ಕೇರಳದಲ್ಲಿ ಹೆಚ್ಚಾಗುತ್ತಿರುವ ಹಂದಿ ಜ್ವರ, ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹೈ ಅಲರ್ಟ್
ಚಾಮರಾಜನಗರ, ಸೆಪ್ಟೆಂಬರ್, 05: ಕೇರಳದಲ್ಲಿ ಹಂದಿ ಜ್ವರ ಹೆಚ್ಚಾಗುತ್ತಿರುವ ಹಿನ್ನೆಲೆ ಗಡಿ ಜಿಲ್ಲೆ ಚಾಮರಾಜನಗರದ ಜನರಲ್ಲಿ ಆತಂಕ ಹೆಚ್ಚಾಗಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಕೇರಳ ಗಡಿಯಲ್ಲಿ ಪಶು ಇಲಾಖೆ ಅಲರ್ಟ್ ಆಗಿದ್ದು, ವಾಹಗಳಿಗೆ ಸ್ಯಾನಿಟೈಸ್ ಮಾಡಿ ಕಳುಹಿಸುತ್ತಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್ ಪೋಸ್ಟ್‌ನಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಅಲರ್ಟ್ ಆಗಿದ್ದು, ಕೇರಳದಿಂದ ಕರ್ನಾಟಕಕ್ಕೆ ಬರುವ ವಾಹನಗಳ ಮೇಲೆ ನಿಗಾ ಇಟ್ಟಿದ್ದಾರೆ. ಅಲ್ಲದೆ ಕೇರಳದ ಕಡೆಯಿಂದ ಬರುವ ವಾಹನಗಳಿಗೆ ಸ್ಯಾನಿಟೈಸ್ ಮಾಡಲಾಗುತ್ತಿದೆ.

ಈ ವೈರಲ್ ಫೀವರ್ ಕೊರೊನಾ ವೈರಸ್‌ನಂತೆ ಬೇಗ ಹರಡುತ್ತದೆ. ಇದು ಕಾಡು ಹಂದಿಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಇದರಿಂದ ಹಂದಿಗಳು ಸಾವನ್ನಪ್ಪುವ ಸಾಧ್ಯತೆಗಳು ಹೆಚ್ಚಾಗಿದೆ. ಅಲ್ಲದೆ ಈ ವೈರಸ್ ಹಂದಿಗಳಿಂದ ಬೇರೆ ಕಾಡು ಪ್ರಾಣಿಗಳಿಗೂ ಹರಡುವ ಭೀತಿ ಎದುರಾಗಿದೆ. ಆದ್ದರಿಂದ ಜ್ವರ ಹರಡದಂತೆ ಪಶು ಇಲಾಖೆ ಮುನ್ನೆಚ್ಚರಿಕಾ ಕ್ರಮಕ್ಕೆ ಮುಂದಾಗಿದೆ.












Click it and Unblock the Notifications