ರಾತ್ರೋ ರಾತ್ರಿ ಪತ್ರಿಕಾಗೋಷ್ಠಿ ನಡೆಸಿ ವಿ.ಶ್ರೀನಿವಾಸ ಪ್ರಸಾದ್ ಅಳಿಯ ಏನು ಹೇಳಿದ್ರು ಗೊತ್ತಾ?
ಚಾಮರಾಜನಗರ, ಮಾರ್ಚ್, 18: ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರನ್ನುಮೂರನೇ ಅವಧಿಗೆ ಪ್ರಧಾನಿಯನ್ನಾಗಿ ಮಾಡಲು ಎಲ್ಲರು ಸಹ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿ ಎಸ್.ಬಾಲರಾಜು ಅವರ ಪರವಾಗಿ ಕೆಲಸ ಮಾಡಿ, ಲೋಕಸಭೆಗೆ ಕಳುಹಿಸುವಮೂಲಕ ಶಕ್ತಿ ತುಂಬೋಣ ಎಂದು ಬಿಜೆಪಿ ಪ್ರಮುಖ ಆಕಾಂಕ್ಷಿಯಾಗಿದ್ದ, ಸಂಸದ ವಿ.ಶ್ರಿನಿವಾಸಪ್ರಸಾದ್ ಅವರ ಅಳಿಯ ಡಾ.ಎನ್.ಎಸ್.ಮೋಹನ್ ತಿಳಿಸಿದ್ದಾರೆ.
ಈ ಕುರಿತು ಸೋಮವಾರ ರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ನಾನು ಒಬ್ಬ ಪ್ರಮುಖನಾಗಿದ್ದೆ. ವರಿಷ್ಟರು ಎಲ್ಲವನ್ನು ಪರಿಗಣಿಸಿ, ಅಂತಿಮವಾಗಿ ಎಸ್.ಬಾಲರಾಜು ಅವರಿಗೆ ಅವಕಾಶ ನೀಡಿದ್ದಾರೆ. ಅವರಿಗೆ ಮೊದಲು ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದರು.

ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ನಾನು ಸಹ ನನ್ನ ಸಮಯವನ್ನು ಕೊಡುವ ಜೊತೆಗೆ ಕ್ಷೇತ್ರದಲ್ಲಿ ಮುಖಂಡರೊಂದಿಗೆ ಪ್ರವಾಸ ಮಾಡಿ, ದೇಶದ ಅಭಿವೃದ್ದಿಗಾಗಿ ಮೋದಿ ಬೇಕು ಎಂಬುದನ್ನು ಮತದಾರರಿಗೆ ತಿಳಿಸುವ ಮೂಲಕ ನಮ್ಮ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಮತ್ತೊಮ್ಮೆ ದೆಹಲಿಗೆ ಕಳುಹಿಸಬೇಕಾಗಿದೆ ಎಂದಿದ್ದಾರೆ.
ಇದಕ್ಕಾಗಿ ಸಾಮಾನ್ಯ ಕಾರ್ಯಕರ್ತನಂತೆ ದುಡಿಯುವುದಾಗಿ ತಿಳಿಸಿದ್ದಾರೆ. ಕಳೆದ 7 ವರ್ಷಗಳಿಂದ ಕ್ಷೇತ್ರದಲ್ಲಿ ಸಕ್ರಿಯವಾಗಿ ಸಂಘಟನೆ ಮಾಡುವ ಜೊತೆಗೆ ಆರೋಗ್ಯ ಶಿಬಿರಗಳು, ಸಾಮಾಜಿಕ ಸೇವಾ ಕಾರ್ಯಗಳು ಮಾಡಿಕೊಂಡು, ಕ್ಷೇತ್ರದ ಜನರಿಗೆ ಚಿರಪರಿಚತನಾಗಿದ್ದೆ. ಮುಂದೆಯೂ ಸಹ ನನ್ನ ಸೇವೆಯನ್ನು ಮುಂದುವರೆಸಿಕೊಂಡು ಹೋಗುವ ಜೊತೆಗೆ ಬಿಜೆಪಿ ಸದಸ್ಯನಾಗಿರುತ್ತೇನೆ ಎಂದು ಹೇಳಿದ್ದಾರೆ.
ಸರ್ಕಾರಿ ಹುದ್ದೆಯನ್ನು ತ್ಯಜಿಸಿ ರಾಜಕೀಯ ಪಾರ್ದಾಪಣೆ ಮಾಡಿದ್ದೇನೆ. ಬಿಜೆಪಿ ದೇಶದ ದೊಡ್ಡ ಪಾರ್ಟಿ. ಅತಿ ದೊಡ್ಡ ಕಾರ್ಯಕರ್ತರ ಪಡೆಯನ್ನು ಹೊಂದಿದೆ. ರಾಷ್ಟ್ರೀಯ ವಿಚಾರ ಧಾರೆಗಳನ್ನು ಹೊಂದಿರುವ ಏಕೈಕ ಪಕ್ಷ. ವ್ಯಕ್ತಿಗಿಂತ ಪಕ್ಷದ ಮುಖ್ಯ. ಪಕ್ಷಕ್ಕಿಂತ ದೇಶ ಮುಖ್ಯ. ಅಭಿವೃದ್ದಿಯ ಆಧಾರದಲ್ಲಿ ಚುನಾವಣೆ ನಡೆಯುತ್ತಿದೆ.
ಹೀಗಾಗಿ ವೈಯಕ್ತಿಕ ಮನಸ್ತಾಪಗಳನ್ನು ಬದಿಗೊತ್ತಿ ಈ ಬಾರಿಯೂ ಬಿಜೆಪಿಯನ್ನು ಗೆಲ್ಲಿಸಬೇಕು. ಮೋದಿ ಅವರ ಕೈ ಬಪಡಿಸಲು ಎಲ್ಲರೂ ದುಡಿಯೋಣ. ನಾನು ರಾಜಕೀಯದಿಂದ ಹಿಂದೆ ಸರಿಯುವುದಿಲ್ಲ. ಎಂದಿನಂತೆ ಎಲ್ಲರ ಜೊತೆ ನಿರಂತರ ಸಂಪರ್ಕದಲ್ಲಿದ್ದು, ನನ್ನ ಕಾರ್ಯಚಟುವಟಿಕೆಗಳು ಕೂಡ ನಿರಂತರ ಆಗಿರುತ್ತದೆ ಎಂದು ಡಾ. ಎನ್.ಎಸ್.ಮೋಹನ್ ತಿಳಿಸಿದ್ದಾರೆ.
ಯಾರೂ ಶ್ರತ್ರುಗಳಿಲ್ಲ, ಮಿತ್ರರಿಲ್ಲ: ರಾಜಕಾರಣದಲ್ಲಿ ಯಾರು ಶತ್ರುಗಳಲ್ಲ, ಮಿತ್ರರಲ್ಲ. ಮುಂಬರುವ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರನ್ನು ಗೆಲ್ಲಿಸಲು ಹೃದಯ ಪೂರ್ವಕವಾಗಿ ಕೆಲಸ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ನಗರದ ನೆಹರೂ ಮೈದಾನದ ಎ.ಕೃಷ್ಣಪ್ಪ ರೋಟರಿ ಸಭಾಂಗಣದಲ್ಲಿ ಸೋಮವಾರ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ಪೂರ್ವಭಾವಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನನಗೂ ಚಿರಪರಿತರಾಗಿದ್ದ ಎ.ಕೃಷ್ಣಪ್ಪ ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಅಭಿವೃದಿ ಪರ ಕೆಲಸ ಮಾಡಿದ ವ್ಯಕ್ತಿ. ಆ ಹಿನ್ನೆಲೆ ಅವರ ಪುತ್ರಿ ಕೆ.ಪೂರ್ಣಿಮಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಕೃಷ್ಣಪ್ಪ ಅವರಿಗೆ ನಾನೇ ಟಿಕೆಟ್ ತಪ್ಪಿಸಿ ತಪ್ಪು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದರು.
ಈಗ ನಾವೆಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪಕ್ಷಕ್ಕಾಗಿ ದುಡಿಯೋಣ. ಅಹಂಕಾರ, ಹಣ ಯಾವುದು ಶಾಶ್ವತವಲ್ಲ. ಎಲ್ಲಾ ವರ್ಗದ ಜನರಿಗೂ ಸಾಮಾಜಿಕ ನ್ಯಾಯ ಕಲ್ಪಿಸುವ ಪಕ್ಷ ಕಾಂಗ್ರೆಸ್. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಭರದಿಂದ ಆರಂಭ ಆಗಿದೆ. ತಾಲೂಕಿನಲ್ಲಿ ಅಭಿವೃದ್ಧಿಗಾಗಿ ಒಂದಾಗಿ ಹೋಗೋಣ ಎಂದರು.
ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ, ಕಳೆದ 5 ವರ್ಷ ಬಿಜೆಪಿ ಶಾಸಕಿಯಾಗಿ ಸೇವೆ ಸಲ್ಲಿಸಿದ್ದೇನೆ. ನಾನು ಬೇರೆ ಪಕ್ಷದಿಂದ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ. ಆದ್ದರಿಂದ ಎರಡು ಪಕ್ಷದಲ್ಲಿದ್ದ ಕಾರ್ಯಕರ್ತರು ವಾದ-ವಿವಾದ, ಪಕ್ಷ ಸಮರ್ಥನೆ ಇನ್ನೀತರ ಕಾರಣಗಳಿಂದ ಭಿನ್ನಾಭಿಪ್ರಾಯ ತೋರದೆ ಏನೇ ವೈಮನಸ್ಸು ಇದ್ದರೂ ಎಲ್ಲಾವನ್ನು ಬದಿಗೊತ್ತಿ ನಾವೆಲ್ಲರೂ ಒಂದಾಗಬೇಕು. ಕಾಂಗ್ರೆಸ್ ವಿಶ್ವಾಸ, ನಂಬಿಕೆ ಇಟ್ಟುಕೊಂಡಿರುವ ಪಕ್ಷ ಎಂದರು. ಜಿಲ್ಲೆಯಲ್ಲಿ ಐದು ಜನರು ಕಾಂಗ್ರೆಸ್ ಪಕ್ಷದ
ಶಾಸಕರಿದ್ದಾರೆಂದು ಸುಮ್ಮನೆ ಕೂರದೇ ಕಾರ್ಯಕರ್ತರು ಮನೆ-ಮನೆಗೂ ತೆರಳಿ ಗ್ಯಾರಂಟಿ ಯೋಜನೆ ತಲುಪಿಸಿರುವ ಬಗ್ಗೆ ನೆನೆಸಿದರೆ ಲೋಕಸಭೆ ಹಾಗೂ ಆಗ್ನೇಯ ಶಿಕ್ಷಕರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧ್ಯ. ಅಭ್ಯರ್ಥಿ ಯಾರೇ ಆಗಲಿ ನಾವೆಲ್ಲಾ ಕಾಂಗ್ರೆಸ್ ಗೆಲುವಿಗೆ ಹೋರಾಡಬೇಕು. ಪಕ್ಷ ತಾಯಿ ಸಮಾನ, ಪಕ್ಷಕ್ಕೆ ಮೋಸ ಮಾಡಿದರೆ, ತಾಯಿಗೆ ಮೋಸ ಮಾಡಿದಂತೆ ಎಂದರು.
ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಮಾತನಾಡಿ, ಈ ಭಾಗದಲ್ಲಿ ಇಲ್ಲಿಯವರೆಗೂ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಗೆಲುವು ಸಾಧಿಸಿಲ್ಲ. ಆದ್ದರಿಂದ ಎಲ್ಲಾ ಕಾರ್ಯಕರ್ತರು ಕಾಂಗ್ರೆಸ್ ಗೆಲ್ಲಿಸಲು ಹಗಲಿರುಳೆನ್ನದೇ ಕಂಕಣ ಬದ್ಧರಾಗಿ ಕೆಲಸ ಮಾಡಬೇಕು. ಯುವಕರು ಅಂಧರು. ಅವರಿಗೆ ವಾಸ್ತು ಕಟುಸತ್ಯದ ಮೂಲಕ ಪಕ್ಷಕ್ಕೆ ಕರೆತರಬೇಕು ಎಂದರು.
ಲೋಕಸಭಾ ಚುನಾವಣೆಯಲ್ಲಿ ಸಿಎಂ ಮತ್ತು ಡಿಸಿಎಂ ಇಟ್ಟಿರುವ 20ಕ್ಷೇತ್ರಗಳ ಟಾರ್ಗೆಟ್‌ನಲ್ಲಿ ಚಿತ್ರದುರ್ಗ ಮೊದಲ ಸ್ಥಾನವಾಗಬೇಕು ಎಂದರು. ಈ ದೇಶದ ಅಭಿವೃದ್ದಿಗೆ ಶಿಕ್ಷಕರ ಕೊಡುಗೆ ಅಪಾರ. ಈಗಾಗಲೇ ಸಿಎಂ ಅವರು ಏಳನೇ ಆಯೋಗದ ವರದಿಯನ್ನು ಸ್ವೀಕರಿಸಿದ್ದಾರೆ. ಮುಂದಿನ ದಿನಗಳಲ್ಲಿ ವರದಿ ಅನುಷ್ಠಾನಕ್ಕೆ ಬರುವುದು ಹಾಗೂ ಓಪಿಎಸ್ ಜಾರಿಗೆ ತರುವುದು ನೂರಕ್ಕೆ ನೂರರಷ್ಟು ಸತ್ಯ. ಕರೊನಾ ವೇಳೆ ಖಾಸಗಿ ಶಿಕ್ಷಕರ ಸಮಸ್ಯೆ ನೋಡಿದ್ದೇವೆ. ಅನುದಾನಿತ ಶಿಕ್ಷಣ ಸಂಸ್ಥೆಗಳನ್ನು ಉಳಿಸುವ ಕೆಲಸ ಮಾಡಬೇಕು ಎಂದರು.












Click it and Unblock the Notifications