ಚಾಮರಾಜನಗರ; ಮುರಿದುಬಿದ್ದ ರಥ, ತಪ್ಪಿದ ಅನಾಹುತ
ಚಾಮರಾಜನಗರ, ನವೆಂಬರ್, 01: ಚಾಮರಾಜನಗರ ತಾಲೂಕಿನ ಅಮಚವಾಡಿ ಗುಡ್ಡದ ವೀರಭದ್ರೇಶ್ವರ ಸ್ವಾಮಿಯ ರಥ ಮಂಗಳವಾರ ಮುರಿದುಬಿದ್ದಿದೆ. ಎರಡು ವರ್ಷಗಳ ಬಳಿಕ ನಡೆಯುತ್ತಿದ್ದ ಜಾತ್ರೆಯಲ್ಲಿ ದೇವಾಲಯದ ಅರ್ಧ ಸುತ್ತು ಪೂರ್ಣಗೊಳಿಸಿದ ಬಳಿಕ ಏಕಾಏಕಿ ರಥದ ಮೇಲ್ಭಾಗ ಮುರಿದು ಬಿದ್ದು ಚಕ್ರಗಳು ಪಲ್ಟಿಯಾಗಿದೆ. 800ಕ್ಕೂ ಹೆಚ್ಚು ಭಕ್ತರು ರಥದ ಸುತ್ತ ಇದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ವೀರಭದ್ರೇಶ್ವರ ರಥೋತ್ಸವ ನಡೆಯುತ್ತಿದ್ದ ವೇಳೆಯಲ್ಲಿ ಭಕ್ತರು ತೇರು ಎಳೆಯುತ್ತಿದ್ದ ಸಂದರ್ಭದಲ್ಲಿ ಮೊದಲು ಚಕ್ರ ಮುರಿದಿದೆ. ನಂತರ ರಥದ ಮೇಲ್ಭಾಗವು ಉರುಳಿದೆ. ಗ್ರಾಮ ವೀರಭದ್ರೇಶ್ವರ ಸ್ವಾಮಿ ದೇಗುಲಕ್ಕೆ ಸುಮಾರು 600 ವರ್ಷಗಳ ಇತಿಹಾಸವಿದೆ. ನೂರಾರು ಭಕ್ತರು ರಥೋತ್ಸವಕ್ಕೆ ಆಗಮಿಸುತ್ತಾರೆ.
12 ಗಂಟೆಗೆ ರಥೋತ್ಸವ ಆರಂಭ; ಕೋವಿಡ್ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ರಥೋತ್ಸವ ನಡೆದಿರಲಿಲ್ಲ. ಹೀಗಾಗಿಯೇ ರಥೋತ್ಸವಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ನಿಗದಿಯಂತೆ ಮಧ್ಯಾಹ್ನ 12 ಗಂಟೆಗೆ ರಥೋತ್ಸವ ಆರಂಭವಾಯಿತು.

ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿದ ನಂತರ ದೇಗುಲ ಆವರಣದಲ್ಲಿ ಒಂದು ಸುತ್ತು ರಥ ಎಳೆಯುವ ವಾಡಿಕೆ ಇದೆ. ಅರ್ಧದಷ್ಟು ದೂರಕ್ಕೆ ಸಂಚರಿಸಿದ ನಂತರ ರಥದ ಚಕ್ರವು ಕಲ್ಲಿನ ಮೇಲೆ ಹತ್ತಿದಾಗ ಸಮತೋಲನ ಏರುಪೇರಾಗಿದೆ. ಆಗ ಚಕ್ರವು ಮುರಿದ ಕಾರಣ ರಥ ಉರುಳಿದೆ. ಚಾಮರಾಜನಗರ ಜಿಲ್ಲೆಯ ವಿವಿಧ ಗ್ರಾಮಗಳ ನೂರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.












Click it and Unblock the Notifications