ವಿಶ್ವ ಅಕ್ಕ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕರ್ನಾಟಕದ ಈ ಜಿಲ್ಲೆಯ ಗಾಯಕನಿಗೆ ಅವಕಾಶ-ಮಾಹಿತಿ ಇಲ್ಲಿದೆ
Vishwa Akka Kannada Sahitya Sammelana 2024: ಅಮೇರಿಕಾದಲ್ಲಿ ಅನಿವಾಸಿ ಕನ್ನಡಿಗರು ಆಯೋಜನೆ ಮಾಡುವ ಪ್ರತಿಷ್ಟಿತ ಅಕ್ಕ ವಿಶ್ವ ಕನ್ನಡ ಸಮ್ಮೇಳನಕ್ಕೆ ಗಡಿಜಿಲ್ಲೆ ಚಾಮರಾಜನಗರದ ಗಾಯಕನಿಗೆ ಅವಕಾಶ ಸಿಕ್ಕಿದೆ. ಹಾಗಾದರೆ ಈ ಕಾರ್ಯಕ್ರಮ ಯಾವಾಗ ಆರಂಭವಾಗಲಿದೆ ಹಾಗೂ ಸ್ಥಳದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಅಮೇರಿಕಾದ ರಿಚ್‌ಮಂಡ್ ನಗರದಲ್ಲಿ ಆಗಸ್ಟ್ 30ರಿಂದ ಮೂರು ದಿನಗಳ ಕಾಲ ನಡೆಯಲಿರುವ ವಿಶ್ವ ಅಕ್ಕ ಕನ್ನಡ ಸಮ್ಮೇಳನಕ್ಕೆ ಚಾಮರಾಜನಗರದ ಗಾಯಕ ಸಿ.ಎಂ.ನರಸಿಂಹಮೂರ್ತಿ ಅವರಿಗೆ ಅವಕಾಶ ಸಿಕ್ಕಿದೆ.

ಜಾನಪದವೇ ಸತ್ಯ-ಜಾನಪದವೇ ನಿತ್ಯ ಎಂಬ ಶೀರ್ಷಿಕೆಯಡಿ ಜಾನಪದ ಸಂಸ್ಕೃತಿಯನ್ನು ನರಸಿಂಹಮೂರ್ತಿ ಅನಾವರಣ ಮಾಡಲಿದ್ದಾರೆ. ಅಂದಹಾಗೆ ಮೂರನೇ ಬಾರಿ ನರಸಿಂಹಮೂರ್ತಿ ಅವರಿಗೆ ಅಕ್ಕ ಸಮ್ಮೇಳನದಲ್ಲಿ ಭಾಗಿ ಆಗುವ ಅವಕಾಶ ಸಿಕ್ಕಿದೆ.
ಸಮ್ಮೇಳನದಲ್ಲಿ ಚಾಮರಾಜನಗರ ಜಿಲ್ಲೆಯ ಪವಾಡ ಪುರುಷರಾದ ಮಲೆ ಮಹದೇಶ್ವರ, ಬಿಳಿಗಿರಿರಂಗನಾಥ ಸ್ವಾಮಿ, ಮಂಟೆಸ್ವಾಮಿ ಗೀತೆ ಹಾಡಿ ಅಮೇರಿಕಾದ ಕನ್ನಡಿಗರನ್ನು ರಂಜಿಸಲಿದ್ದಾರೆ. ಇನ್ನು ಈ ಹಿಂದೆ 2010ರಲ್ಲಿ ನ್ಯೂಜೆರ್ಸಿಯಲ್ಲಿ, 2014ರಲ್ಲಿ ನಡೆದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಅಕ್ಕ ಸಮ್ಮೇಳನದಲ್ಲೂ ನರಸಿಂಹಮೂರ್ತಿ ಭಾಗಿಯಾಗಿದ್ದರು.
ರಾಜ್ಯಕ್ಕೇ ಮಾದರಿಯಾದ ಈ ದಂಪತಿ: ಕರ್ನಾಟಕ ಸ್ಟೇಟ್ ರೈಫಲ್ ಅಸೋಸಿಯೇಷನ್ ವತಿಯಿಂದ ರಾಜ್ಯ ಮಟ್ಟದ 22 ಚಾಂಪಿಯನ್‌ಶಿಷ್ 2024 ಪ್ರೋನ್ ಅನ್ನು ಆಯೋಜನೆ ಮಾಡಲಾಗಿತ್ತು. ಪುರುಷ ವಿಭಾಗದ ಪ್ರತ್ಯೇಕ ವಿಭಾಗದಲ್ಲಿ ನಗರದ ಜೋಡಿರಸ್ತೆಯಲ್ಲಿರುವ ಪ್ರಿಯಾ ಎಲೆಕ್ಟ್ರಾನಿಕ್ ಅಂಗಡಿ ಮಾಲೀಕ ರಮೇಶ್ ಬಾಬು ಭಾಗವಹಿಸಿ, ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ಚಿನ್ನದಪದಕ ಪಡೆದಿದ್ದಾರೆ. ಪತ್ನಿ ಸತ್ಯಭಾಮ ಕೂಡ ಮಹಿಳಾ ವಿಭಾಗದ ಪ್ರತ್ಯೇಕ ವಿಭಾಗದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.
ಭಾನುವಾರದಂದು ಬೆಂಗಳೂರಿನಲ್ಲಿ ನಡೆದ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ದಂಪತಿಗಳು ಭಾಗವಹಿಸಿ ಈ ಸಾಧನೆ ಮಾಡಿ ಇಡೀ ರಾಜ್ಯಕ್ಕೆ ಮಾದರಿಯಾಗಿದ್ದಾರೆ.
ರಮೇಶ್‌ಬಾಬು ಈ ಹಿಂದೆಯೂ ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ರಾಷ್ಟ್ರ, ರಾಜ್ಯದ ಮಟ್ಟದ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಸುಮಾರು ಒಟ್ಟು 107 ಪದಕಗಳನ್ನು ಪಡೆದಿದ್ದಾರೆ. ಅದರಲ್ಲಿ 73 ಚಿನ್ನದ ಪದಕ, 24 ಬೆಳ್ಳಿ ಪದಕ ಪಡೆದಿದ್ದಾರೆ.
ಇನ್ನು ಈತನ ಪತ್ನಿ ಸತ್ಯಭಾಮ ಎರಡು ವರ್ಷಗಳಿಂದ ರೈಫಲ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ದ್ವಿತೀಯ ಸ್ಥಾನ ಪಡೆದು 2 ಬೆಳ್ಳಿ ಪದಕ ಪಡೆದಿದ್ದಾರೆ. ಇಬ್ಬರು ಕೂಡ ರೈಫಲ್ ಅಭ್ಯಾಸದಲ್ಲಿ ನಿರಂತರವಾಗಿ ತೊಡಗಿದ್ದು, ಅಂತಾರಾಷ್ಟ್ರೀಯ ಮಟ್ಟದ ರೈಫಲ್ ಸ್ಪರ್ಧೆಯಲ್ಲಿ ಭಾಗವಹಿಸಿ ಸಾಧನೆ ಮಾಡುವ ಗುರಿಯಿಟ್ಟುಕೊಂಡಿದ್ದಾರೆ.
ಇನ್ನು ಸಾಧನೆ ಮಾಡಿದ ದಂಪತಿಯನ್ನು ಸ್ನೇಹಿತರು ಅಭಿನಂದಿಸಿ ಮುಂದಿನ ದಿನಗಳಲ್ಲಿ ಹೆಚ್ಚು ಸಾಧನೆ ಮಾಡಿ ಜಿಲ್ಲೆಯ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿಸುವಂತೆ ಆಶಿಸಿ ಶುಭ ಕೋರಿದ್ದಾರೆ. ಜಿಲ್ಲೆಯಲ್ಲಿ ಕ್ರೀಡಾ ಅಸೋಸಿಯೇಷನ್ ಸ್ಥಾಪಿಸಿ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ 10 ಮಕ್ಕಳನ್ನು ಪ್ರತಿ ವರ್ಷದ ದತ್ತುಪಡೆದು ಅವರ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ತರಬೇತಿ ನೀಡಿ ಪ್ರೋತ್ಸಾಹಿಸಲು ಚಿಂತಿಸಲಾಗಿದೆ ಎಂದು ರಮೇಶ್ ಬಾಬು ತಿಳಿಸಿದ್ದಾರೆ.












Click it and Unblock the Notifications