ವ್ಯಕ್ತಿಯ ಕುತ್ತಿಗೆಯ ಭಾಗದಲ್ಲಿ ಸ್ತನ; ವೈದ್ಯಲೋಕಕ್ಕೆ ಅಚ್ಚರಿ
ಮೈಸೂರು, ಫೆಬ್ರವರಿ 06: ವ್ಯಕ್ತಿಯೊಬ್ಬರ ಕುತ್ತಿಗೆಯ ಭಾಗದಲ್ಲಿ ಸ್ತನವೊಂದು ಬೆಳೆದಿದ್ದು, ವೈದ್ಯಕೀಯ ಲೋಕಕ್ಕೆ ಅಚ್ಚರಿ ಮೂಡಿಸಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸಿಂಗಾನಲ್ಲೂರು ಗ್ರಾಮದ ವ್ಯಕ್ತಿಯೊಬ್ಬನ ಕುತ್ತಿಗೆಯಲ್ಲಿ ಈ ಸ್ತನ ಬೆಳೆದಿದೆ. ಈ ವ್ಯಕ್ತಿಯನ್ನು ಟಿ.ನರಸೀಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ.
ವ್ಯಕ್ತಿಗೆ ಚಿಕ್ಕಂದಿನಿಂದಲೇ ಕತ್ತಿನ ಭಾಗದಲ್ಲಿ ಸಣ್ಣದಾದ ಸ್ತನವಿತ್ತು. ಆದರೆ ಅಷ್ಟು ನೋವು ಕಾಣಿಸಿಕೊಂಡಿರಲಿಲ್ಲವಂತೆ. ಹೀಗಾಗಿ ಸಂಕೋಚದಿಂದ ಇದನ್ನ ವೈದ್ಯರಿಗೆ ತೋರಿಸಿರಲಿಲ್ಲ. ಅದಕ್ಕೆ ಚಿಕಿತ್ಸೆಯನ್ನೂ ಪಡೆದಿರಲಿಲ್ಲ.

ಆದರೆ ಈಗ ಇದು ದೊಡ್ಡದಾದ ಕಾರಣ ಬುಧವಾರ ಟಿ.ನರಸೀಪುರ ಪಟ್ಟಣಕ್ಕೆ ಆಗಮಿಸಿದ್ದ, ಈ ವ್ಯಕ್ತಿಗೆ ಶಸ್ತ್ರಚಿಕಿತ್ಸೆ ನಡೆಸಿ ಸ್ತನವನ್ನು ತೆರವುಗೊಳಿಸಲಾಗಿದೆ. ಇದು ಕ್ಯಾನ್ಸರ್ ಗಡ್ಡೆಯಲ್ಲ ಎಂದು ವೈದ್ಯಾಧಿಕಾರಿ ಡಾ. ಗೋವಿಂದ ಶೆಟ್ಟಿ ತಿಳಿಸಿದರು.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications