Darshan Thoogudeepa: ಮಲೆ ಮಾದಪ್ಪನ ಬಳಿ ವಿಶೇಷ ಬೇಡಿಕೆ ಇಟ್ಟ ನಟ ದರ್ಶನ್ ಅಭಿಮಾನಿಗಳು
Darshan Thoogudeepa: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಗ್ ಜೈಲು ಸೇರಿದೆ. ಇನ್ನು ಪೊಲೀಸರು ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹ ಮಾಡುತ್ತಲೇ ಇದ್ದು, ಇದರ ನಡುವೆಯೇ ಪತ್ನಿ ವಿಜಯಲಕ್ಷ್ಮಿ ಹಾಗೂ ಕುಟುಂಬಸ್ಥರು ದರ್ಶನ್ ಹೊರತರಲು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅಷ್ಟೆ ಅಲ್ಲದೆ, ಅಭಿಮಾನಿಗಳು ಸಹ ವಿಶೇಷ ಪೂಜೆಗಳನ್ನು ಮಾಡಿಸುತ್ತಲೇ ಇದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ಗಾಗಿ ಪತ್ನಿ ವಿಜಯಲಕ್ಷ್ಮಿ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆಗಳನ್ನು ಮಾಡಿಸುತ್ತಲೇ ಇದ್ದಾರೆ. ಇತ್ತೀಚೆಗಷ್ಟೇ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀರಿ ವಿಶೇಷ ಪೂಜೆ ಮಾಡಿಸಿ ಪ್ರಸಾದ ತಂದಿದ್ದರು. ಇದೀಗ ಭೀಮನ ಅಮಾವಾಸ್ಯೆ ಹಿನ್ನೆಲೆ ಇಂದು (ಆಗಸ್ಟ್ 04) ಅಭಿಮಾನಿಗಳು ಮಲೆ ಮಹದೇಶ್ವರ ಬೆಟ್ಟದಲ್ಲಿ ಬಂಧಿತ ಚಿತ್ರನಟ ದರ್ಶನ್ ಫೋಟೋಗೆ ಪೂಜೆ, ಆರತಿ ಮಾಡಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ದರ್ಶನ್ ಅಭಿಮಾನಿ ಭರತ್ ಎಂಬುವವರು ಹಾಗೂ ಇನ್ನಿತರ ಯುವಕರು ತೆಂಗಿನಕಾಯಿ ಆರತಿ ಬೆಳಗಿ ಪೂಜೆ ಮಾಡಿಸಿದ್ದಾರೆ. ಇದೇ ವೇಳೆ ಅಣ್ಣ ಬೇಗ ಹೊರಗಡೆ ಬರಲಿ ಎಂದು ಬೇಡಿಕೊಂಡಿದ್ದಾರೆ. ಇನ್ನು ಕೆಲ ಅಭಿಮಾನಿಗಳಂತೂ ಫ್ಯಾನ್ ವಾರ್ ಮಾಡುತ್ತಾ ಅಂಧಾಭಿಮಾನ ಮೆರೆಯುವ ಕೆಲಸವನ್ನು ಮಾಡುತ್ತಿದ್ದಾರೆ.
ಕುಮಾರ್ ಬಂಗಾರಪ್ಪ ಏನ್ ಹೇಳಿದ್ದೇನು?: ರೇಣುಕಾಸ್ವಾಮಿ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್‌ನನ್ನು ಪತ್ನಿ ವಿಜಯಲಕ್ಷ್ಮಿ ಹಾಗೂ ಕುಟುಂಬಸ್ಥರು ಹೊರತರಲು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮತ್ತೊಂದೆಡೆ ಪೊಲೀಸರು ಬಲವಾದ ಸಾಕ್ಷ್ಯಗಳನ್ನು ಸಂಗ್ರಹ ಮಾಡಲು ಮುಂದಾಗಿದ್ದಾರೆ. ಇನ್ನು ಕೆಲವರು ದರ್ಶನ್ ಪರ, ಇನ್ನು ಕೆಲವರು ವಿರೋಧವಾಗಿ ಚರ್ಚೆಗಳನ್ನು ಮಾಡುತ್ತಿದ್ದಾರೆ. ಹಾಗೆಯೇ ಇದೀಗ ಕುಮಾರ್ ಬಂಗಾರಪ್ಪ ಕೂಡ ಪ್ರತಿಕ್ರಿಯಿಸಿ ಶಾಕಿಂಗ್ ಹೇಳಿಕೆಯೊದನ್ನು ನೀಡಿದ್ದಾರೆ.
ರಾಜ್ಯದಲ್ಲಿ ಇಂತಹ ಘಟನೆ ನಡೆಯಲೇಬಾರದಿತ್ತು, ಆದರೆ ನಡೆದುಬಿಟ್ಟಿದೆ. ಚಿತ್ರರಂಗದಲ್ಲಿ ಹೊಗಳುವುದರ ಜೊತೆ ತೆಗಳುವ ಸನ್ನಿವೇಶಗಳು ಇರುತ್ತದೆ ಎಂದು ನಟ ಕುಮಾರ್ ಬಂಗಾರಪ್ಪ ಹೇಳಿದರು. ಅಲ್ಲದೆ, ರೇಣುಕಾಸ್ವಾಮಿ ಕುಟುಂಬಕ್ಕೆ ತುಂಬಲಾರದ ನಷ್ಟ ಆಗಿದೆ ಎಂದು ಹೇಳಿದರು.
ಇದೀಗ ಈ ಪ್ರಕರಣ ಕೋರ್ಟ್‌ನಲ್ಲಿದ್ದು, ಈ ಬಗ್ಗೆ ಮಾತಾಡುವುದು ಅಷ್ಟು ಸರಿಯಲ್ಲ. ದರ್ಶನ್ ಈ ಪ್ರಕರಣದಲ್ಲಿ ಆರೋಪಿಯಾಗಿದ್ದು, ತನಿಖೆ ನಡೆಯುತ್ತಿದೆ. ನ್ಯಾಯಾಲಯ ಇದೆ, ಕಾನೂನಿದೆ ಎಲ್ಲಾವನ್ನು ನೋಡಿಕೊಳ್ಳುತ್ತಾರೆ. ಚಿತ್ರರಂಗದಲ್ಲಿ ಯಾರಿಗೇ ನೋವಾದರೂ ಕುಟುಂಬದ ಎಲ್ಲಾರಿಗೂ ನೋವಾಗುತ್ತದೆ. ಈ ಘಟನೆ ದರ್ಶನ್ ಅವರಿಂದಲೇ ಆಗಿದ್ದರೆ, ಅದನ್ನು ನ್ಯಾಯಾಲಯ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.
ದೇವರು ಇದ್ದಾನೆ, ತಪ್ಪು ಮಾಡಿದವರಿಗೆ ಶಿಕ್ಷೆ ಕೊಟ್ಟು, ಅನ್ಯಾಯ ಆದವರಿಗೆ ನ್ಯಾಯ ಕೊಡಿಸುತ್ತಾನೆ. ನಾನು ಸಹ ದರ್ಶನ್ ಜೊತೆ ಒಂದು ಸಿನಿಮಾ ಮಾಡಿದ್ದೀನಿ. ಒಂದು ತಿಂಗಳ ದರ್ಶನ್ ಜೊತೆ ಕೆಲಸ ಮಾಡಿದೆ. ದರ್ಶನ್‌ಗೆ ಅವರದ್ದೇ ಆದಂತಹ ಆ್ಯಟಿಟ್ಯೂಡ್ ಇದೆ. ದರ್ಶನ್ ತನ್ನದೇ ಶ್ರಮದಿಂದ ಬೆಳೆದು ಸ್ಟಾರ್ ಆದವರು ಎಂದು ಹೇಳಿದರು.












Click it and Unblock the Notifications