ಚಾಮರಾಜನಗರ: ಶಿಕ್ಷಕನಿಂದಲೇ ಬಾಲಕನಿಗೆ ಲೈಂಗಿಕ ದೌರ್ಜನ್ಯ ಆರೋಪ-ಮುಂದಾಗಿದ್ದೇನು?
ಚಾಮರಾಜನಗರ, ಏಪ್ರಿಲ್, 14: ಬಾಲಕನಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದ ಶಿಕ್ಷಕನನ್ನು ಚಾಮರಾಜನಗರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಿಜಿಕೆಕೆ ಹಿಂದಿ ಶಿಕ್ಷಕ ಅರುಣ್ ಕುಮಾರ್ ಬಂಧಿತ ಆರೋಪಿ. ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ಕೊಟ್ಟು, ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎನ್ನಲಾಗಿದೆ.

ಸಂತ್ರಸ್ತ ಬಾಲಕನು ಪೊಲೀಸ್ ವರಿಷ್ಠಾಧಿಕಾರಿಗೆ ನೇರವಾಗಿ ದೂರು ಕೊಟ್ಟು ಅಳಲು ತೋಡಿಕೊಂಡಿದ್ದಾನೆ. ಕೂಡಲೇ, ಕ್ರಮ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕೊಳ್ಳೇಗಾಲ ಡಿವೈಎಸ್ಪಿ ಧರ್ಮೇಂದ್ರ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ವ್ಯಕ್ತಿಗೆ ಚೂರಿ ಇರಿತ: ಮನೆಯ ಮುಂದೆ ನಾಯಿ ಗಲೀಜು ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ ಚೂರಿ ಇರಿದ ಘಟನೆ ಕೋಟೆ ನಾಡು ಚಿತ್ರದುರ್ಗದಲ್ಲಿ ಭಾನುವಾರ (ಏಪ್ರಿಲ್14) ನಡೆದಿದೆ.
ಕೋಟ್ರೇಶಪ್ಪ ನಗರದ ಬರಗೇರಿಯಲ್ಲಿ ಈ ಘಟನೆ ನಡೆದಿದೆ. ನಾಯಿ ಹೊಲಸು ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಕೊಟ್ರೇಶಪ್ಪ(46) ವರ್ಷ ಎಂಬ ವ್ಯಕ್ತಿ ಚೂರಿ ಇರಿತಕ್ಕೆ ಒಳಗಾಗಿದ್ದು, ಗಾಯಾಳುವಿಗೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನವೀನ್ ಎಂಬುವರಿಗೆ ನಾಯಿ ಸೇರಿದ್ದು, ಕೊಟ್ರೇಶಪ್ಪ ಮನೆಯ ಮುಂದೆ ಗಲೀಜು ಮಾಡಿದೆ. ಇದನ್ನು ಕೊಟ್ರೇಶಪ್ಪ ಪ್ರಶ್ನೆ ಮಾಡಿದ್ದಾರೆ. ನಾಯಿ ಮಾಲೀಕ ನವೀನ್ ಹಾಗೂ ಪತ್ನಿ ತೇಜಸ್ವಿನಿ ಸೇರಿ ಕೊಟ್ರೇಶಪ್ಪ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.












Click it and Unblock the Notifications