ಬಂಡೀಪುರದಲ್ಲಿ ಸಫಾರಿ ವೇಳೆ ಪ್ರವಾಸಿಗರಿಗೆ ಹುಲಿರಾಯನ ದರ್ಶನ
ಚಾಮರಾಜನಗರ, ಮೇ, 08: ಬಿಸಿಲಿನ ಧಗೆಯ ನಡುವೆಯೂ ಜನರು ಸಫಾರಿಯತ್ತ ಆಸಕ್ತಿ ತೋರುತ್ತಿದ್ದಾರೆ. ಈ ವೇಳೆ ಕಾಡು ಪ್ರಾಣಿಗಳನ್ನು ಕಾಣುವುದಲ್ಲದೆ, ಅವುಗಳ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದು, ಸಖತ್ ವೈರಲ್ ಆಗುತ್ತಿವೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಬಂಡೀಪುರದಲ್ಲಿ ಅರಣ್ಯ ಪ್ರದೇಶದಿಂದ ಆಚೆ ಹಚ್ಚಾಗಿ ಕಾಡು ಪ್ರಾಣಿಗಳು ಕಾಣಿಸಿಕೊಳ್ಳುತ್ತಲೇ ಇವೆ. ಹಾಗೆಯೇ ಇಂದು ಸಫಾರಿಗೆ ತೆರಳಿದ್ದ ವೇಳೆ ಪ್ರವಾಸಿಗರಿಗೆ ಹುಲಿರಾಯನ ದರ್ಶನವಾಗಿದೆ. ಹಾಗಾದರೆ ಮುಂದೇನಾಯ್ತು ಎಂದು ಇಲ್ಲಿ ತಿಳಿಯಿರಿ.
ಘರ್ಜನೆಯ ಜೊತೆ ಕೊಟ್ಟ ಹುಲಿರಾಯ ದರ್ಶನ ಕೊಟ್ಟಿದ್ದು, ಈ ವೇಳೆ ಪ್ರವಾಸಿಗರು ಬೆಚ್ಚಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆ ಬಂಡೀಪುರ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಇನ್ನು ಹುಲಿರಾರನ ಘರ್ಜನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.

ಸಫಾರಿಗೆ ತೆರಳಿದ್ದ ವೇಳೆ ಪ್ರವಾಸಿಗರಿಗೆ ದೊಡ್ಡ ಘರ್ಜನೆ ಮೂಲಕ ಹುಲಿರಾಯ ದರ್ಶನ ನೀಡಿದ್ದು, ಇದರಿಂದ ಸ್ವಲ್ಪ ಹೊತ್ತುಪ್ರವಾಸಿಗರು ಆತಂಕಗೊಂಡಿದ್ದರು. ಬಳಿಕ ಹುಲಿರಾಯ ಕಾಡಿನೊಳಗೆ ತೆರಳಿದ್ದು, ಇದರಿಂದ ಪ್ರವಾಸಿಗರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ ಇದೀಗ ಹುಲಿರಾಯನ ಘರ್ಜನೆಯ ವಿಡಿಯೋ ಭಾರೀ ವೈರಲ್ ಆಹುತ್ತಿದೆ.
ಕೊನೆಗೂ ಸೆರೆಸಿಕ್ಕ ಬಿದ್ದ ಕಾಡಾನೆ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯದಲ್ಲಿ ರೈತರಿಗೆ ಉಟಪಳ ಕೊಡುತ್ತಿದ್ದ ಆನೆಯನ್ನು ನಿರಂತರ ಕಾರ್ಯಾಚರಣೆ ನಡೆಸಿ ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ (ಮೇ 07) ಬೆಳಗ್ಗೆ ಸೆರೆ ಹಿಡಿದಿದ್ದಾರೆ.
ಗೋಪಾಲಸ್ವಾಮಿ ಬೆಟ್ಟ ವಲಯದ ಹಿರಿಕೆರೆ ಹಿಂಭಾಗದ ಪ್ರದೇಶದಲ್ಲಿ ರಾಂಪುರ ಆನೆ ಶಿಬಿರದ ಪಾರ್ಥಸಾರಥಿ, ಗಣೇಶ ಹಾಗೂ ದುಬಾರೆ ಆನೆ ಶಿಬಿರದ 4 ಆನೆಗಳ ಸಹಾಯದಿಂದ 45 ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆನೆಯನ್ನು ಸೆರೆ ಹಿಡಿಯಲಾಗಿದೆ.
ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಅಭಯಾರಣ್ಯದ ಜಿ.ಎಸ್.ಬೆಟ್ಟ ವಲಯ ವ್ಯಾಪ್ತಿಯ ಹಿರೀಕೆರೆ ಭಾಗದಲ್ಲಿ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆಯವರು ಕಳೆದ ಏಪ್ರಿಲ್ 15ರಲ್ಲಿ ಕೂಂಬಿಂಗ್ ಆರಂಭಿಸಿದ್ದರು. ಬಳಿಕ, ಸೆರೆ ಕಾರ್ಯಾಚರಣೆ ನಿಲ್ಲಿಸಿದ್ದರು. ಅದಾದ ನಂತರ, ಕಳೆದ 10 ದಿನಗಳಿಂದ ಪುಂಡಾನೆ ಸೆರೆಗೆ ಮತ್ತೇ ಕಾರ್ಯಾಚರಣೆ ಆರಂಭಿಸಿ ಕೊನೆಗೂ ಯಶಸ್ಸು ಕಂಡಿದ್ದಾರೆ.
ಮಾರ್ಚ್ 10ರಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಂಡೀಪುರಕ್ಕೆ ಭೇಟಿ ನೀಡಿದ್ದ ವೇಳೆ ಹಂಗಳ ಗ್ರಾಮದ ಮಾಧು ಹಾಗೂ ಇತರೆ ರೈತರು ಪುಂಡಾನೆ ಸೆರೆಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಸಚಿವರು ಆನೆ ಸೆರೆಗೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಈ ಕುರಿತು, ಬಂಡೀಪುರ ಸಿಎಫ್ಒ ಪ್ರಭಾಕರನ್ ಮಾಹಿತಿ ನೀಡಿದ್ದು, ಆನೆ ಸೆರೆ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಆನೆಗೆ 40 ವರ್ಷವಾಗಿದೆ ಎಂದು ಅಂದಾಜಿಸಲಾಗಿದೆ. ಇನ್ನು ಆನೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗುವುದು ಎಂದು ತಿಳಿಸಿದ್ದಾರೆ.
ಮತ್ತೊಂದೆಡೆ ಒಟ್ಟಿನಲ್ಲಿ ಹೇಳುವುದಾದರೆ, ಹುಲಿರಾಯನ ದರ್ಶನದಿಂದ ಖುಷಿಯಲ್ಲಿದ್ದ ಪ್ರವಾಸಿಗರಿಗೆ ಅದರ ಘರ್ಜನೆ ಕೇಳಿ ನಡುಕ ಶುರುವಾಗಿತ್ತು ಎಂದು ತಿಳಿದುಬಂದಿದೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications