ಗುಂಡ್ಲುಪೇಟೆ: ಹಳ್ಳಕ್ಕೆ ನುಗ್ಗಿದ ಪ್ರವಾಸಿಗರ ಕಾರು, ನಾಲ್ವರಿಗೆ ಗಾಯ
ಚಾಮರಾಜನಗರ, ಜೂನ್, 01: ನಿಯಂತ್ರಣ ತಪ್ಪಿದ ಕಾರೊಂದು ಹಳ್ಳಕ್ಕೆ ಇಳಿದ ಘಟನೆ ಗುಂಡ್ಲುಪೇಟೆ ತಾಲೂಕಿನ ತೊಂಡವಾಡಿ ಗೇಟ್‌ನಲ್ಲಿ ನಡೆದಿದ್ದು, ದಂಪತಿ ಸೇರಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ ನ್ನುವ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು ಮೂಲದ ಪೀಯುಶ್ ಸಿಂಘಲ್, ಪತ್ನಿ ರಾಧಿಕಾ ಹಾಗೂ ಮಕ್ಕಳಾದ ಅದಿಲ್ ಮತ್ತು ಮಾನ್ಯ ಎಂಬವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಘಟನೆ ನಡೆದಿದ್ದು ಹೇಗೆ?: ಊಟಿ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಾಸ್ ಆಗುವ ವೇಳೆ ಕಾರು ರಸ್ತೆ ಬದಿಯ 10 ಅಡಿ ಆಳದ ಹಳ್ಳಕ್ಕೆ ಇಳಿದಿ ಪರಿಣಾಮ ನಾಲ್ವರಿಗೆ ಗಂಭೀರ ಪೆಟ್ಟುಗಳಾಗಿದೆ. ಅಪಘಾತ ಮಾಹಿತಿ ತಿಳಿಯುತ್ತಿದ್ದಂತೆ ಹೈವೆ ಗಸ್ತು ಸಿಬ್ಬಂದಿ ನಾಗೇಂದ್ರ ಹಾಗೂ ಖಾಸಗಿ ಆಂಬುಲೆನ್ಸ್ ಚಾಲಕ ರಾಜೀವ್ ಕೂಡಲೇ ಸ್ಥಳಕ್ಕೆ ಧಾವಿಸಿ ಪ್ರಥಮ ಚಿಕಿತ್ಸೆ ಕೊಟ್ಟಿದ್ದಾರೆ. ಇನ್ನು ಬೇಗೂರು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಸೇತುವೆಗೆ ಕಾರು ಡಿಕ್ಕಿ: ಹಿರಿಯೂರು, ಮೇ, 28: ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ಸೇತುವೆಗೆ ಡಿಕ್ಕಿಯಾದ ರಭಸಕ್ಕೆ ಇಬ್ಬರು ಮೃತಪಟ್ಟಿ ಘಟನೆ ತಾಲೂಕಿನ ಯರಬಹಳ್ಳಿ ಸಮೀಪ ಇತ್ತೀಚೆಗಷ್ಟೇ ನಡೆದಿತ್ತು.
ನಾಗರಾಜ್ ಶೆಟ್ಟಿ (55) ಹಾಗೂ ವಿಶಾಲಾಕ್ಷಮ್ಮ (75) ಮೃತ ದುರ್ದೈವಿಗಳು. ಮೃತಪಟ್ಟ ಇಬ್ಬರು ತುಮಕೂರು ಮೂಲದವರು ಎಂದು ತಿಳಿದುಬಂದಿದೆ.
ಮೃತ ನಾಗರಾಜ್ ಶೆಟ್ಟಿ ಮಗಳನ್ನು ಶಾಲೆಗೆ ಬಿಟ್ಟು ಬರಲು ತುಮಕೂರಿಗೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಗಳು ಬಿಂದು, ಪತ್ನಿ ಭಾಗ್ಯಲಕ್ಷ್ಮಿ, ಸಂಬಂಧಿ ಗೀತಾಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಗೊಂಡವರನ್ನು ಹಿರಿಯೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಈ ಪ್ರಕರಣ ಐಮಂಗಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ ಎಂದು ತಿಳಿದುಬಂದಿದ.
ಅಪರಿಚಿತ ವ್ಯಕ್ತಿ ಸಾವು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ತಾಲ್ಲೂಕಿನ ಆದಿವಾಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿಯಾದ ರಭಸಕ್ಕೆ ಮೃತನ ದೇಹ ನಜ್ಜುಗುಜ್ಜಾಗಿದ್ದು, ಗುರುತು ಪತ್ತೆಯಾಗಿಲ್ಲ. ಇನ್ನು ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.












Click it and Unblock the Notifications