ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಆಯ್ತು: ಈಗ ಬಂಡೀಪುರ ಅರಣ್ಯದಲ್ಲೂ ಫ್ಲೈ ಓವರ್‌ ನಿರ್ಮಾಣ

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 2: ಬೆಂಗಳೂರಿನ ಗಗನಚುಂಬಿ ಕಟ್ಟಡಗಳ ಮಧ್ಯೆ ತಲೆ ಎತ್ತುತ್ತಿದ್ದ ಫ್ಲೈಓವರ್‌ಗಳು ಇನ್ನೂ ಕಾಡು ಪ್ರಾಣಿಗಳ ವಾಸಸ್ಥಾನವಾಗಿರುವ ಕರ್ನಾಟಕದ ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲೂ ತಲೆ ಎತ್ತಲಿವೆ ಎಂಬ ಸಂಗತಿ ಪರಿಸರ ವಾದಿಗಳಲ್ಲಿ ಆತಂಕ ಮೂಡಿಸಿವೆ.

ಜುಲೈ 21ರಂದು ಕೇಂದ್ರ ಸರ್ಕಾರ ಕರ್ನಾಟಕ ಸರ್ಕಾರಕ್ಕೆ ಪತ್ರ ಒಂದನ್ನು ಬರೆದಿದ್ದು, ಕರ್ನಾಟಕ ಹಾಗೂ ಕೇರಳಾ ಮಧ್ಯೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಗೆ ಸರಿಸುಮಾರು 35 ಕಿ.ಮೀ ಉದ್ದದ ಫ್ಲೈಓವರ್‌ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಮನವಿ ಮಾಡಿದೆ.

ಬಂಡೀಪುರ ಅರಣ್ಯದಲ್ಲಿ ರಾತ್ರಿ ವೇಳೆ ಉಪಟಳ: ಅರಣ್ಯ ಪ್ರಿಯರ ಬೇಸರ ಬಂಡೀಪುರ ಅರಣ್ಯದಲ್ಲಿ ರಾತ್ರಿ ವೇಳೆ ಉಪಟಳ: ಅರಣ್ಯ ಪ್ರಿಯರ ಬೇಸರ

ಈ ಕುರಿತಂತೆ ರಾಜ್ಯ ಸರ್ಕಾರ ಕೂಡ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ಅರಣ್ಯ ಪ್ರದೇಶದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಸಹಮತ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಈವರೆಗೆ ಕೇವಲ ನಗರ ಪ್ರದೇಶಕ್ಕೆ ಸೀಮಿತವಾಗಿದ್ದ ಫ್ಲೈಓವರ್‌ಗಳು ಶೀಘ್ರದಲ್ಲೇ ಅರಣ್ಯ ಪ್ರದೇಶದಲ್ಲೂ ತಲೆ ಎತ್ತಲಿದೆ.

Strong opposition to fly over in Bandipur national park for national highway

ರಾತ್ರಿ ವಾಹನ ಸಂಚಾರ ನಿಷೇಧದಿಂದ ಓಡಾಟಕ್ಕೆ ತೊಂದರೆಯಾಗುತ್ತಿದೆ, ಪೆಟ್ರೋ-ಡೀಸೆಲ್ ಹೆಚ್ಚು ಹೆಚ್ಚು ವೆಚ್ಚವಾಗುತ್ತದೆ ಎನ್ನುವ ವಾದ, ಈಗಿರುವ 15 ಮೀಟರ್‌ ನಷ್ಟು ಅಗಲೀಕರಣ, 1 ಕಿ.ಮೀ ದೂರದ 5 ಫ್ಲೈಓವರ್‌ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಫ್ಲೈಓವರ್‌ ನಿರ್ಮಾಣಗೊಂಡಿದ್ದೇ ಆದರೆ ದೇಶದ ಮೊಟ್ಟಮೊದಲ ಅರಣ್ಯ ಪ್ರದೇಶದ ಫ್ಲೈಓವರ್‌ ಎಂಬ ಕೀರ್ತಿಗೆ ಪಾತ್ರವಾಗಲಿದೆ. ಬಂಡೀಪುರ ಅರಣ್ಯದಲ್ಲಿ ಕೆಲವೆಡೆ ಫ್ಲೈಓವರ್‌ ನಿಮಾಣಕ್ಕೆ ಚಿಂತನೆ ನಡೆದಿದೆ ಕಾಡುಪ್ರಾಣಿ, ಪರಿಸರಕ್ಕೆ ಹಾನಿಯಾದಂತೆ ಕಾಮಗಾರಿ ಮಾಡುವ ಕುರಿತು ಚರ್ಚೆ ನಡೆಯಲಿದೆ ಎಂದು ಲೋಕೋಪಯೋಗಿ ಸಚಿವ ಎಚ್‌ಡಿ ರೇವಣ್ಣ ತಿಳಿಸಿದ್ದಾರೆ.

English summary
Central government has sought willingness to construction of fly over in Bandipur national park. But environmentalists are opposed this proposal saying it is anti natural act.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X