'ಬಿಜೆಪಿ, ಆರ್ ಎಸ್ ಎಸ್, ಬಜರಂಗದಳದವರೇ ಉಗ್ರಗಾಮಿಗಳು'

Posted By:
Subscribe to Oneindia Kannada

ಚಾಮರಾಜನಗರ, ಜನವರಿ 10: 'ಬಿಜೆಪಿ, ಆರ್ ಎಸ್ ಎಸ್, ಬಜರಂಗದಳದವರೇ ಉಗ್ರಗಾಮಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿ ಚರ್ಚಗೆ ಗ್ರಾಸವಾಗಿದ್ದಾರೆ.

ಬುಧವಾರ ಚಾಮರಾಜನಗರ ಜಿಲ್ಲೆಯಲ್ಲಿ ನಡೆಯುವ ನವ ಕರ್ನಾಟಕ ನಿರ್ಮಾಣ ಯಾತ್ರೆಗೆ ತೆರಳುತ್ತಿದ್ದ ವೇಳೆ ನಾಗವಳ್ಳಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, "ಬಿಜೆಪಿ, ಆರ್ ಎಸ್ ಎಸ್, ಬಜರಂಗದಳದವರೇ ಉಗ್ರಗಾಮಿಗಳು. ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಹರಿಹಾಯ್ದರು.

ಚಾಮರಾಜನಗರ ಜಿಲ್ಲೆಗೆ ಸಿದ್ದರಾಮಯ್ಯ ಸರ್ಕಾರ ಕೊಟ್ಟಿರುವುದೇನು?

The BJP, RSS and the Bajrang Dal are the terrorists says cm Siddaramaiah in Nagavalli

ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗೆ ಕೋಮುವಾದಿಗಳೇ ಕಾರಣ ಎಂದು ಹೇಳಿತ್ತಾ ಬಂದಿದ್ದ ಸಿದ್ದರಾಮಯ್ಯ ಅವರು ಇಂದು ಬಿಜೆಪಿ, ಆರ್ ಎಸ್ ಎಸ್, ಬಜರಂಗದಳದವರೇ ಉಗ್ರಗಾಮಿಗಳು ಎಂದು ನೇರವಾಗಿ ಹೇಳುವ ಮೂಲಕ ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಿದ್ದರಾಮಯ್ಯ ಅವರ ಈ ಹೇಳಿಕೆ ತೀವ್ರ ತರಹನಾದ ಚರ್ಚಗೆ ಗ್ರಾಸವಾಗಿದೆ.

ಸಂಕ್ರಾಂತಿ ವಿಶೇಷ ಪುಟ

ಸಂಸದೆ ಶೋಭಾ ಕರಾಂದ್ಲಾಜೆ ಕೂಡ ಭಯೋತ್ಪಾದಕಿ, ಹೋದಲೆಲ್ಲ ಕೋಮು ಪ್ರಚೋದನೆ ಮಾತುಗಳನೆಲ್ಲ ಹಾಡುತ್ತಿದ್ದಾರೆ. ಯಾರು ಕೋಮು ಸೌಹಾರ್ದತೆ ಕದಡುವವರೆಲ್ಲರೂ ಭಯೋತ್ಪಾದಕರೇ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಸಿದ್ದರಾಮಯ್ಯ ಅವರ ಹೇಳಿಕೆಗೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆಕ್ರೋಶ ವ್ಯಕ್ತಪಡಿಸಿದ್ದು, ಈ ಹೇಳಿಕೆ ಅವರಿಗೆ ಶೋಭೆ ತರುವಂತಿಲ್ಲ. ಹೇಳಿಕೆಯನ್ನು ಹಿಂಪಡಿಯಬೇಕೆಂದು ಭಟ್ ಆಗ್ರಹಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
CM Siddaramaiah lashes out at BJP, RSS & BajrangDal, calls their workers terrorists. He further slammed BJP and stated that BJP doesn't have a moral right to speak about Congress he said in Nagavalli helipad, Chamarajanagar district today.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ