National Highway: 'ಜೇವರ್ಗಿ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯನ್ನು ಮೇಲ್ದರ್ಜೆಗೇರಿಸಿ'

ರಾಜ್ಯದಲ್ಲಿ ಕೆಲ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗಳು ಮುಕ್ತಾಯದ ಹಂತಲ್ಲಿದ್ದರೆ, ಇನ್ನೂ ಕೆಲವು ಪ್ರಗತಿಯಲ್ಲಿವೆ. ಇನ್ನೂ ಇದೀಗಜೇವರ್ಗಿ- ಚಾಮರಾಜನಗರ ನಡುವೆ ಮೇಲುಕೋಟೆ ವಿಧಾನಸಭೆ ಕ್ಷೇತ್ರದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ನಿತಿನ್‌ ಗಡ್ಕರಿ ಅವರ ಬಳಿ ಚರ್ಚೆ ನಡೆಸಿದ್ದಾರೆ.

ಜೇವರ್ಗಿ- ಚಾಮರಾಜನಗರ ನಡುವೆ ಮೇಲುಕೋಟೆ ವಿಧಾನಸಭೆ ಕ್ಷೇತ್ರದಲ್ಲಿ ಹಾದುಹೋಗುವ ಹೆದ್ದಾರಿಯನ್ನು ದ್ವಿಪಥದಿಂದ ಚತುಷ್ಪಥ ಹೆದ್ದಾರಿಯನ್ನಾಗಿ ಅಭಿವೃದ್ಧಿ ಮಾಡುವ ಬಗ್ಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಿದರು.

Upgrade Jevargi-Chamarajanagar National Highway H D Kumaraswamy Appeal

ಜೇವರ್ಗಿ- ಚಾಮರಾಜನಗರ ನಡುವೆ ಪಾಂಡವಪುರದ ಮೇಲೆ ಹಾದುಹೋಗುವ 150ಎ ದ್ವಿಪಥ ಹೆದ್ದಾರಿಯನ್ನು 597-560ರಿಂದ 606-670 ಕಿಲೋ ಮೀಟರ್ ಚತುಷ್ಪಥ ಹೆದ್ದಾರಿಯನ್ನಾಗಿ ಅಭಿವೃದ್ಧಿಪಡಿಸಲು ಒಪ್ಪಿಗೆ ಕೊಡಬೇಕು ಮತ್ತು ಪಾಂಡವಪುರ ರೈಲು ನಿಲ್ದಾಣದ ಬಳಿಯಿರುವ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಣೆ ಮಾಡುವ ರೈತರ ಅನುಕೂಲಕ್ಕಾಗಿ ಹೆದ್ದಾರಿ ಪಕ್ಷದಲ್ಲಿಯೇ ಟ್ರಕ್ ವೆ ನಿರ್ಮಾಣ ಮಾಡಬೇಕೆಂದುಮನವಿ ಮಾಡಿದರು.

ಏನೆಲ್ಲಾ ಅನುಕೂಲ ಆಗಲಿದೆ?: ಇತ್ತೀಚೆಗೆ ತಾವು ಯೋಜನೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿದ ವೇಳೆ ಸ್ಥಳೀಯ ಜನರು ಈ ಬಗ್ಗೆ ಮನವಿ ಮಾಡಿದ್ದರು. ಅಲ್ಲದೆ, ಸ್ವತಃ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದೇನೆ. ಆದ್ದರಿಂದ ಟ್ರಕ್ ವೆ ನಿರ್ಮಾಣ ಅಗತ್ಯವಾಗಿ ಆಗಬೇಕಾಗಿದೆ. ಹೆದ್ದಾರಿಯನ್ನು ನಾಲ್ಕು ಲೇನ್‌ ಆಗಿ ಅಭಿವೃದ್ಧಿ ಮಾಡುವುದರಿಂದ ಈ ಭಾಗದ ಅಭಿವೃದ್ಧಿ, ಸರಕು ಸಾಗಣೆಗೆ ಅನುಕೂಲವಾಗುತ್ತದೆ ಎಂದರು.

ಅಲ್ಲದೆ, ವ್ಯಾಪಾರ ವಾಣಿಜ್ಯ ಚಟುವಟಿಕೆಗಳಿಗೆ ಉತ್ತೇಜನ ದೊರೆಯುತ್ತದೆ. ಕೋಲಾರ ಲೋಕಸಭೆ ಕ್ಷೇತ್ರವೂ ಸೇರಿ ಕರ್ನಾಟಕದ ಹಲವು ಹೆದ್ದಾರಿ ಯೋಜನೆಗಳ ಮಂಜೂರಾತಿ ಹಾಗೂ ಇದೀಗ ಪ್ರಗತಿಯಲ್ಲಿರುವ ಯೋಜನೆಗಳನ್ನು ವೇಗ ಗತಿಯಲ್ಲಿ ಅನುಷ್ಠಾನ ಮಾಡುವ ಬಗ್ಗೆ ನಿತಿನ್‌ ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಿದರು.

ವೆಚ್ಚ ಸಾಕಾಗುವುದಿಲ್ಲ: ಮಂಡ್ಯ ನಗರ ವರ್ತುಲ ರಸ್ತೆಯನ್ನು ಅದಷ್ಟು ಬೇಗ ಕೈಗೆತ್ತಿಕೊಂಡು ಅನುಷ್ಠಾನಕ್ಕೆ ತರುವ ಬಗ್ಗೆಯೂ ಚರ್ಚೆ ಮಾಡಿದರು. ಈ ವೇಳೆ ಈಗಾಗಲೇ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರವು ಯೋಜನೆಗೆ ಡಿಪಿಆರ್ ಮಾಡಿದೆ. ಆದರೆ, ಪ್ರಾಧಿಕಾರದ ಅಂದಾಜು ವೆಚ್ಚ ಯೋಜನೆಗೆ ಸಾಕಾಗುವುದಿಲ್ಲ. 900 ಕೋಟಿ ರೂಪಾಯಿ ವೆಚ್ಚದ ಪರಿಷ್ಕೃತ ಯೋಜನೆಗೆ ಒಪ್ಪಿಗೆ ಕೊಟ್ಟು ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದ್ದಕ್ಕೆ ಹೆದ್ದಾರಿ ಪ್ರಾಧಿಕಾರದ ಸಚಿವ ನಿತಿನ್ ಗಡ್ಕರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು.

ಭೂಸ್ವಾಧೀನಕ್ಕೆ 550 ಕೋಟಿ ರೂಪಾಯಿ ಹಾಗೂ ನಿರ್ಮಾಣ ಕಾರ್ಯಕ್ಕೆ 350 ಕೋಟಿ ರೂಪಾಯಿ ಬೇಕಾಗುತ್ತದೆ. ಆದ್ದರಿಂದ ಯೋಜನೆಗೆ 900 ಕೋಟಿ ರೂಪಾಯಿ ಅಗತ್ಯವಿದೆ ಎಂದು ನಿತಿನ್‌ ಗಡ್ಕರಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ವರ್ತುಲ ರಸ್ತೆ ಯೋಜನೆ ಅನುಷ್ಠಾನ ಆದರೆ, ಮಂಡ್ಯ ನಗರದ ಬೆಳವಣಿಗೆ, ಅಭಿವೃದ್ಧಿಗೆ ತುಂಬಾ ಅನುಕೂಲ ಆಗುತ್ತದೆ ಎಂದು ಮನವಿ ಮಾಡಿದ್ದಾರೆ ಎಂದು ತಗಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+