Gopalaswami Hill: ಶ್ರಾವಣ ಶನಿವಾರ ಹಿನ್ನೆಲೆ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಭಕ್ತ ಸಾಗರ
Gopalswami Hill: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ದ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಇಂದು (ಆಗಸ್ಟ್ 17) ಶ್ರಾವಣ ಶನಿವಾರದ ಹಿನ್ನಲೆ ಭಕ್ತಾದಿಗಳ ದಂಡೆ ಹರಿದು ಬಂದಿತ್ತು. ಹಾಗಾದರೆ ಯಾವ್ಯಾವ ಭಾಗಗಳಿಂದ ಭಕ್ತರು ಬಂದಿದ್ದರು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಂಗಳೂರು, ಮೈಸೂರು, ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮದ ನೂರಾರು ಮಂದಿ ಭಕ್ತರು ಶ್ರಾವಣ ಮಾಸ ಪ್ರಯುಕ್ತ ಗೋಪಾಲಸ್ವಾಮಿ ಬೆಟ್ಟಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಬೆಳಗ್ಗೆ 12 ಗಂಟೆ ವೇಳೆ ಅಧಿಕ ಮಂದಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿದ ಹಿನ್ನೆಲೆ ಸರತಿ ಸಾಲಿನಲ್ಲಿ ನಿಂತು ಪೂಜೆ ಸಲ್ಲಿಕೆ ಮಾಡಿದರು. ಜೊತೆಗೆ ಗೋವಿಂದ, ಗೋಪಾಲ ಎಂಬ ಘೋಷಣೆ ಕೂಗಿ ದೇವರಿಗೆ ಭಕ್ತಿ ಸಮರ್ಪಿಸಿದರು.

ಶ್ರಾವಣ ಶನಿವಾರದ ಹಿನ್ನೆಲೆ ದೇವಸ್ಥಾನದ ಅರ್ಚಕ ಗೋಪಾಲಕೃಷ್ಣ ಭಟ್ ಗೋಪಾಲ ಸ್ವಾಮಿಗೆ ವಿವಿಧ ಬಗೆಯ ಅಭಿಷೇಕಗಳನ್ನು ನೆರವೇರಿಸಿ, ವಿಶೇಷ ಹೂವುಗಳಿಂದ ಅಲಂಕಾರ ಮಾಡಿ ಮಹಾ ಮಂಗಳಾರತಿ ಮಾಡಿದರು. ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗವನ್ನು ಸಹ ಏರ್ಪಡಿಸಲಾಗಿತ್ತು.
ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಲು ತಪ್ಪಲಿನಲ್ಲಿ ಕೆಎಸ್‍ಆರ್‌ಟಿಸಿ ವತಿಯಿಂದ 20ಕ್ಕೂ ಅಧಿಕ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಗೋಪಾಲಸ್ವಾಮಿ ದರ್ಶನ ಪಡೆಯಲು ತಮ್ಮ ಸ್ವಂತ ವಾಹನದಲ್ಲಿ ಆಗಮಿಸಿದ ಭಕ್ತಾದಿಗಳು ತಪ್ಪಲಿನ ಪಾರ್ಕಿಂಗ್‌ನಲ್ಲಿ ನಿಲ್ಲಿಸಿ ಬೆಟ್ಟಕ್ಕೆ ಸಾರಿಗೆ ಬಸ್‌ನಲ್ಲಿ ತೆರಳಿ ಪೂಜೆ ಸಲ್ಲಿಸಿದರು.
ಹರಿದುಬಂದ ಪ್ರವಾಸಿಗರ ದಂಡು: ಭಾರೀ ಮಳೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಲಮೂಲಗಳು ತುಂಬಿ ಹರಿಯುತ್ತಿವೆ. ಹಾಗೆಯೇ ಉತ್ತಮ ಮಳೆ ಹಾಗೂ ಕಾವೇರಿ ಹೊರಹರಿವಿನ ಪರಿಣಾಮ ಹನೂರು ತಾಲೂಕಿನ ಹೊಗೆನಕಲ್ ಜಲಪಾತ ಭೋರ್ಗರೆಯುತ್ತಿದ್ದು, ಕಾವೇರಿ ರುದ್ರ ನರ್ತನ ಕಾಣಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ.
ಭಾರತದ ನಯಾಗರ ಎಂದೇ ಕರೆಯುವ ಹೊಗೆನಕಲ್ ಜಲಪಾತದಲ್ಲಿ ಕಲ್ಲು ಬಂಡೆಗಳ ನಡುವೆ ನೀರು ಹರಿಯುವ ಜಲ ವೈಯ್ಯಾರ ಕಾಣಲು ಪ್ರವಾಸಿಗರ ದಂಡೇ ಹರಿದುಬಂದಿದ್ದು, ತೆಪ್ಪ ಸವಾರಿ ನಡೆಸಿ ಕಾವೇರಿ ಜಲವೈಭವ ಕಣ್ತುಂಬಿಕೊಂಡರು.
ತಮಿಳುನಾಡು ಮತ್ತು ಕರ್ನಾಟಕ ಎರಡು ಭಾಗದಲ್ಲಿ ಭಾನುವಾರ ಆದ್ದರಿಂದ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬಂದಿದ್ದು, ಭೋರ್ಗರೆದು ಹರಿಯುವ ಜಲರಾಶಿ ನಡುವೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿದ್ದು ಕಂಡುಬಂದಿತು. ಕಲ್ಲು ಬಂಡೆಗಳ ಮೇಲೆ ಕುಳಿತ ಪ್ರವಾಸಿಗರು ನೀರಿನ ರಭಸ ಕಂಡು ಬೆರಗಾಗಿದ್ದಾರೆ.
ಇನ್ನು ಅಪಾಯಕಾರಿ ಮಟ್ಟದಲ್ಲಿ ಕಾವೇರಿ ಹರಿಯುತ್ತಿರುವುದರಿಂದ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು. ಕೆಲ ದಿನಗಳಿಂದ ಪ್ರವಾಸಿಗರಿಗೆ ಅವಕಾಶ ನೀಡಿದ ಹಿನ್ನೆಲೆ ವೀಕೆಂಡ್‌ನಲ್ಲಿ ಪ್ರವಾಸಿಗರು ಮಜಾ ಮಾಡುತ್ತಿದ್ದಾರೆ.












Click it and Unblock the Notifications