ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಷ ಪ್ರಸಾದ ದುರಂತದ ಸುಳ್ವಾಡಿ ಮಾರಮ್ಮ ದೇವಾಲಯ ಸರ್ಕಾರದ ವಶಕ್ಕೆ

|
Google Oneindia Kannada News

ಚಾಮರಾಜನಗರ, ಏಪ್ರಿಲ್ 09: ವಿಷ ಪ್ರಸಾದ ಪ್ರಕರಣದಿಂದ ದೇಶದಾದ್ಯಂತ ಸುದ್ದಿಯಾಗಿದ್ದ ಚಾಮರಾಜನಗರ ಜಿಲ್ಲೆಯ ಸುಳ್ವಾಡಿ ಮಾರಮ್ಮ ದೇವಾಲಯವನ್ನು ಸರ್ಕಾರ ಕೊನೆಗೆ ತನ್ನ ವಶಕ್ಕೆ ಪಡೆದುಕೊಂಡಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಕಳೆದ ಡಿಸೆಂಬರ್ ತಿಂಗಳಿನಲ್ಲಿ ಸ್ವಾಮೀಜಿ ಹಾಗೂ ಅವರ ಆಪ್ತರು ಸುಳ್ವಾಡಿಯ ಕಿಚ್ಚುಗುತ್ ಮಾರಮ್ಮ ದೇವಾಲಯದ ಪ್ರಸಾದಕ್ಕೆ ವಿಷ ಬೆರೆಸಿ 17 ಜನರನ್ನು ಕೊಂದಿದ್ದರು. ಇದು ದೇಶದಾದ್ಯಂತ ಸುದ್ದಿಯಾಗಿತ್ತು.

ಸುಳ್ವಾಡಿ ವಿಷ ಪ್ರಸಾದ ಪ್ರಕರಣ: 6163 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆಸುಳ್ವಾಡಿ ವಿಷ ಪ್ರಸಾದ ಪ್ರಕರಣ: 6163 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಈಗ ಈ ದೇವಾಲಯವನ್ನು ಸರ್ಕಾರವು ವಶಪಡಿಸಿಕೊಂಡಿದ್ದು, ಏಪ್ರಿಲ್ 4 ರ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ಸರ್ಕಾರವು ದೇವಾಲಯವನ್ನು ವಶಕ್ಕೆ ಪಡೆಯುವ ಬಗ್ಗೆ ಕಳೆದ ತಿಂಗಳೇ ಆದೇಶ ಹೊರಡಿಸಲಾಗಿತ್ತು.

State government take over Sulvadi Maramma temple

ಕಿಚ್ಚುಗುತ್ ಮಾರಮ್ಮ ದೇವಾಲಯವು ಇನ್ನು ಮುಂದೆ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿ ಬರಲಿದೆ. ದೇವಾಲಯದಲ್ಲಿನ ಆಂತರಿಕ ರಾಜಕೀಯದಿಂದ ಬಹುದೊಡ್ಡ ಅನಾಹುತ ಆಗಿರುವ ಕಾರಣ ನೀಡಿಯೇ ಧಾರ್ಮಿಕ ದತ್ತಿ ಇಲಾಖೆ ದೇವಾಲಯವನ್ನು ವಶಪಡಿಸಿಕೊಂಡಿದ್ದಾರೆ.

ವಿಷಪ್ರಸಾದ ಸೇವಿಸಿದ ಸಂತ್ರಸ್ತರ ಆಸ್ಪತ್ರೆ ಬಿಲ್ ಎಷ್ಟಾಗಿದೆ ಗೊತ್ತಾ? ವಿಷಪ್ರಸಾದ ಸೇವಿಸಿದ ಸಂತ್ರಸ್ತರ ಆಸ್ಪತ್ರೆ ಬಿಲ್ ಎಷ್ಟಾಗಿದೆ ಗೊತ್ತಾ?

ಸರ್ಕಾರವು ದೇವಾಲಯವನ್ನು ವಶಕ್ಕೆ ಪಡೆಯುವುದಕ್ಕೆ ದೇವಾಲಯದ ಟ್ರಸ್ಟಿಗಳು ಒಪ್ಪಿಗೆ ನೀಡಿದ್ದರು, ಎಲ್ಲ ಟ್ರಸ್ಟಿಗಳು ಹನೂರು ತಹಶೀಲ್ದಾರ್ ಸಮ್ಮುಖದಲ್ಲಿ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿ ದೇವಾಲಯವನ್ನು ಸರ್ಕಾರದ ಸುಪರ್ದಿಗೆ ಬಿಟ್ಟುಕೊಟ್ಟಿದ್ದಾರೆ.

English summary
State government took over Chamarajnagar's Sulvadi Maramma temple. All the trustis are agreed to the take over.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X