ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ಮೂರು ದಿನ ವಾಹನ ಸಂಚಾರ ನಿರ್ಬಂಧ
Ugadi Jatra 2024: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇತಿಹಾಸ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟಕ್ಕೆ 3 ದಿನ ಕಾಲ ಬೆಟ್ಟಕ್ಕೆ ತೆರಳುವ ವಾಹನಗಳಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹಾಗಾದ್ರೆ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಹನೂರು ತಾಲೂಕಿನ ಇತಿಹಾಸ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ ಆರಂಭವಾಗಿದೆ. ಈ ಹಿನ್ನೆಲೆ 3 ದಿನ ಕಾಲ ಬೆಟ್ಟಕ್ಕೆ ತೆರಳುವ ವಾಹನಗಳಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ ಹಿನ್ನೆಲೆ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಮಾರ್ಚ್ 29ರಿಂದ 31ರ ವರೆಗೆ ದ್ವಿಚಕ್ರ ವಾಹನ ಹಾಗೂ ಆಟೋರಿಕ್ಷಾ, ಗೂಡ್ಸ್ ವಾಹನಗಳ ಪ್ರವೇಶ ನಿಷೇಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.
ವಾಹನ ಸವಾರರಿಗೆ ಪ್ರಮುಖ ಸೂಚನೆ: ವಾಹನಗಳಿಗೆ ಹನೂರು ತಾಲೂಕಿನ ಕೌದಳ್ಳಿ ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಶನಿವಾರ ಅಮಾವಾಸ್ಯೆ ಪೂಜೆ ಹಾಗೂ ಭಾನುವಾರ ಯುಗಾದಿ ರಥೋತ್ಸವ ಹಿನ್ನಲೆ ಭಕ್ತರ ದಂಡು ಹರಿದುಬರುವ ನಿರೀಕ್ಷೆಯಿದೆ. ಆದ್ದರಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ: ಚಿಕ್ಕಮಗಳೂರು ಜಿಲ್ಲೆಗೆ ಬರುವ ಪ್ರವಾಸಿಗರ ಪೈಕಿ ಬಹುತೇಕ ಮಂದಿ ಗಿರಿಪ್ರದೇಶಕ್ಕೆ ಭೇಟಿ ನೀಡಲು ಬಯಸುತ್ತಾರೆ. ಆದರೆ, ಕೆಲ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ಜಿಲ್ಲಾಡಳಿತ ಇತ್ತೀಚೆಗಷ್ಟೇ 3 ದಿನಗಳ ಕಾಲ ನಿಷೇಧ ಹೇರಿತ್ತು. ಅಲ್ಲದೆ, ಕೆಲವು ವಾಹನಗಳ ಸಂಚಾರಕ್ಕೂ ನಿಷೇಧ ಹೇಲಾಗಿತ್ತು.
ಚಿಕ್ಕಮಗಳೂರು ತಾಲ್ಲೂಕು ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಐ.ಡಿ. ಪೀಠದಲ್ಲಿ ಮಾರ್ಚ್ 15 ರಿಂದ 17ರವರೆಗೆ ವಾರ್ಷಿಕ ಉರುಸ್ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಇತ್ತು.
ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಐ.ಡಿ. ಪೀಠಕ್ಕೆ ತೆರಳುವ ರಸ್ತೆಯು ಕಿರಿದಾಗಿದ್ದು, ಹೆಚ್ಚಿನ ಮಳೆ ಬಂದಿದ್ದರಿಂದ ಅಲ್ಲಲ್ಲಿ ರಸ್ತೆ ಕುಸಿದಿದೆ. ಈ ಹಿನ್ನೆಲೆ ಈ ಕ್ರಮವನ್ನು ತೆಗೆದುಕೊಳ್ಳಲಾಗಿತ್ತು. ರಸ್ತೆಯು ಕಿರಿದಾಗಿದ್ದು ಮತ್ತು ಇಳಿಜಾರು ಹಿಮ್ಮುಖ ತಿರುವುಗಳಿಂದ ಕೂಡಿರುವ ಹಿನ್ನೆಲೆ ಮೂರು ದಿನಗಳ ಕೆಎಸ್ಆರ್‌ಟಿಸಿ ಮತ್ತು ಕೆಎಸ್‌ಆರ್‌ಪಿ ವಾಹನಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಆದೇಶ ಹೊರಡಿಸಿದ್ದರು.
ಈ ನಿರ್ಬಂಧವು ಚಂದ್ರದ್ರೋಣ ಪರ್ವತ ಸರಣಿ ಪ್ರಸಿದ್ಧ ಪ್ರವಾಸಿ ತಾಣಗಳಾದ ದತ್ತಪೀಠ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರಾ ಮತ್ತು ಝರಿಫಾಲ್ಸ್‌ಗೆ ಅನ್ವಹಿಸಲಿದೆ ಎಂದು ತಿಳಿಸಿದ್ದರು.












Click it and Unblock the Notifications