ಸತ್ತೇಗಾಲ: ಕೌಟುಂಬಿಕ ಕಲಹದಿಂದ ಬೇಸತ್ತು ಕಾವೇರಿ ನದಿಗೆ ಹಾರಿದ ಮಹಿಳೆ ರಕ್ಷಿಸಿದ ಗ್ರಾಮಸ್ಥರು-ಆಗಿದ್ದೇನು? ಇಲ್ಲಿದೆ ವಿವರ
ಚಾಮರಾಜನಗರ, ಸೆಪ್ಟೆಂಬರ್, 16: ಕೌಟುಂಬಿಕ ಕಲಹ ಹಿನ್ನೆಲೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಮಹಿಳೆಯೊಬ್ಬರು ಕಾವೇರಿ ನದಿಗೆ ಹಾರಿದ್ದಾರೆ. ಬಳಿಕ ಆ ಮಹಿಳೆಯನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಗ್ರಾಮದ ಸಮೀಪ ಭಾನುವಾರ (ಸೆಪ್ಟೆಂಬರ್ 15) ತಡರಾತ್ರಿ ನಡೆದಿದೆ.
ಕೊಳ್ಳೇಗಾಲ ನಿವಾಸಿ ರೇಣುಕಾ(56) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಈಕೆಯ ಪತಿ ಮಂಜುನಾಥ್ ದೌರ್ಜನ್ಯ ಕೊಟ್ಟು ಕಿರುಕುಳ ಎಸಗುತ್ತಿದ್ದರು ಎನ್ನಲಾಗಿದ್ದು, ಕೌಟುಂಬಿಕ ಕಲಹ ತಾಳಲಾರದೇ ಕಾವೇರಿ ನದಿಗೆ ಹಾರಿದ್ದಾರೆ. ಇನ್ನು, ಮುಳುಗುತ್ತಿದ್ದ ಈಕೆಯನ್ನು ಕಂಡ ಸ್ಥಳೀಯರು ಮೇಲಕ್ಕೆತ್ತಿ ಬದುಕುಳಿಸಿದ್ದಾರೆ. ನಂತರ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ಕರೆತಂದು ದಾಖಲು ಮಾಡಿದ್ದಾರೆ. ವೈದ್ಯರು ಚಿಕಿತ್ಸೆ ಕೊಡುತ್ತಿದ್ದಾರೆ. ಪೊಲೀಸರು ರೇಣುಕಾ ಹೇಳಿಕೆಯನ್ನು ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.

ಪತ್ನಿಗೆ ಮಂಜುನಾಥ್ ಮಾನಸಿಕ ಹಿಂಸೆ ಹಾಗೂ ದೈಹಿಕ ಹಲ್ಲೆ ಮಾಡುತ್ತಿದ್ದು, ಜೊತೆಗೆ ದೌರ್ಜನ್ಯ ಪ್ರಕರಣದ ಆರೋಪಿಯೂ ಆಗಿದ್ದರು. ಹಿಂಸೆ ತಾಳಲಾರದೇ ಕಾವೇರಿ ನದಿಗೆ ಹಾರಿದೆ ಎಂದು ರೇಣುಕಾ ಅವರಿ ಅಳಲು ತೋಡಿಕೊಂಡಿದ್ದಾರೆ. ಸದ್ಯ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
ವಿದ್ಯಾರ್ಥಿ ಆತ್ಮಹತ್ಯೆ: ಹಿರಿಯೂರು ತಾಲೂಕಿನ ಉಡುವಳ್ಳಿ ಬಳಿ ಇರುವ ನವೋದಯ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಲವು ತಿಂಗಳುಗಳ ಹಿಂದೆಯಷ್ಟೇ ನಡೆದಿತ್ತು.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಹೊಳಲ್ಕೆರೆ ತಾಲ್ಲೂಕಿನ ಕೆಂಗುಂಟೆ ಗ್ರಾಮದ ಪ್ರೇಮ್ ಸಾಗರ್ (13) ವರ್ಷ ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿಯು 8ನೇ ತೆರಿಗೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಸೀನಿಯರ್ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದನೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
ಆದರೆ ಪೋಲಿಸರ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಮೃತ ಯುವಕನ ದೇಹವನ್ನು ನಗರದ ಸರ್ಕಾರಿ ಆಸ್ಪತ್ರೆ ಶವಾಗಾರದಲ್ಲಿ ಮೃತದೇಹ ಇಡಲಾಗಿದೆ. ಸದ್ಯ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದೆ.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications