ಚಾಮರಾಜನಗರ: ಸಾರ್ವಜನಿಕ ಶೌಚಾಲಯಗಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶರ ದಿಢೀರ್ ಭೇಟಿ-ಯಾಕೆ ಗೊತ್ತಾ?

ಚಾಮರಾಜನಗರ, ಜನವರಿ, 03: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಶ್ರೀಧರ್ ಅವರು ಇಂದು ಚಾಮರಾಜನಗರದಲ್ಲಿರುವ ಸಾರ್ವಜನಿಕ ಶೌಚಾಲಯಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರಸಭಾ ಅಧಿಕಾರಿಗಳೊಂದಿಗೆ ಚಾಮರಾಜನಗರದ ಸಾರ್ವಜನಿಕ ಹಾಗೂ ಸಮುದಾಯ ಶೌಚಾಲಯಗಳಿಗೆ ಭೇಟಿ ನೀಡಿ ಶೌಚಾಲಯಗಳ ಸ್ವಚ್ಚತೆ ಹಾಗೂ ನಿರ್ವಹಣೆಯನ್ನು ಪರಿಶೀಲಿಸಿದರು.

Senior civil judge Sudden visit to public toilets in Chamarajanagar district

ಚಾಮರಾಜನಗರದ ನ್ಯಾಯಾಲಯ ರಸ್ತೆ, ತಾಲ್ಲೂಕು ಕಚೇರಿ, ಸರ್ಕಾರಿ ಆಸ್ಪತ್ರೆ, ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಹತ್ತಿರ, ಸಂತೇಮರಹಳ್ಳಿ ವೃತ್ತ, ದೊಡ್ಡಂಗಡಿ ಬೀದಿ ವೃತ್ತ, ಹಳೆ ಬಸ್ ನಿಲ್ದಾಣ, ಮಾರ್ಕೆಟ್ ಹತ್ತಿರ ಹಾಗೂ ಸತ್ತಿ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಅಲ್ಲಿನ ನಿರ್ವಹಣಾ ವ್ಯವಸ್ಥೆಯನ್ನು ವೀಕ್ಷಿಸಿದರು.

ಶೌಚಾಲಯಗಳನ್ನು ಉತ್ತಮ ಜನೋಪಯೋಗಿಯಾಗಿ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಶೌಚಾಲಯಗಳ ಸ್ವಚ್ಚತೆ ಬಗ್ಗೆ ಗಮನಹರಿಸಬೇಕು. ಶೌಚಾಲಯಗಳ ಕಟ್ಟಡದ ದುರಸ್ತಿಗೆ ಸಕಾಲದಲ್ಲೇ ಅಗತ್ಯ ಕ್ರಮ ಕೈಗೊಂಡು ಸುತ್ತಮುತ್ತಲಿನ ಪರಿಸರವನ್ನು ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ವಹಣೆ ಮಾಡಲು ಕ್ರಮ ವಹಿಸುವಂತೆ ನಗರಸಭಾ ಅಧಿಕಾರಿಗಳಿಗೆ ಸೂಚನೆ ಕೊಟ್ಟರು. ನಗರಸಭೆಯ ಪರಿಸರ ಅಭಿಯಂತರರಾದ ಗಿರಿಜಮ್ಮ ಇನ್ನಿತರರು ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+