• search
 • Live TV
ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆಕ್ಸಿಜನ್ ದುರಂತ ಪ್ರಕರಣದ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇಮಕ

By ಚಾಮರಾಜನಗರ ಪ್ರತಿನಿಧಿ
|

ಬೆಂಗಳೂರು, ಮೇ 5: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣದ ತನಿಖೆಯನ್ನು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ.

ಚಾಮರಾಜನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 24 ಕೊರೊನಾ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ್ದ ಕುರಿತು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್‌, ದುರಂತದ ಕುರಿತು ಹೈಕೋರ್ಟ್​ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಈ ಪ್ರಕರಣದ ತನಿಖೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಆಕ್ಸಿಜನ್ ದುರಂತ: ಚಾಮರಾಜನಗರ ಡಿಸಿ ಆರೋಪಕ್ಕೆ ಗದ್ಗದಿತರಾಗಿ ಪ್ರತಿಕ್ರಿಯಿಸಿದ ರೋಹಿಣಿ ಸಿಂಧೂರಿಆಕ್ಸಿಜನ್ ದುರಂತ: ಚಾಮರಾಜನಗರ ಡಿಸಿ ಆರೋಪಕ್ಕೆ ಗದ್ಗದಿತರಾಗಿ ಪ್ರತಿಕ್ರಿಯಿಸಿದ ರೋಹಿಣಿ ಸಿಂಧೂರಿ

ಹೈಕೋರ್ಟ್‌ ಆದೇಶದ ಪ್ರಕಾರ, ನಿವೃತ್ತ ನ್ಯಾಯಮೂರ್ತಿ ಬಿ.ಎ ಪಾಟೀಲ್ ಅವರ ಏಕಸದಸ್ಯ ಆಯೋಗದ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ತಿಳಿಸಿದೆ. ಅಲ್ಲದೆ, ಈ ಪ್ರಕರಣದ ಕುರಿತು ತನಿಖೆ ನಡೆಸಿ, ಒಂದು ತಿಂಗಳೊಳಗೆ ವರದಿ ನೀಡಲು ಸೂಚಿಸಲಾಗಿದೆ.

ಈ ಪ್ರಕರಣದಲ್ಲಿ ಹೈಕೋರ್ಟ್ ಆದೇಶಕ್ಕೆ ಬದ್ಧವಾಗಿರುವುದಾಗಿ ಹೇಳಿದ್ದ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರಕ್ಕೆ ಇಂದಿನ ಹೈಕೋರ್ಟ್​ ಆದೇಶ ಬಿಸಿ ತುಪ್ಪದಂತಾಗಿದೆ.

   ಭಾರತದ ವೈದ್ಯಕೀಯ ಮತ್ತು ಫಾರ್ಮಾ ಕ್ಷೇತ್ರಗಳ ಬಲವರ್ಧನೆಗೆ ವಿದೇಶಿ ಹೂಡಿಕೆ | Oneindia Kannada

   ಚಾಮರಾಜನಗರ ದುರಂತವನ್ನು ನ್ಯಾಯಾಂಗ ತನಿಖೆಗೆ ವಹಿಸಲು ವಿಪಕ್ಷಗಳು ಒತ್ತಾಯಿಸಿದಾಗ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಿರಾಕರಿಸಿದ್ದರು. ಅಲ್ಲದೆ ಐಎಎಸ್​ ಅಧಿಕಾರಿ ಶಿವಯೋಗಿ ಕಳಸದ್ ನೇತೃತ್ವದಲ್ಲಿ ಈ ಪ್ರಕರಣದ ವಿಚಾರಣೆಗೆ ಆದೇಶಿಸಿದ್ದರು. ಇದೀಗ ಹೈಕೋರ್ಟ್​ ಕೂಡ ನ್ಯಾಯಾಂಗ ತನಿಖೆಗೆ ಆದೇಶಿಸಿರುವುದು ರಾಜ್ಯ ಸರ್ಕಾರದ ನಿಲುವಿಗೆ ಹಿನ್ನಡೆ ಆದಂತಾಗಿದೆ.

   English summary
   The state government has ordered a retired judge of the High Court to Probe the oxygen tragedy case in Chamarajanagar district.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X