ಬಂಡೀಪುರ: ಜಿಂಕೆಯನ್ನೇ ಅಟ್ಟಾಡಿಸಿಕೊಂಡು ಬಂದ ನಾಯಿ-ಮುಂದಾಗಿದ್ದೇ ದೊಡ್ಡ ಅನಾಹುತ?
ಚಾಮರಾಜನಗರ, ಜುಲೈ, 27: ಸಾರಿಗೆ ಬಸ್ ಡಿಕ್ಕಿ ಹೊಡೆದು ಎರೆಡೂವರೆ ವರ್ಷದ ಗಂಡು ಜಿಂಕೆ ಮೃತಪಟ್ಟಿರುವ ಘಟನೆ ಬಂಡೀಪುರ ಸಮೀಪದ ಮಂಗಲ ಗ್ರಾಮದಲ್ಲಿ ನಡೆದಿದೆ.
ಎಲಚೆಟ್ಟಿ ಗ್ರಾಮದಿಂದ ಸಾರಿಗೆ ಬಸ್ ಗುಂಡ್ಲುಪೇಟೆ ಬರುವ ಸಮಯದಲ್ಲಿ ನಾಯಿ ಜಿಂಕೆಯನ್ನು ಅಟ್ಟಾಡಿಸಿಕೊಂಡು ಬಂದಿದೆ. ಅ ಸಂದರ್ಭದಲ್ಲಿ ಜಿಂಕೆ ರಸ್ತೆ ದಾಟುವಾಗ ಜಿಂಕೆ ಬಸ್‌ಗೆ ಡಿಕ್ಕಿಯಾಗಿದೆ . ಜಿಂಕೆ ಪಕ್ಕದಲ್ಲೇ ಇದ್ದ ಮನೆಯ ಗೇಟಿನ ಒಳಗೆ ಹೋಗಿ ಮೃತಪಟ್ಟಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಬಳಿಕ , ಅರಣ್ಯ ಇಲಾಖೆಯ ಸಿಬ್ಬಂದಿ ಆಗಮಿಸಿ ಚಾಲಕರ ಮೇಲೆ ಪ್ರಕರಣ ದಾಖಲಿಸಿ ಜಿಂಕೆಯನ್ನು ನಿಯಮದಂತೆ ಕಾಡಿಗೆ ಹಾಕಿದ್ದಾರೆ.
ಕಾಡೆಮ್ಮೆ ನುಂಗಿದ ವ್ಯಾಘ್ರ: ಚಾಮರಾಜನಗರ ಜುಲ್ಲೆಯಲ್ಲಿ ಕಾಡುಪ್ರಾಣಿಳ ಹಾವಳಿ ಆಗಾಗ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಾಗೆಯೇ ಇದೀಗ ಜನಪ್ರಿಯ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿಯೊಂದು ಭರ್ಜರಿ ಬೇಟೆ ಆಡಿ ಪ್ರವಾಸಿಗರ ಮುಂದೆ ಕಾಡೆಮ್ಮೆಯನ್ನು ಚಪ್ಪರಿಸಿ ತಿಂದಿದ್ದು, ಈ ವಿಡಿಯೋ ಇದೀಗ ಭಾರೀ ವೈರಲ್ ಆಗುತ್ತಿದೆ.
ಸಫಾರಿಗೆ ತೆರಳಿದ್ದ ವೇಳೆ ಪ್ರವಾಸಿಗರಿಗೆ ಹಚ್ಚ ಹಸಿರಿನ ಹುಲ್ಲಿನ ಮೇಲೆ ವಿರಾಜಮಾನವಾದ ವ್ಯಾಘ್ರ ಕಾಡೆಮ್ಮೆಯ ಮಾಂಸವನ್ನು ಕಿತ್ತು ತಿನ್ನುತ್ತಿರುವ ರೋಮಾಂಚಕ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಭಾರೀ ವೈರಲ್ ಆಗುತ್ತಿದೆ.
ಬಂಡೀಪುರದ ಕೆರೆ ಬಳಿ ಕಾಡೆಮ್ಮೆ ಬೇಟೆಯಾಡಿ ತಿನ್ನುತ್ತಿದ್ದು, ಪ್ರವಾಸಿಗರು ಎದುರಾದರೂ ಯಾವುದಕ್ಕೂ ಕೇರ್ ಮಾಡದೇ ಹಸಿವು ನೀಗಿಸಿಕೊಂಡಿದೆ. ಸಫಾರಿಗರ ಸದ್ದಿಗೆ ಸಫಾರಿಯಲ್ಲಿ ಪ್ರವಾಸಿಗರ ಕಣ್ಣಿಗೆ ಹುಲಿರಾಯ ರಸದೌತಣ ನೀಡಿದ್ದು, ಸದ್ಯ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿದೆ.












Click it and Unblock the Notifications