ಕಾವೇರಿಗಾಗಿ ಮಹದೇಶ್ವರನಿಗೆ ಶರಣೆಂದ ಸಿಎಂ ಸಿದ್ದರಾಮಯ್ಯ

Posted By:
Subscribe to Oneindia Kannada

ಚಾಮರಾಜನಗರ, ಸೆ. 26: ಕಾವೇರಿ ನೀರಿನ ಸಮಸ್ಯೆ ಬಗೆಹರಿಸುವಂತೆ ಕೋರಿ ಮಲೆ ಮಹದೇಶ್ವರ ಸ್ವಾಮಿಗೆ ಸಿಎಂ ಸಿದ್ದರಾಮಯ್ಯ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಚಾಮರಾಜೇಶ್ವರ ಸೇವರಿಗೂ ಪೂಜೆ ಸಲ್ಲಿಸಿದ್ದರು.

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. [ ಕಾವೇರಿ ವಿವಾದ: ಗಡಿ ಭಾಗದ ಜನರ ಭಯ, ಬದುಕು ಹಾಗೂ ಬವಣೆ]

ನಂತರ ಕೊಳ್ಳೇಗಾಲ ತಾಲ್ಲೂಕಿನ ಹನೂರು ವಿಧಾನ ಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮಲೆ ಮಹದೇಶ್ವರ ದೇವಾಲಯ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಎಚ್.ಎಸ್. ಮಹದೇವ ಪ್ರಸಾದ್, ಎಚ್.ಸಿ.ಮಹದೇವಪ್ಪ, ಸಂಸದ ಆರ್. ಧ್ರುವನಾರಾಯಣ ಹಾಗೂ ಇತರರು ಹಾಜರಿದ್ದರು.

ಸಮಾಜವಾದದ ಹಿನ್ನಲೆಯಿಂದ ಬಂದಿರುವ ಸಿದ್ದರಾಮಯ್ಯ ಅವರು ಚಾಮರಾಜನಗರಕ್ಕೆ ಭೇಟಿ ನೀಡುವ ಮೂಲಕ ಮೂಢನಂಬಿಕೆಯನ್ನು ಅಳಿಸಿ ಹಾಕಿದರೆ, ಮತ್ತೊಂದೆಡೆ ಅಸ್ತಿಕರಂತೆ ದೇಗುಲದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ್ದಾರೆ. ಜನರ ಹಿತಕ್ಕಾಗಿ ದೇಗುಲಕ್ಕೆ ಭೇಟಿ ನೀಡಿದ್ದೇನೆ ಎಂದು ಈ ಹಿಂದೆ ಕೂಡಾ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ದೇಗುಲದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ್ದಾರೆ

ದೇಗುಲದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ್ದಾರೆ

ಸಮಾಜವಾದದ ಹಿನ್ನಲೆಯಿಂದ ಬಂದಿರುವ ಸಿದ್ದರಾಮಯ್ಯ ಅವರು ಚಾಮರಾಜನಗರಕ್ಕೆ ಭೇಟಿ ನೀಡುವ ಮೂಲಕ ಮೂಢನಂಬಿಕೆಯನ್ನು ಅಳಿಸಿ ಹಾಕಿದರೆ, ಮತ್ತೊಂದೆಡೆ ಅಸ್ತಿಕರಂತೆ ದೇಗುಲದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ್ದಾರೆ.

ಮಹದೇಶ್ವರ ಸ್ವಾಮಿ ದೇವಾಲಯ ಆವರಣದಲ್ಲಿ ಸಿಎಂ

ಮಹದೇಶ್ವರ ಸ್ವಾಮಿ ದೇವಾಲಯ ಆವರಣದಲ್ಲಿ ಸಿಎಂ

ಮಹದೇಶ್ವರ ಸ್ವಾಮಿ ದೇವಾಲಯ ಆವರಣದಲ್ಲಿ ಮಠಾಧೀಶರು ಹಾಗೂ ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ

ಈ ಹಿಂದೆ ಕೂಡಾ ಮಲೆ ಮಹದೇಶ್ವರ ದೇಗುಲಕ್ಕೆ ಭೇಟಿ

ಈ ಹಿಂದೆ ಕೂಡಾ ಮಲೆ ಮಹದೇಶ್ವರ ದೇಗುಲಕ್ಕೆ ಭೇಟಿ

ಈ ಹಿಂದೆ ಶಿವರಾತ್ರಿ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು

ಜನರ ಹಿತಕ್ಕಾಗಿ ದೇಗುಲಕ್ಕೆ ಭೇಟಿ ನೀಡಿದ್ದೇನೆ

ಜನರ ಹಿತಕ್ಕಾಗಿ ದೇಗುಲಕ್ಕೆ ಭೇಟಿ ನೀಡಿದ್ದೇನೆ

ಜನರ ಹಿತಕ್ಕಾಗಿ ದೇಗುಲಕ್ಕೆ ಭೇಟಿ ನೀಡಿದ್ದೇನೆ ಎಂದು ಈ ಹಿಂದೆ ಕೂಡಾ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು. 72 ಮಲೆಗಳ ಒಡೆಯ ಮಲೆ ಮಹದೇಶ್ವರನ ಪಾದಕ್ಕೆ ಉಘೇ ಉಘೇ ಎಂದು ಸಿದ್ದರಾಮಯ್ಯ ಹೇಳಿದರು.

ಹನೂರು ವಿಧಾನಸಭಾ ಕ್ಷೇತ್ರದ ಕಾರ್ಯ

ಹನೂರು ವಿಧಾನಸಭಾ ಕ್ಷೇತ್ರದ ಕಾರ್ಯ

ಹನೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
CM Siddaramaiah visit today visited Male Madeshwara Temple in Kollegeal, Chamarajanagar and offered special prayers in regard with Cauvery dispute.
Please Wait while comments are loading...