ಚಾಮರಾಜನಗರ: ಮೆಂದರೆ ಸೋಲಿಗರಿಗೆ ಪುನರ್ವಸತಿಗಾಗಿ ಸರ್ವೇ ಕಾರ್ಯ

ಚಾಮರಾಜನಗರ, ಮೇ, 27: ಮೆಂದರೆ ಹಾಡಿಯ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಉದ್ದೇಶದಿಂದ ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಸರ್ವೆ ಕಾರ್ಯ ನಡೆಸಿದ್ದಾರೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಂದಾರೆ ಬುಡಕಟ್ಟು ಸೋಲಿಗ ಸಮುದಾಯದ ಒತ್ತಾಯಿಸಿದ್ದರು.

ಇದೀಗ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪನಾಗ್ ಆದೇಶದ ಮೇರೆಗೆ ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಗ್ರಾಮದಲ್ಲಿ ಇಂದು (ಮೇ 27) ಮನೆ ಮನೆಗೆ ಭೇಟಿ ನೀಡಿ ಸಮಗ್ರ ಮಾಹಿತಿಯೊಂದಿಗೆ ಸಮೀಕ್ಷೆ ನಡೆಸಲು ಸರ್ವೆ ಕಾರ್ಯ ನಡೆಸಿದ್ದಾರೆ.

Survey for Rehabilitation to Mendare village s soligas

ಏಪ್ರಿಲ್ 26ರಂದು ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ ಪ್ರಕರಣ ಹಾಗೂ ಮೆಂದರೆ ನಿವಾಸಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆಯಿಂದ ಭಯಭೀತರಾಗಿ ತಮಗೆ ಬೇರೆ ಸ್ಥಳದಲ್ಲಿ ಪುನರ್ವಸತಿ ಕಲ್ಪಿಸಿಕೊಡಿ ಎಂದು ಒತ್ತಾಯಿಸಿದ್ದರು‌.

ಸೋಲಿಗರ ಒತ್ತಾಯದ ಮೇರೆಗೆ ಅಧಿಕಾರಿಗಳ ತಂಡ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮನೆ ಮನೆ ಭೇಟಿ ನೀಡಿ ಅವಶ್ಯವಿರುವ ಮಾಹಿತಿ, ವಿಸ್ತೃತವಾದ ವರದಿ ತಯಾರಿಸುತ್ತಿದ್ದಾರೆ.

ಭಯಭೀತರಾಗಿ ಕಾಡಿನಲ್ಲಿ ಅವಿತಿದ್ದ ಜನ: ಮತಗಟ್ಟೆ ಧ್ವಂಸ ಪ್ರಕರಣದಿಂದ ಭಯಭೀತರಾಗಿ ಕಾಡಿನಲ್ಲಿ ಅವಿತಿದ್ದ ಇಂಡಿಗನತ್ತ ಗ್ರಾಮಸ್ಥರಿಗೆ ಜಿಲ್ಲಾಡಳಿತವು ಧೈರ್ಯ ತುಂಬಿ ಮರಳಿ ಗ್ರಾಮಕ್ಕೆ ಕರೆತಂದಿದ್ದಾರೆ.

ಬಂಧನ ಭೀತಿಯಲ್ಲಿದ್ದ ಜನರನ್ನು ಊರಿಗೆ ಮರಳಿ ಕರೆತಂದು ಶಾಂತಿ ಸಭೆ ನಡೆಸಲಾಗಿದೆ. ಕಳೆದ ಏಪ್ರಿಲ್ 26ರ ಲೋಕಸಭಾ ಚುನಾವಣಾ ಮತದಾನ ದಿನದಂದು ಇಂಡಿಗನತ್ತ ಗ್ರಾಮಸ್ಥರು ಮೂಲ ಸೌಕರ್ಯಕ್ಕೆ ಆಗ್ರಹಿಸಿ ಮತಗಟ್ಟೆ ದ್ವಂಸ ಮಾಡಿದ್ದರು. ಈ ವೇಳೆ ಚುನಾವಣಾ ಅಧಿಕಾರಿ, ಸಿಬ್ಬಂದಿ ಹಾಗೂ ಮತ ಚಲಾಯಿಸಲು ಆಗಮಿಸಿದ್ದ ಮೆಂದಾರೆ ಗ್ರಾಮದ ಜನರ ಮೇಲೆ ಹಲ್ಲೆ ಮಾಡಿದ್ದರು.

ಬಳಿಕ ಬಂಧನಕ್ಕೆ ಒಳಗಾಗುವ ಭೀತಿಯಿಂದ ಗ್ರಾಮದ ಬಹುಪಾಲು ಮಂದಿ ಗ್ರಾಮ ತೊರೆದಿದ್ದರು. ಇದೀಗ ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾರ್ಗದರ್ಶನದಲ್ಲಿ ಅರಣ್ಯದಲ್ಲಿ ಅವಿತಿದ್ದ ಇಂಡಿಗನತ್ತ ಗ್ರಾಮಸ್ಥರಿಗೆ ಧೈರ್ಯ ತುಂಬಿ ಊರಿಗೆ ಕರೆತರುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಘಟನೆಗೆ ಕಾರಣವೇನು?: ಮಲೆ ಮಹದೇಶ್ವರ ಗ್ರಾಮ ಪಂಚಾಯಿತಿಗೆ ಸೇರಿದ ಇಂಡಿಗನತ್ತ, ಮೆಂದಾರೆ ,ತುಳಿಸಿಕರೆ, ತೇಕಣೆ, ಪಡಸಲನತ್ತ ಈ ಗ್ರಾಮಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸದೆ ಮತದಾರರು ದೂರ ಉಳಿದಿದ್ದರು‌.

ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ತುಳಿಸಿಕರೆಯ 480 ಮತದಾರರು, ಇಂಡಿಗನತ್ತ ಪೋಡಿನ 528 ಮತದಾರರು, ಪಡಸಲನತ್ತ ಪೋಡಿನ 298 ನಿವಾಸಿಗಳು ಮತದಾನದಿಂದ ದೂರ ಉಳಿದಿದ್ದರು. ತಮಗೆ ಮೂಲಸೌಕರ್ಯ ಕೊಡಬೇಕು ಇಲ್ಲದಿದ್ದರೇ ತಾವು ಮತ ಹಾಕುವುದಿಲ್ಲ ಎಂದು ಪಟ್ಟು ಹಿಡಿದಿದ್ದರು‌.

ವಿಚಾರ ಅರಿತ ಪೊಲೀಸ್ ಸಿಬ್ಬಂದಿ, ಚುನಾವಣಾ ಅಧಿಕಾರಿಗಳು ಮತದಾರರನ್ನು ಮನವೊಲಿಸಲು ತೆರಳಿದ್ದರು. ಈ ವೇಳೆ ಕೆಲವರನ್ನು ಮತದಾನಕ್ಕೆ ಮನವೊಲಿಸಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆ ಧ್ಚಂಸ ಮಾಡಿ, ಇವಿಎಂ ಹೊಡೆದು ಹಾಕಿ, ಕಲ್ಲು ತೂರಿದ್ದಾರೆ. ಈ ವೇಳೆ ಅಲ್ಲಿದ್ದ ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅಲ್ಲದೆ, ಮತಗಟ್ಟೆಯ ಬಾಗಿಲು, ಮೇಜು-ಕುರ್ಚಿ, ಇವಿಎಂ ಯಂತ್ರ ಇತರೆ ಪರಿಕರಗಳನ್ನು ಧ್ವಂಸ ಮಾಡಿ ಬೆಂಕಿ ಹಚ್ಚುವ ಯತ್ನ ಮಾಡಿದ್ದಾರೆ. ಇನ್ನು ಈ ಘಟನೆ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಎಎಸ್ಪಿ ಉದೇಶ್ ಭೇಟಿ ಕೊಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+