ಪ್ರಾಣಿಗಳಿಗೆ ಕಿರಿಕಿರಿಯುಂಟು ಮಾಡುತ್ತಿರುವ ಪ್ರವಾಸಿಗರ ವರ್ತನೆ
ಚಾಮರಾಜನಗರ, ಜುಲೈ 26: ಸೆಲ್ಫಿ ಹುಚ್ಚಿಗೆ ಮುಗಿ ಬಿದ್ದ ಪ್ರವಾಸಿಗರು ಮತ್ತು ಪ್ರಯಾಣಿಕರು ಬಂಡೀಪುರ ಹುಲಿಯೋಜನೆಯ ಅರಣ್ಯಪ್ರದೇಶದ ಹೆದ್ಧಾರಿಗಳಲ್ಲಿ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿ ಸೆಲ್ಪಿ ತೆಗೆದುಕೊಳ್ಳುವುದಲ್ಲದೆ ವನ್ಯ ಪ್ರಾಣಿಗಳ ಚಿತ್ರಗಳನ್ನು ಸೆರೆಹಿಡಿಯಲು ಮುಂದಾಗುತ್ತಿರುವುದು ಕಂಡು ಬಂದಿದ್ದು ಇದು ಅಪಾಯಕಾರಿ ಬೆಳವಣಿಗೆ ಎಂದು ಪ್ರಾಣಿ ಪ್ರೇಮಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಬಂಡೀಪುರ ಹುಲಿಯೋಜನೆಯ ಅರಣ್ಯಪ್ರದೇಶದಲ್ಲಿ ಎರಡು ಹೆದ್ದಾರಿ ಹಾದು ಹೋಗಿದ್ದು, ಈ ಹೆದ್ದಾರಿಯಲ್ಲಿ ದಿನಂಪ್ರತಿ ನೂರಾರು ವಾಹನಗಳು ಸಂಚರಿಸುತ್ತಿವೆ. ಅರಣ್ಯ ಪ್ರದೇಶದ ಹೆದ್ದಾರಿಯಲ್ಲಿ ಸಾಗುವ ವಾಹನಗಳು ಅರಣ್ಯ ಇಲಾಖೆಯ ಸೂಚನೆಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕಾಗಿದೆ. ಆದರೆ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಇದನ್ನು ಗಾಳಿಗೆ ತೂರುತ್ತಿರುವುದು ಕಂಡು ಬರುತ್ತಿದೆ.
ಹೆದ್ಧಾರಿ ಮಧ್ಯೆ ವಾಹನಗಳನ್ನು ನಿಲ್ಲಿಸಿ ಎಲ್ಲೆಂದರಲ್ಲಿ ಚಿತ್ರಗಳನ್ನು ಸೆರೆಹಿಡಿಯುವುದು ಅಪಾಯಕಾರಿ. ಏಕೆಂದರೆ ಯಾವಾಗ ಬೇಕಾದರೂ ಕಾಡಾನೆ ಸೇರಿದಂತೆ ವನ್ಯಪ್ರಾಣಿಗಳು ಯಾವಾಗ ಬೇಕಾದರೂ ದಾಳಿ ಮಾಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಯಾವುದೇ ಕಾರಣಕ್ಕೂ ವಾಹನಗಳನ್ನು ಹೆದ್ಧಾರಿ ಬದಿಗಳಲ್ಲಿ ನಿಲ್ಲಿಸಬಾರದು ಎಂದು ನಿರ್ದೇಶನ ನೀಡಿದರೂ ಅದಕ್ಕೆ ಸೊಪ್ಪು ಹಾಕದೆ ವಾಹನಗಳನ್ನು ನಿಲ್ಲಿಸಿಕೊಂಡು ಅರಣ್ಯದೊಳಕ್ಕೆ ತೆರಳಿ ಕಾಡಾನೆಗಳ ಫೋಟೋ ತೆಗೆಯಲು ಮುಂದಾಗುತ್ತಿರುವುದು ಕಂಡು ಬರುತ್ತಿದೆ.

ಹುಲಿಯೋಜನೆಯ ಅರಣ್ಯ ಪ್ರದೇಶದಲ್ಲಿ ತಮಿಳುನಾಡಿನ ಊಟಿ ಹಾಗೂ ಕೇರಳದ ಕಲ್ಲಿಕೊಟೆಗೆ ಹೋಗುವ ಎರಡು ರಾಷ್ಟ್ರೀಯ ಹೆದ್ದಾರಿಗಳು ಚೆಕ್‍ಪೆÇೀಸ್ಟ್‍ಗಳಿಂದ ಗಡಿಯವರೆಗೆ ಸುಮಾರು 20 ಕಿಲೋ ಮೀಟರ್ ಅರಣ್ಯ ಪ್ರದೇಶದಲ್ಲಿ ಹಾದುಹೋಗಿವೆ. ಈ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವನ್ಯಜೀವಿಗಳು ಎದುರಾದರೆ ವಾಹನಗಳನ್ನು ನಿಲ್ಲಿಸುವ ಸವಾರರು ಹತ್ತಿರಕ್ಕೆ ಹೋಗಿ ಫೆÇೀಟೋ ತೆಗೆಯುವ, ಕೀಟಲೆ ಮಾಡುವ ಕೆಲಸಕ್ಕೆ ಕೈಹಾಕುತ್ತಿದ್ದು ಇದು ತೊಂದರೆ ಎಂಬುದು ಗೊತ್ತಿದ್ದರೂ ಅಂತಹ ಕೆಲಸಕ್ಕೆ ಮುಂದಾಗುತ್ತಿರುವುದು ದುರಂತದ ಸಂಗತಿಯಾಗಿದೆ.

ಪ್ರವಾಸಿಗರು ಮಾಡುತ್ತಿರುವ ಕೀಟಲೆಯನ್ನು ತಡೆಯುವ ಸಲುವಾಗಿ ಅರಣ್ಯ ಸಿಬ್ಬಂದಿ ಗಸ್ತು ನಡೆಸಿದರೂ ಅದರಿಂದ ಯಾವುದೇ ಪ್ರಯೋಜನವಾದಂತೆ ಕಂಡು ಬರುತ್ತಿಲ್ಲ. ಈಗಾಗಲೇ ಬಂಡೀಪುರದಲ್ಲಿ ವನ್ಯಪ್ರಾಣಿಗಳು ಪ್ರಯಾಣಿಕರ ಮೇಲೆ ದಾಳಿ ಮಾಡಿದ ಉದಾಹರಣೆಗಳಿದ್ದರೂ ಜನ ಎಚ್ಚೆತ್ತುಕೊಳ್ಳದಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ.












Click it and Unblock the Notifications