ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಂಡೀಪುರ ಅರಣ್ಯದಲ್ಲಿ ಕಾದಾಡಿ ಸತ್ತ ಹುಲಿ?

|
Google Oneindia Kannada News

ಚಾಮರಾಜನಗರ, ಜೂನ್ 21: ಬಂಡೀಪುರ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಮೇಲಿಂದ ಮೇಲೆ ಹುಲಿಗಳು ಸಾವನ್ನಪ್ಪುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿರುವುದು ಆತಂಕಕಾರಿಯಾಗಿದೆ.

ಮೇ ತಿಂಗಳ ಕೊನೆಯ ವಾರದಲ್ಲಿ ಬಂಡೀಪುರ ವ್ಯಾಪ್ತಿಯಲ್ಲಿ ಹುಲಿ, ಚಿರತೆಗಳು ಸಾವನ್ನಪ್ಪಿದ್ದವು. ಇದೀಗ ಮೂಲೆಹೊಳೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಸುಮಾರು ಏಳು ವರ್ಷ ಪ್ರಾಯದ ಗಂಡು ಹುಲಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಹುಲಿ ಕಾದಾಟದಲ್ಲಿ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ.

 ಪಿರಿಯಾಪಟ್ಟಣದಲ್ಲಿ ಅನುಮಾನಾಸ್ಪದವಾಗಿ ಹುಲಿ ಸಾವು ಪಿರಿಯಾಪಟ್ಟಣದಲ್ಲಿ ಅನುಮಾನಾಸ್ಪದವಾಗಿ ಹುಲಿ ಸಾವು

ಬಂಡೀಪುರ ಮೂಲೆಹೊಳೆ ಅರಣ್ಯ ವಲಯ ವ್ಯಾಪ್ತಿಯ ಚಿಕ್ಕನಹಳ್ಳ ಪ್ರದೇಶದಲ್ಲಿ ಹುಲಿಯ ಮೃತದೇಹ ಕಂಡು ಬಂದಿದ್ದು, ಇದನ್ನು ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ನೋಡಿ ಕೂಡಲೇ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

tiger death may happened by fighting in bandipura

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಎಸಿಎಫ್ ರವಿಕುಮಾರ್ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅರಣ್ಯ ಇಲಾಖೆಯ ಪಶುವೈದ್ಯ ಡಾ.ನಾಗರಾಜು ಅವರು ಮರಣೋತ್ತರ ಪರೀಕ್ಷೆ ನಡೆಸಿ ದೇಹದ ಮಾದರಿಯನ್ನು ಸಂಗ್ರಹಿಸಿದ ನಂತರ ಮೃತದೇಹದ ಅಂತ್ಯಕ್ರಿಯೆ ನಡೆಸಲಾಯಿತು.

ಗುಜರಾತಿನಿಂದ ಮೈಸೂರಿನ ಝೂಗೆ ಬರಲಿವೆ 5 ಸಿಂಹಗಳುಗುಜರಾತಿನಿಂದ ಮೈಸೂರಿನ ಝೂಗೆ ಬರಲಿವೆ 5 ಸಿಂಹಗಳು

ಮೃತ ಹುಲಿಯ ದೇಹದ ಮೇಲೆ ಗಾಯದ ಗುರುತುಗಳಿರುವ ಹಿನ್ನೆಲೆಯಲ್ಲಿ ಇನ್ನೊಂದು ಬಲಿಷ್ಠ ಹುಲಿಯೊಂದಿಗೆ ಕಾದಾಟ ಮಾಡಿ ಮೃತಪಟ್ಟಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ.

English summary
It is alarming that tiger deaths are on the rise in the Bandipur National Park these days. recently 7 year old tiger found dead in forest area of moolehole. It is suspected that tiger may died while fighting with other tiger.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X