈಗಾಗಲೇ ಈ ನೀಟ್ ಪರೀಕ್ಷೆಯನ್ನು ಕರ್ನಾಟಕ, ತಮಿಳುನಾಡು ರಾಜ್ಯವು ಸೇರಿದಂತೆ ಹಲವಾರು ರಾಜ್ಯಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.
ಆದ್ದರಿಂದ ರಾಷ್ಟ್ರಪತಿಗಳಾದ ತಾವು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಈ ರಾಷ್ಟ್ರಮಟ್ಟದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ ಈ ಪರೀಕ್ಷೆಗಳನ್ನು ನಡೆಸಲು ಆಯಾ ರಾಜ್ಯಗಳಿಗೆ ಅಧಿಕಾರ ನೀಡಬೇಕು ಇದಕ್ಕೆ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಹೋರಾಟಗಾರ ಚಾ.ರಂ.ಶ್ರೀನಿವಾಸಗೌಡ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ನಿಜಧ್ವನಿಗೋವಿಂದರಾಜು, ಪಣ್ಯದಹುಂಡಿ ರಾಜು, ಮಹೇಶ್ ಗೌಡ, ಗು.ಪುರುಷೋತ್ತಮ, ಚಾ.ರಾ.ಕುಮಾರ್, ನಂಜುಂಡಶೆಟ್ಟಿ, ರಾಜಪ್ಪ, ಲಿಂಗರಾಜು ಸೇರಿದಂತೆ ಮತ್ತಿತರರು ಹಾಜರಿದ್ದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications