ತಮಿಳುನಾಡು- ಕರ್ನಾಟಕ ಗಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ 5 ತಾಸಿನಿಂದ ವಾಹನ ಸಂಚಾರ ಬಂದ್- ಕಾರಣ ತಿಳಿಯಿರಿ

ಚಾಮರಾಜನಗರ, ಡಿಸೆಂಬರ್‌, 02: ಸಮರ್ಪಕ ರಸ್ತೆಗೆ ಆಗ್ರಹಿಸಿ ತಮಿಳುನಾಡಿನ ಜನರು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಕಳೆದ 5 ತಾಸಿನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಾಗಾದರೆ ಈ ಘಟನೆ ಬಳಿಕ ಮತ್ತೇನು ಅವಾಂತರಗಳು ಸಂಭವಿಸಿವೆ ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.

ತಮಿಳುನಾಡು ಮತ್ತು ಕರ್ನಾಟಕದ ಗಡಿಯಾದ ಅಸನೂರಿನಲ್ಲಿ ತಮಿಳುನಾಡಿನ 15 ಗ್ರಾಮಗಳ ಜನರು, ಶಾಲಾ ವಿದ್ಯಾರ್ಥಿಗಳು ಬೆಳಗ್ಗೆಯಿಂದಲೇ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾವೊಂದು ವಾಹನವು ಸಂಚಾರ ಮಾಡಲಾಗದೇ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್ ಜಾಂ ಉಂಟಾಗಿದೆ.

Vehicular traffic bandh for 5 hours on Tamil Nadu-Karnataka border, what is the reason?

ದಿಂಬಂ ಘಟ್ಟ ಪ್ರದೇಶದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸರ್ಕಾರ ಅನುದಾನವನ್ನು ಬಿಡುಗಡೆ ಮಾಡಿದೆ. ಆದರೆ, ಅರಣ್ಯ ಇಲಾಖೆ ಡಾಂಬಾರು ರಸ್ತೆ ಮಾಡಲು ಅವಕಾಶ ಮಾಡಿಕೊಡದ ಹಿನ್ನೆಲೆ ರೊಚ್ಚಿಗೆದ್ದ ಜನರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆಯು ಜನರಿಗೆ ತೊಂದರೆ ಕೊಡುತ್ತಿದ್ದು, ಮಾನವ-ಪ್ರಾಣಿ ಸಂಘರ್ಷಕ್ಕೆ ಯಾವುದೇ ಪರಿಹಾರ ನೀಡುತ್ತಿಲ್ಲ. ರಸ್ತೆ ಸಮಸ್ಯೆಯಿಂದ 20ಕ್ಕೂ ಗ್ರಾಮಗಳು ತತ್ತರಿಸುತ್ತಿದ್ದು, ರಸ್ತೆ ಸರಿಪಡಿಸಲು ಅವಕಾಶ ಮಾಡಿಕೊಡುವ ತನಕ ಪ್ರತಿಭಟನೆ ಕೈ ಬಿಡಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಸ್ಥಳದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ನೂರಾರು ಮಂದಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುಳಿತು 4 ತಾಸಿನಿಂದ ಧರಣಿ ನಡೆಸುತ್ತಿದ್ದಾರೆ.

ಹೆದ್ದಾರಿಯಲ್ಲಿ ಹಣತೆ ಹಚ್ಚಿ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಇತ್ತೀಚೆಗಷ್ಟೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಣತೆ ಹಚ್ಚಿ ಪ್ರತಿಭಟನೆ ನಡೆಸಿದ್ದರು.

ನಗರದ ಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಣತೆ ಹಚ್ಚಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು‌ ನಿರ್ವಹಣಾ ಮಂಡಳಿ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ವೇಳೆ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ನಮ್ಮ ಸಂಘಟನೆ ವತಿಯಿಂದ ನಗರದಲ್ಲಿ ಕಳೆದ 65 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದೆ. ಇಂದು ಕೂಡ ದೀಪಾವಳಿ ಹಬ್ಬದ ಅಂಗವಾಗಿ ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಕೂಡ ಅಂಧಕಾರದಲ್ಲಿ ಮುಳುಗಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಒಳ್ಳೆಯ ಬುದ್ಧಿ ಬಂದು, ರಾಜ್ಯ ಸರ್ಕಾರ ತಮಿಳುನಾಡಿಗೆ ಬಿಟ್ಟಿರುವ ನೀರನ್ನು ತಕ್ಷಣವೇ ನಿಲ್ಲಿಸಲಿ. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ರಾಜ್ಯಕ್ಕೆ ಒಳ್ಳೆಯದು ಮಾಡಲಿ ಎಂದಿದ್ದರು.

ಕಗ್ಗತ್ತಲಿನಲ್ಲಿರುವ ಕಾವೇರಿ ನಿರ್ವಹಣಾ ಮಂಡಳಿಗೆ ಬೆಳಕು ತಗಲಿ ಮುಂದಿನ ದಿನಗಳಲ್ಲಿ ಕರ್ನಾಟಕದ ಪರ ತೀರ್ಪು ನೀಡಲಿ ಎಂದು ನಾವೆಲ್ಲರೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಣತೆ ಹಚ್ಚಿ ವಿನೂತನ ಪ್ರತಿಭಟನೆ ನಡೆಸಲಾಗಿದೆ ಎಂದಿದ್ದರು.

ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್, ಗು.ಪುರುಷೋತ್ತಮ್, ಪ್ರಕಾಶ್, ವೀರಭದ್ರ, ಚಾ.ಸಿ.ಸಿದ್ದರಾಜು ಇತರರು ಭಾಗವಹಿಸಿದ್ದರು.

ಬಣ್ಣ ಬದಲಿಸುವ ಸರ್ಕಾರ ಎಂದು ಆಕ್ರೋಶ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇತ್ತೀಚಿಗೆ ಬಣ್ಣದ ಡಬ್ಬ ಹಿಡಿದು ವಿನೂತನ ಪ್ರತಿಭಟನೆ ನಡೆಸಿದ್ದರು.

ನಗರದ ಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಣ್ಣದ ಡಬ್ಬಿಗಳನ್ನು ಹಿಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು‌ ನಿರ್ವಹಣಾ ಮಂಡಳಿ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದ್ದರು.

ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ನಮ್ಮ ಸಂಘಟನೆ ವತಿಯಿಂದ ನಗರದಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದೆ. ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಕೂಡ ಸರ್ಕಾರಗಳು, ಕಾವೇರಿ ನಿರ್ವಹಣಾ ಮಂಡಳಿ ಗಂಟೆಗೊಮ್ಮೆ ಬಣ್ಣ ಬದಲಾಯಿಸುತ್ತದೆ ಎಂದು ಆರೋಪಿಸಿ ನಾವೆಲ್ಲರೂ ಬಣ್ಣ ಡಬ್ಬ ಹಿಡಿದು ವಿನೂತನ ಪ್ರತಿಭಟನೆ ನಡೆಸಲಾಗಿದೆ ಎಂದಿದ್ದರು.

ಸರ್ಕಾರಗಳು ಖಾಲಿ ಡಬ್ಬ ಸರ್ಕಾರವಾಗಿದೆ ಖಾಲಿ ಡಬ್ಬ. ಕಾವೇರಿ ನೀರು ನಿರ್ವಹಣಾ ಸಮಿತಿ ಬಣ್ಣ ಬದಲಾಯಿಸುವುದರಲ್ಲಿ ಬಣ್ಣ ಬದಲಾಯಿಸುತ್ತದೆ. ಇದೊಂದು ದೊಡ್ಡ ಬಣ್ಣದ ನಾಟಕವಾಡುವ ಸಮಿತಿಯಾಗಿದ್ದು ಖಾಲಿ ಡಬ್ಬವಾಗಿದೆ. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕರ್ನಾಟಕ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು. ಕರ್ನಾಟಕ ಸರ್ಕಾರ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+