ಚಾಮರಾಜನಗರ: ಹುಲಿ ದಾಳಿಯಿಂದ ವ್ಯಕ್ತಿಯೋವರ್ನಿಗೆ ಗಂಭೀರ ಗಾಯ
ಚಾಮರಾಜನಗರ, ಜೂನ್, 10: ಚಾಮರಾಜನಗರ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿಬಿಟ್ಟಿದೆ. ಹಾಗೆಯೇ ಇದೀಗ ಹುಲಿಯೊಂದು ವ್ಯಕ್ತಿಯೊಬ್ಬನ ಮೇಲೆ ದಾಳಿ ನಡೆಸಿದ ಘಟನೆ ಬಿಳಿಗಿರಿ ರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಬೇಡಗುಳಿ ಸಮೀಪದ ರಾಮಯ್ಯನ ಪೋಡಿ ಎಂಬ ಸ್ಥಳದಲ್ಲಿ ನಡೆದಿದೆ.
ಚಾಮರಾಜನಗರ ತಾಲೂಕಿನ ಪುಣಜನೂರು ಗ್ರಾ.ಪಂ. ವ್ಯಾಪ್ತಿಯ ಬೇಡಗುಳಿಯ ರಾಮಯ್ಯನ ಪೋಡಿಯಲ್ಲಿ ಸೋಮವಾರ ಸಂಜೇ ವೇಳೆಗೆ ರವಿ(34) ಎಂಬುವವರ ಮೇಲೆ ಹುಲಿ ದಾಳಿ ನಡೆಸಿದ್ದು, ಇದರಿಂದ ರವಿ ಅವರ ತಲೆ, ಕೈ ಹಾಗೂ ಕಾಲುಗಳಿಗೆ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯರ ಮಾಹಿತಿ ಮೇರೆಗೆ ಘಟನೆ ವಿಚಾರ ತಿಳಿದ ಅರಣ್ಯ ಇಲಾಖೆಯ ಚಾಮರಾಜನಗರ ವೃತ್ತ ಅರಣ್ಯಾಧಿಕಾರಿ ಹಿರಲಾಲ್, ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ ಸ್ಥಳಕ್ಕೆ ಆಗಮಿಸಿ ರವಿ ಅವರನ್ನು ಚಾಮರಾಜನಗರ ಸರ್ಕಾರಿ ಭೋದನಾ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಹುಲಿ ದಾಳಿ ನಡೆಸಿದ ಸ್ಥಳದ ಸುತ್ತಮುತ್ತ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರ ಓಡಾಟಕ್ಕೆ ನಿಷೇಧ ಹೇರಲಾಗಿದೆ. ಅಲ್ಲದೆ ಈಗಾಗಲೇ ಹುಲಿ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆಯನ್ನು ಆರಂಭಿಸಿದೆ. ಇನ್ನು ಇಲ್ಲಿ ವಾಸ ಮಾಡುವ ಕುಟುಂಬಗಳಿಗೆ ಹುಲಿ ಸೆರೆಯಾಗುವವರೆಗೂ ತಾತ್ಕಾಲಿಕವಾಗಿ ಆಶ್ರಮ ಶಾಲೆಯಲ್ಲಿ ಆಶ್ರಯ ನೀಡುವಂತೆ ನಿವಾಸಿಗಳು ಮನವಿ ಮಾಡಿದ್ದಾರೆ.
ಭಯ ಹುಟ್ಟಿಸಿದ ಚಿರತೆ: ಇತ್ತೀಚಿಗೆ ಬೆಂಗಳೂರಿನ ತಲಘಟ್ಟಪುರ ಮತ್ತು ಮಲ್ಲಸಂದ್ರ ಸುತ್ತಮುತ್ತ ಕಾಣಿಸಿಕೊಂಡಿತ್ತು. ಚಿರತೆ ಓಡಾಡಿರುವುದರ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ಕೊಟ್ಟಿದ್ದರು. ಸ್ಥಳೀಯರ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ನಾಲ್ಕೈದು ಕಡೆ ಕ್ಯಾಮರಾ ಅಳವಡಿಕೆ ಮಾಡಿದ್ದರು.
ಇದೇ ಮೊದಲೇನಲ್ಲ ಈ ಹಿಂದೆಯೂ ಸಗ ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಜನರು ಆತಂಕಕ್ಕೆ ಕಾರಣವಾಗಿತ್ತು. ಈ ಸಂಬಂಧ ಅರಣ್ಯ ಇಲಾಖೆ ಚಿರತೆಗಳ ಸೆರೆ ಹಿಡಿದು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ರವಾನಿಸಿತ್ತು.
ನಗರದಲ್ಲಿ ಸುಮಾರು 80ಕ್ಕೂ ಹೆಚ್ಚು ಚಿರತೆಗಳು ಕಾಣಿಸಿಕೊಂಡಿರುವ ಅಂಶ ಅಧ್ಯಯನವೊಂದರಲ್ಲಿ ಬಹಿರಂಗಗೊಂಡಿದೆ. ಈ ಅಧ್ಯಯನ ವರದಿಯ ನಗರದ ಸುತ್ತಮುತ್ತಲ ಕಿರು ಅರಣ್ಯಗಳು ಚಿರತೆಗಳಿರುವುದು ಗೊತ್ತಾಗಿದೆ. ಒಂದು ವರ್ಷಕ್ಕೂ ಹೆಚ್ಚಿನ ಕಾಲದಿಂದ ವನ್ಯ ಜೀವಿ ತಜ್ಞರಾದ ಡಾ.ಸಂಜಯ್ ಗುಬ್ಬಿ ನೇತೃತ್ವದ ಹೊಳೆಮತ್ತಿ ನೇಚರ್ ಫೌಂಡೇಶನ್ನ ತಂಡದವರು ನಡೆಸಿದ ಅಧ್ಯಯನದ ಪ್ರಕಾರ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ಸೇರಿ ಬೆಂಗಳೂರಿನ ಸುತ್ತಮುತ್ತ ಸುಮಾರು 80ರಿಂದ 85 ಚಿರತೆಗಳಿರಬಹುದು ಎಂದು ಅಂದಾಜು ಮಾಡಿದೆ ಎಂದು ತಿಳಿದುಂದಿದೆ.












Click it and Unblock the Notifications