ಬಂಡೀಪುರ: ಕಾದಾಟದಲ್ಲಿ ಗಾಯಗೊಂಡಿದ್ದ "ಹುಲಿ"ರಾಯ ಸಾವು
ಚಾಮರಾಜನಗರ, ನವೆಂಬರ್, 24: ಕಾದಾಟದಲ್ಲಿ ಗಾಯಗೊಂಡು ನಿತ್ರಾಣಗೊಂಡಿದ್ದ ಸುಮಾರು 3 ವರ್ಷದ ಗಂಡು ಹುಲಿಯೊಂದು ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಕಾಲೋನಿಯ ದೊಡ್ಡಕರಿಯಯ್ಯ ಎಂಬುವರ ಜಮೀನಿನಲ್ಲಿ ಶುಕ್ರವಾರ ನಡೆದಿದೆ.
ಕಾಡಿನೊಳಗೆ ವನ್ಯಪ್ರಾಣಿಗಳ ಕಾದಾಟದಿಂದ ಸುಮಾರು 3 ವರ್ಷದ ಗಂಡು ಹುಲಿಯ ತಲೆ ಮತ್ತು ಮೈಮೇಲೆ ತೀವ್ರ ಪೆಟ್ಟಾಗಿತ್ತು. ಇದರಿಂದ ಹುಲಿಯು ಸಂಪೂರ್ಣವಾಗಿ ನಿತ್ರಾಣಗೊಂಡು ನಡೆಯಲಾರದ ಸ್ಥಿತಿಗೆ ತಲುಪಿತ್ತು. ಇದರ ಮಾಹಿತಿ ಅರಿತ ಅರಣ್ಯ ಅಧಿಕಾರಿಗಳು ಮತ್ತು ಪಶು ವೈದ್ಯ ವಾಸಿಂ ಮಿರ್ಜಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದರು. ಆದರೆ ಸೆರೆಗೂ ಮುನ್ನ ಹುಲಿ ಮರಣ ಹೊಂದಿದೆ ಎಂದು ತಿಳಿದುಬಂದಿದೆ.

ಬಂಡೀಪುರ ಹುಲಿ ಯೋಜನೆಯ ನಿರ್ದೇಶಕರಾದ ಡಾ.ರಮೇಶ್ ಕುಮಾರ್ ಮಾರ್ಗದರ್ಶನದಲ್ಲಿ ಮೃತ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ನಿಯಮದಂತೆ ಕ್ರಮ ಜರುಗಿಸಲಾಗಿದೆ.
ನಾಡಿನತ್ತ ಬಂದ ಕಾಡಾನೆ
ಇನ್ನು ಇತ್ತೀಚೆಗಷ್ಟೇ ನೀರಿನ ಅಭಾವ ಕೇವಲ ನಾಡಲ್ಲಿ ಮಾತ್ರವಲ್ಲದೇ ಕಾಡಲ್ಲೂ ಕಾಣಿಸಿಕೊಂಡಿದೆ ಎಂಬುದಕ್ಕೆ ರಸ್ತೆಬದಿ ನಿಂತಿದ್ದ ನೀರು ಕುಡಿದ ಈ ಆನೆಯೇ ಸಾಕ್ಷಿ. ಹನೂರು ತಾಲೂಕಿನಲ್ಲಿ ಸಮರ್ಪಕ ಮಳೆಯಾಗದ ಹಿನ್ನೆಲೆ ಜಮೀನಿನಲ್ಲಿ ಹಾಕಿರುವ ಫೈರುಗಳು ಒಣಗಿರುವುದು ಒಂದೆಡೆಯಾದರೆ, ಅರಣ್ಯದಲ್ಲಿ ಕೆರೆಕಟ್ಟೆಗಳು ಖಾಲಿಯಾಗಿರುವುದರಿಂದ ವನ್ಯ ಪ್ರಾಣಿಗಳು ನಾಡಿನತ್ತ ಬರಲು ಪ್ರಾರಂಭಿಸಿದೆ. ಮಲೆ ಮಹದೇಶ್ವರ ಬೆಟ್ಟದಿಂದ ಪಾಲಾರ್ ಕಡೆಗೆ ತೆರಳುವ ರಸ್ತೆಯಲ್ಲಿ ಕಾಡಿನಿಂದ ಹೊರಬಂದ ಆನೆಯೊಂದು ರಸ್ತೆಬದಿ ನಿಂತಿದ್ದ ಹಳ್ಳದ ನೀರನ್ನು ಕುಡಿದು ದಣಿವಾರಿಸಿಕೊಂಡಿತ್ತು. ಇನ್ನು ಆನೆ ನೀರು ಕುಡಿಯುವುದನ್ನು ವಾಹನ ಸವಾರರೋರ್ವ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಸದ್ಯ ಈ ವಿಡಿಯೋ ಭಾರೀ ವೈರಲ್ ಆಗಿತ್ತು.
ಆಗೊಮ್ಮೆ ಈಗೊಮ್ಮೆ ಕಾಣಸಿಗುತ್ತವೆ ಅಚ್ಚರಿಗಳು
ಚಾಮರಾಜನಗರ ಜಿಲ್ಲೆಯಲ್ಲಿರುವ ಅರಣ್ಯಗಳು ವಿಭಿನ್ನವಾಗಿದ್ದು, ಇಲ್ಲಿ ಆಗೊಮ್ಮೆ ಈಗೊಮ್ಮೆ ನಮಗೆ ಅಚ್ಚರಿಗಳು ಲಭ್ಯವಾಗುತ್ತಲೇ ಇರುತ್ತವೆ. ಇಲ್ಲಿ ಹಲವು ಬಗೆಯ ಜೀವರಾಶಿಗಳಿದ್ದು, ಅವು ಎಲ್ಲ ಸಂದರ್ಭದಲ್ಲಿ ನಮ್ಮ ಗಮನಕ್ಕೆ ಬಾರದಿದ್ದರೂ ಅವುಗಳನ್ನು ಹುಡುಕಿ ಹೋಗುವವರಿಗೆ ಮಾತ್ರ ವಿಸ್ಮಯ ಕಾದಿರುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ.
ಚಾಮರಾಜನಗರ ಜಿಲ್ಲೆಯಲ್ಲಿ ಅಡ್ಡಾಡಿದರೆ ನಮಗೆ ಇಲ್ಲಿನ ಅರಣ್ಯ ಮತ್ತು ಅದರೊಳಗಿನ ವನ್ಯ ಜೀವಿ ಸಂಪತ್ತಿನ ಅರಿವಾಗುತ್ತದೆ. ಈ ಅರಣ್ಯದೊಳಗೆ ಒಂದು ಸುತ್ತು ಬಂದರೆ ಇಲ್ಲಿರುವ ಅಪರೂಪದ ಜೀವಗಳು ನಮ್ಮ ಗಮನಸೆಳೆಯುತ್ತವೆ. ಬಂಡೀಪುರ, ಮಲೆಮಹದೇಶ್ವರ ಬೆಟ್ಟ, ಬಿಳಿಗಿರಿರಂಗನಬೆಟ್ಟ, ಹಿಮವದ್ ಗೋಪಾಲ ಸ್ವಾಮಿ ಬೆಟ್ಟಗಳು ಹಸಿರು ಅರಣ್ಯದ ಬೆಟ್ಟಗುಡ್ಡಗಳ ಸಿರಿಸಂಪತ್ತಿನೊಂದಿಗೆ ನಮ್ಮನ್ನು ಸೆಳೆಯುತ್ತವೆ.
ಇನ್ನು ಈ ವನ್ಯಪ್ರದೇಶದಲ್ಲಿ ಕರಡಿ, ಹುಲಿ, ಚಿರತೆ, ಕಾಡುಕೋಣಗಳು, ಅಪರೂಪದ ಚಿಟ್ಟೆ, ಜಿಂಕೆ, ಸಾರಂಗಿಗಳು ಸೇರಿದಂತೆ ಹಲವು ಜೀವ ಸಂಕುಲಗಳು ಇಲ್ಲಿದ್ದು, ಇವುಗಳಿಗೆಲ್ಲ ಆಸರೆ ನೀಡಿರುವುದು ಇಲ್ಲಿನ ಅರಣ್ಯ ಪ್ರದೇಶಗಳಾಗಿವೆ. ಅದರಲ್ಲೂ ಬಂಡೀಪುರ, ಬಿಳಿಗಿರಿರಂಗನಬೆಟ್ಟ, ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶಗಳು ನಿಸರ್ಗ ಪ್ರೇಮಿಗಳಿಗೆ ಮತ್ತು ವನ್ಯಜೀವಿಗಳ ಕುರಿತಂತೆ ಅಧ್ಯಯನ ಮಾಡುವವರಿಗೆ ಸೂಕ್ತಪ್ರದೇಶವಾಗಿದೆ. ಅಧ್ಯಯನ ಮಾಡುವಾಗಲೆಲ್ಲ ಅಪರೂಪದ ಜೀವರಾಶಿಗಳು ಪತ್ತೆಯಾಗಿರುವುದು ಇಲ್ಲಿನ ವಿಶೇಷತೆಯಾಗಿದೆ.
ಅಚ್ಚರಿ ಮೂಡಿಸಿದ ಬಿಳಿಕಡವೆ
ಇದೆಲ್ಲದರ ನಡುವೆ ಚಾಮರಾಜನಗರದಲ್ಲಿರುವ ಕಾವೇರಿ ವನ್ಯಧಾಮ ಇದೀಗ ಎಲ್ಲರ ಗಮನಸೆಳೆದಿದೆ. ಇತ್ತೀಚೆಗೆ ಇಲ್ಲಿ ಚಿರತೆಗಳ ಅಧ್ಯಯನ ಮಾಡಲು ಹೊರಟ ತಂಡದ ಕ್ಯಾಮರಾ ಕಣ್ಣಿಗೆ ಬಿಳಿ ಕಡವೆ ಬಿದ್ದಿದೆ. ಇದು ಈಗ ಎಲ್ಲರ ಗಮನಸೆಳೆದಿದ್ದು, ಅಯ್ಯೋ ಬಿಳಿಕಡವೆಯಾ ಎಂದು ಅಚ್ಚರಿಗೊಳ್ಳುತ್ತಿದ್ದಾರೆ. ಹಾಗೆಂದು ಚಾಮರಾಜನಗರದ ಅರಣ್ಯದಲ್ಲಿ ಇದೇ ಮೊದಲ ಬಾರಿಗೆ ಪತ್ತೆಯಾದ ಬಿಳಿಕಡೆವೆಯಲ್ಲ. ಈ ಹಿಂದೆ ಅಂದರೆ 2014ರಲ್ಲಿ ಬಂಡೀಪುರದಲ್ಲಿ ಬಿಳಿಕಡವೆ ಪತ್ತೆಯಾಗಿತ್ತಂತೆ. ಅದಾದ ನಂತರ ಸುಮಾರು ಒಂಬತ್ತು ವರ್ಷಗಳ ಬಳಿಕ ಜಿಲ್ಲೆಯ ಕಾವೇರಿ ವನ್ಯಧಾಮದಲ್ಲಿ ಪತ್ತೆಯಾಗಿರುವುದು ವಿಶೇಷವಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications