ಚಾಮರಾಜನಗರದಲ್ಲಿ ಸಂಜೆ 4 ರಿಂದ ಬೆಳಿಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿ

ಚಾಮರಾಜನಗರ, ಜೂನ್ 29: ಚಾಮರಾಜನಗರದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಇಂದಿನಿಂದ ಜಿಲ್ಲೆಯಾದ್ಯಂತ ಪ್ರತಿದಿನ ಸಂಜೆ 4 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Recommended Video

      Bengaluru Corona Stats : ಇನ್ನೂ ಬೆಂಗಳೂರಲ್ಲಿ ಬದುಕೋದು ತುಂಬಾ ಕಷ್ಟ | Oneindia Kannada

      ಇನ್ನು ಮುಂದೆ ಸಂಜೆ 4 ಗಂಟೆ ನಂತರ ಅಗತ್ಯಸೇವೆಗಳನ್ನು ಹೊರತುಪಡಿಸಿ ಎಲ್ಲಾ ರೀತಿಯ ವ್ಯಾಪಾರ ವಹಿವಾಟನ್ನು ನಿರ್ಬಂಧಿಸಲಾಗಿದೆ. ವಾಹನ ಸಂಚಾರವನ್ನು ಸಹ ನಿಷೇಧಿಸಲಾಗಿದೆ. ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ನಿಷೇಧಾಜ್ಞೆ ಜಾರಿಗೊಳಿಸಿರುವುದಾಗಿ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ತಿಳಿಸಿದ್ದಾರೆ.

      ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಿನ್ನೆ ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರ ಸಭೆ ನಡೆದಿದ್ದು, ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯದ ಮೇರಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಅತ್ಯವಶ್ಯಕ ವಸ್ತುಗಳಾದ ಔಷಧಿ, ಹಣ್ಣು ತರಕಾರಿ, ಹಾಲು, ಪೆಟ್ರೋಲ್ ಡೀಸೆಲ್ ಹೊರತುಪಡಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದಿದ್ದಾರೆ.

      Section 144 Imposed In Chamarajanagar From Evening 4 To Morning 6

      ಹೊರ ಜಿಲ್ಲೆಗಳಿಂದ ಅನಗತ್ಯವಾಗಿ ಬರುವವರಿಗೆ ಕಡಿವಾಣ ಹಾಕಲು ಜಿಲ್ಲೆಯ 6 ಕಡೆ ಅಂತರಜಿಲ್ಲಾ ಚೆಕ್ ಪೋಸ್ಟ್ ಗಳನ್ನು ಮರುಸ್ಥಾಪಿಸಲಾಗುತ್ತಿದೆ. ಹೊರಜಿಲ್ಲೆಯಿಂದ ಬರುವವರಿಗೆ ಈ ಚೆಕ್ ಪೋಸ್ಟ್ ಗಳಲ್ಲೇ ಸ್ಕ್ರೀನಿಂಗ್ ಮಾಡಿ ತಪಾಸಣೆ ನಡೆಸಲಾಗುತ್ತದೆ. ಈ ಮೂಲಕ ಹೊರ ಜಿಲ್ಲೆಗಳಿಂದ ಚಾಮರಾಜನಗರಕ್ಕೆ ಕೊರೊನಾ ಸೋಂಕು ಹರಡದಂತೆ ನಿಗಾವಹಿಸಲಾಗುವುದು ಎಂದು ಹೇಳಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+