ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಲಿತನ ಬೆತ್ತಲೆ ಮೆರವಣಿಗೆ ಪ್ರಕರಣ: ಇಬ್ಬರು ಪೊಲೀಸರ ಅಮಾನತು

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಜೂನ್ 14: ಚಾಮರಾಜನಗರ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯೊಬ್ಬರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿರುವ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಕುಮಾರ್ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಿ ರಾತ್ರೋರಾತ್ರಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ದಲಿತ ಮಹಿಳೆಯ ಮೇಲೆ ಅಮಾನವೀಯ ಕೃತ್ಯ ಬೆಂಗಳೂರು: ದಲಿತ ಮಹಿಳೆಯ ಮೇಲೆ ಅಮಾನವೀಯ ಕೃತ್ಯ

ಹೈ ವೇ ಮೊಬೈಲಿನ ಉಸ್ತುವಾರಿ ಹೊತ್ತ ಅಂದಿನ ಎಎಸ್ಐ ರಾಜೇಂದ್ರ ಪ್ರಸಾದ್ ಮತ್ತು ಚಾಲಕ ಶ್ರೀನಿವಾಸ್ ಎಂಬುವವರೇ ಅಮಾನತುಗೊಂಡ ಸಿಬ್ಬಂದಿ.

 ದಲಿತ ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ, ಇಬ್ಬರ ಬಂಧನ ದಲಿತ ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ, ಇಬ್ಬರ ಬಂಧನ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಶ್ಯಾನಡ್ರಾಳ್ಳಿ ಗ್ರಾಮದ, ಮಾನಸಿಕ ಅಸ್ವಸ್ಥ ಎನ್ನಲಾದ ಯುವಕ ಪ್ರತಾಪನನ್ನು ಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಘಟನೆಗೆ ಸಂಬಂಧಿಸಿದಂತೆ ಆ ಸಂದರ್ಭದಲ್ಲಿ ಯುವಕನ ರಕ್ಷಿಸಬೇಕಾದ ಆರಕ್ಷಕರೇ ಹೊಡೆದಿದ್ದು, ಆತನಿಗೆ ಬಟ್ಟೆ ಹಾಕಲು ಪ್ರಯತ್ನಿಸದೇ ಇರುವುದು ಕರ್ತವ್ಯ ಲೋಪ, ಅಶಿಸ್ತಿನ ದುರ್ನಡತೆ ಎಂದು ಪರಿಗಣಿಸಿ ಇಬ್ಬರನ್ನು ಅಮಾನತುಗೊಳಿಸಲಾಗಿದೆ.

two police suspended in case of dalit man harassment in chamarajanagar

ಪೊಲೀಸ್ ಪೇದೆಗಳನ್ನು ಅಮಾನತು ಮಾಡುವಂತೆಯೂ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಆಗ್ರಹಿಸಿದ್ದರು. ನೂತನವಾಗಿ ಬಂದಿರುವ ವರಿಷ್ಠಾಧಿಕಾರಿಗಳು ಘಟನೆಯನ್ನು ಪರಿಶೀಲಿಸಿ ಇಬ್ಬರಿಗೂ ಅಮಾನತ್ತಿನ ಶಿಕ್ಷೆ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ, ಆರೋಪಿಗಳನ್ನ ಬಂಧಿಸಿರುವ ಗುಂಡ್ಲುಪೇಟೆ ಪೊಲೀಸರು, ಮುಂದಿನ ಕ್ರಮ ಜರುಗಿಸಿದ್ದಾರೆ.

English summary
Two police suspended in case of dalit man harassment happened in chamarajanagar. Dalit man thrashed for entering temple and lot of opposition in the social network for this inhuman act.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X