ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಲೆಮಹದೇಶ್ವರ ಬೆಟ್ಟದಲ್ಲಿ ಶುರುವಾಗಿದೆ ಗಂಧದ ಮರಗಳ ಕಳ್ಳತನ

|
Google Oneindia Kannada News

ಚಾಮರಾಜನಗರ, ಏಪ್ರಿಲ್ 29: ಕೊರೊನಾ ಲಾಕ್ ಡೌನ್ ಬೆನ್ನಲ್ಲೇ ಕೆಲವರು ಕಳ್ಳತನ, ಬೇಟೆ ಮುಂತಾದ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಅರಣ್ಯ ಪ್ರದೇಶ ಹೆಚ್ಚಿರುವ ಕಾರಣ ಕಾಡಂಚಿನಲ್ಲಿರುವ ಗ್ರಾಮದ ಜನ ಬೇಟೆ, ಕಳ್ಳತನಕ್ಕೆ ಮುಂದಾಗಿದ್ದಾರೆ. ಲಾಕ್‌ಡೌನ್ ಆಗಿರುವುದರಿಂದ ರಸ್ತೆಗಳಲ್ಲಿ ವಾಹನ ಸಂಚಾರ ವಿರಳವಾಗಿದೆ. ಜನ ಮನೆಯಿಂದ ಹೊರಬರದೆ ಒಳಗಿರುವ ಕಾರಣ ರಸ್ತೆ ಸೇರಿದಂತೆ ಬಡಾವಣೆಗಳು ಬಿಕೋ ಎನ್ನುತ್ತಿವೆ. ಇದನ್ನೇ ಬಂಡವಾಳವಾಗಿ ಮಾಡಿಕೊಂಡಿರುವ ಕಳ್ಳರು ದುಷ್ಕೃತ್ಯಕ್ಕೆ ಕೈ ಹಾಕುತ್ತಿದ್ದಾರೆ.

 ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ್ದ ಆರೋಪ; ಹುಣಸೂರಿನಲ್ಲಿ ಮೂವರ ಬಂಧನ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ್ದ ಆರೋಪ; ಹುಣಸೂರಿನಲ್ಲಿ ಮೂವರ ಬಂಧನ

ಅದರಂತೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಗಂಧದ ಮರಗಳನ್ನು ಕದ್ದಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ರಸ್ತೆಗಳು ಲಾಕ್ ಡೌನ್‌ನಿಂದ ಖಾಲಿ ಖಾಲಿಯಾಗಿವೆ. ಹೀಗಾಗಿ ಬೆಟ್ಟದ ರಸ್ತೆಯ ತಿರುವುಗಳಲ್ಲಿ ಬೆಳೆದಿರುವ ಶ್ರೀಗಂಧದ ಮರಗಳನ್ನು ಕಡಿದು ಕದ್ದೊಯ್ಯಲಾಗಿದೆ. ಉಳಿದ ದಿನಗಳಲ್ಲಾಗಿದ್ದರೆ ಈ ಭಾಗದಲ್ಲಿ ವಾಹನ ಸಂಚಾರ ಇರುತ್ತಿತ್ತು. ಹೀಗಾಗಿ ಕಳ್ಳತನ ಸಾಧ್ಯವಾಗುತ್ತಿರಲಿಲ್ಲ.

Sandalwood Trees Theft In Male Mahadeshwara Vanyadhama

ಸದ್ಯ ಮಹದೇಶ್ವರ ವನ್ಯಧಾಮದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ. ಕಳ್ಳರು ಎಂಟಕ್ಕೂ ಹೆಚ್ಚು ಗಂಧದ ಮರಗಳನ್ನು ಕಡಿದು ಕದ್ದೊಯ್ದಿರುವುದಾಗಿ ತಿಳಿದು ಬಂದಿದೆ.ರ ಇರುತ್ತಿತ್ತು. ಹೀಗಾಗಿ ಕಳ್ಳತನ ಸಾಧ್ಯವಾಗುತ್ತಿರಲಿಲ್ಲ. ಸದ್ಯ ಮಹದೇಶ್ವರ ವನ್ಯಧಾಮದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ. ಕಳ್ಳರು ಎಂಟಕ್ಕೂ ಹೆಚ್ಚು ಗಂಧದ ಮರಗಳನ್ನು ಕಡಿದು ಕದ್ದೊಯ್ದಿರುವುದಾಗಿ ತಿಳಿದು ಬಂದಿದೆ.

English summary
Eight sandalwood trees theft in male mahadeshwara vanyadhama in chamarajanagar district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X