ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ: ಐವರು ಭಕ್ತರ ಸಾವು
ಚಾಮರಾಜನಗರ, ಮಾರ್ಚ್, 01: ಕಾರು ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನಲ್ಲಿ ಚಿಕ್ಕಿಂದುವಾಡಿ ಬಳಿಯ ಮುಖ್ಯ ರಸ್ತೆಯಲ್ಲಿ ಇಂದು (ಮಾರ್ಚ್ 01) ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ, ಕಾರಿನಲ್ಲಿದ್ದ ಮೂವರು ಪುರುಷರು, ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಇವರು ಮಂಡ್ಯ ಮೂಲದವರು ಎಂದು ತಿಳಿದುಬಂದಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವದ ನಡೆಯುತ್ತಿದ್ದು, ಈ ಮಹಾ ರಥೋತ್ಸವದಲ್ಲಿ ಪಾಲ್ಗೊಳ್ಳಲು ಇವರು ಕಾರಿನಲ್ಲಿ ತೆರಳುತ್ತಿದ್ದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
8 ಜನ ಸಾವು: ಲಾರಿ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ 8 ಜನ ಸಾವನ್ನಪ್ಪಿದ್ದ, 33 ಮಂದಿ ಭೀಕರವಾಗಿ ಗಾಯಗೊಂಡ ಘಟನೆ ಕೆಲವು ತಿಂಗಳುಗಳ ಹಿಂದೆಯಷ್ಟೇ ಧ್ರಪ್ರದೇಶದಲ್ಲಿ ನಡೆದಿತ್ತು.
ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಮೊಘಲಿ ಘಾಟ್ ರಸ್ತೆಯಲ್ಲಿ ಎರಡು ಲಾರಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 30 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿತ್ತು. ಗಾಯಾಳುಗಳನ್ನು ಚಿತ್ತೂರು ಜಿಲ್ಲೆಯ ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿತ್ತು.
ಮಾಹಿತಿ ತಿಳಿದ ತಕ್ಷಣವೇ ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದ್ದರು. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸಲಾಗುತ್ತಿದೆ. ಇನ್ನು ತನಿಖೆ ಆರಂಭಿಸಲು ಪ್ರಕರಣ ದಾಖಲಿಸಲಾಗಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿತ್ತು.
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ಈ ಭೀಕರ ಅಪಘಾತ ಸಂಭವಿಸಿದ್ದು, ಪ್ರತ್ಯಕ್ಷದರ್ಶಿಗಳ ಪ್ರಕಾರ, ಪಲಮನೇರು ಕಡೆಯಿಂದ ಚಿತ್ತೂರು ಕಡೆಗೆ ಹೋಗುತ್ತಿದ್ದ ಸರ್ಕಾರಿ ಸಾರಿಗೆ ಬಸ್ ಮೊಗಿಲಿ ಘಾಟ್ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಳಿಕ ಅದೇ ರಸ್ತೆಯಲ್ಲಿ ಕಬ್ಬಿಣದ ಲೋಡ್‌ನೊಂದಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಎರಡು ವಾಹನಗಳು ಮತ್ತೊಂದು ಟೆಂಪೋಗೆ ಡಿಕ್ಕಿ ಹೊಡೆದಿದ್ದರಿಂದ ಅಪಘಾತದ ತೀವ್ರತೆ ಹೆಚ್ಚಿದೆ ಎನ್ನಲಾಗಿದೆ.
ಮೂವರು ಸಾವು: ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿತ್ತು. ಜಿಲ್ಲೆಯ ಚಿಕ್ಕಬೆನ್ನೂರು ಬಳಿ ಈ ಘಟನೆ ನಡೆದಿದ್ದು, ಅಪಘಾತ ರಭಸಕ್ಕೆ ಮೂವರು ಸ್ಥಳದಲ್ಲಿ ಅಸುನಿಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪ್ರಜ್ವಲ್ ರೆಡ್ಡಿ (30 ವರ್ಷ), ಹರ್ಷಿತಾ (28 ವರ್ಷ) ಮತ್ತು ಮಗು ಸೋಹನ್ (2 ವರ್ಷ) ಮೃತ ದುರ್ದೈವಿಗಳಾಗಿದ್ದಾರೆ. ಗಾಯಗೊಂಡವರನ್ನು ಶಿಲ್ಪ, ಸ್ವರ್ಣ ಜಾರ್ಜ್, ಮಧುಮಿತ, ವಿಜಯ್ ರೆಡ್ಡಿ, ಕೃಷ್ಣ, ಎಂದು ಗುರುತಿಸಲಾಗಿದೆ.
ಚಲಿಸುತ್ತಿದ್ದ ಲಾರಿಯ ಟಯರ್ ಬ್ಲಾಸ್ಟ್ ಆಗುತ್ತಿದ್ದಂತೆ, ವೇಗವಾಗಿ ಹಿಂಬದಿಯಿಂದ ಬಂದ ಫಾರ್ಚೂನರ್ ಕಾರು ಲಾರಿಗೆ ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಚಲಿಸುವಾಗ ಈ ಘಟನೆ ನಡೆದಿತ್ತು ಎಂದು ತಿಳಿದುಬಂದಿತ್ತು.












Click it and Unblock the Notifications