ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜನಗರದಲ್ಲಿ ಟಿಪ್ಪು ಜಯಂತಿಗೆ ಬಿಗಿಬಂದೋಬಸ್ತ್

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ನವೆಂಬರ್ 10: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಇಂದು ಜಿಲ್ಲಾಡಳಿತ ಹಮ್ಮಿಕೊಂಡಿರುವ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಶಾಂತಿಯುತವಾಗಿ ನಡೆಸುವ ಸಲುವಾಗಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಮಾಡಿದೆ.

Updates : ಕರ್ನಾಟಕ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆUpdates : ಕರ್ನಾಟಕ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ

ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೇರಿದಂತೆ 779 ಮಂದಿಯನ್ನು ನಿಯೋಜನೆ ಮಾಡಲಾಗಿದ್ದು, 10 ಡಿಎಆರ್ ಹಾಗೂ 03 ಕೆಎಸ್‍ಆರ್‍ಪಿ ತುಕಡಿಯನ್ನು ನಿಯೋಜಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾರವರ ಮಾರ್ಗದರ್ಶನದಲ್ಲಿ ಜಿಲ್ಲೆಯ ನಾಲ್ಕು ತಾಲೂಕಿನಲ್ಲೂ ಪೊಲೀಸ್ ಪಥ ಸಂಚಲನ ನಡೆಲಾಗಿದೆ. ಬಿಗಿ ಬಂದೋಬಸ್ತ್ ಗಾಗಿ 3 ಡಿಎಸ್ ಪಿ 07 ಪೊಲೀಸ್ ಇನ್ಸ್ ಪೆಕ್ಟರ್, 13 ಸಬ್‍ಇನ್ಸ್ ಪೆಕ್ಟರ್, 62 ಎಎಸ್ ಐ, 283 ಮುಖ್ಯಪೇದೆಗಳು, 34 ಮಹಿಳಾ ಪೊಲೀಸ್ ಸಿಬ್ಬಂದಿ ಮತ್ತು 320 ಹೋಂ ಗಾರ್ಡ್‍ಗಳನ್ನು ನಿಯೋಜನೆ ಮಾಡಲಾಗಿದೆ.

ಟಿಪ್ಪು ಜಯಂತಿ: ಕೊಡಗಿನಲ್ಲಿ ಖಾಕಿ ಸರ್ಪಗಾವಲು! ಟಿಪ್ಪು ಜಯಂತಿ: ಕೊಡಗಿನಲ್ಲಿ ಖಾಕಿ ಸರ್ಪಗಾವಲು!

The most controversial Tippu Jayanti celebration is taking place in Chamarajanagar

ಜಿಲ್ಲಾ ಕೇಂದ್ರದ ನಾಲ್ಕೂ ದಿಕ್ಕುಗಳಲ್ಲಿ ಪೊಲೀಸ್ ಬ್ಯಾರಿಕೇಡ್ ಹಾಕಿ ಎಲ್ಲ ವಾಹನಗಳನ್ನು ತಪಾಸಣೆ ಮಾಡುವ ಕಾರ್ಯವನ್ನು ಮಾಡಲಾಗುತ್ತಿದ್ದು, ಹೊರಗಿನ ವ್ಯಕ್ತಿಗಳ ಆಗಮನದ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ.

In Pics : ಟಿಪ್ಪು ಸುಲ್ತಾನ್ ಯಾರಂತ ಗೊತ್ತಾ ಪುಟ್ಟಾ?

The most controversial Tippu Jayanti celebration is taking place in Chamarajanagar

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಹೆಚ್. ಪಟೇಲ್ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ನಡೆಯಲಿದೆ.

English summary
The most controversial Tippu Jayanti celebration is taking place in Chamarajanagar district with police protection. The district administration takes precautionary measures to avoid violance and unhealthy incidents.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X