ಬಿಜೆಪಿಯವರಿಗೆ ನೂರಾರು ಕೋಟಿ ಕೊಟ್ಟು ಶಾಸಕರನ್ನು ಖರೀದಿ ಮಾಡುವುದು ಹೊಸದೇನಲ್ಲ: ಶಾಸಕ
ಚಾಮರಾಜನಗರ, ಆಗಸ್ಟ್, 30: ಆಪರೇಷನ್ ಕಮಲ ಎಂಬುದು ಹೊಸದೇನಲ್ಲ, ರಾಜಕೀಯವನ್ನು ಕಲುಷಿತ ಮಾಡಿದವರೇ ಬಿಜೆಪಿಯವರು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಇಂದು (ಆಗಸ್ಟ್ 30) ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಆಕ್ರೋಶ ಹೊರಹಾಕಿದರು. ಹಾಗಾದರೆ ಅವರು ಹೀಗೆ ಹೇಳಲು ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲದ ಹೆಸರಲ್ಲಿ ನನಗೇ ಯಾವ ಮಗನೂ ಆಫರ್ ಮಾಡಲ್ಲ, ಏನಾದರೂ ಮಾಡಿದರೇ ಅವನ ಗ್ರಹಚಾರ ಬಿಡಿಸುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಬಿಜೆಪಿಯವರಿಗೆ ನೂರಾರು ಕೋಟಿ ಕೊಟ್ಟು ಶಾಸಕರನ್ನು ಖರೀದಿ ಮಾಡುವುದು ಹೊಸದೇನಲ್ಲ. ರಾಜಕೀಯ ಕಲುಷಿತ ಆಗಲು ಬಿಜೆಪಿಯೇ ಕಾರಣ, 2008ರಿಂದ ಅಪರೇಷನ್ ಕಮಲ ಆರಂಭ ಮಾಡಿದರು. ಅಂದಿನಿಂದ ಎಲ್ಲರ ಮಾನ ಮರ್ಯಾದೆ ಹೋಯ್ತು. ಇದರಿಂದ ನಮ್ಮಂತಹ ನಿಷ್ಠಾವಂತರನ್ನೂ ಜನರು ಕ್ಯಾಕರಿಸಿ ಉಗಿಯುವ ಸ್ಥಿತಿ ಬಂದಿದೆ ಎಂದು ವಾಗ್ದಾಳಿ ಮಾಡಿದರು.
ಬಿಜೆಪಿಗರು ನೇರವಾಗಿ ಯಾರು ಮುಖ್ಯ ಮಂತ್ರಿಯಾಗಿದ್ದಾರೆ.?: ಬಿಜೆಪಿಯಲ್ಲಿ ಇದುವರೆಗೂ ಎಲ್ಲರೂ ಹಿಂಬಾಗಿಲಿನಿಂದ ಬಂದು ಮುಖ್ಯಮಂತ್ರಿ ಆದವರೆ ಆಗಿದ್ದಾರೆ. ನಾನು ಎಲ್ಲವನ್ನೂ ನೇರವಾಗಿ ಹೇಳುತ್ತಾನೆ, ಬಿಜೆಪಿಗರು ಮೋಸಗಾರರು. ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್‌ನ ರಾಜಕೀಯ ಜೀವನವನ್ನೇ ಅತಂತ್ರ ಸ್ಥಿತಿಗೆ ತಂದು ಬಿಟ್ಟರು. ಇವಾಗ ಅವನು ರಾಜಕೀಯವಾಗಿ ಮೂಲೆ ಗುಂಪಾಗಿದ್ದಾನೆ ಎಂದು ಆಕ್ರೋಶ ಹೊರಹಾಕಿದರು.
ಬೇರೆ ಶಾಸಕರಿಗೆ ಆಫರ್ ಇರಬಹುದು, ಅದರ ಮಾಹಿತಿ ನನಗಿಲ್ಲ. ಆದರೆ ಈ ಸರ್ಕಾರವನ್ನು ಬೀಳಿಸುವುದು ಸಾಧ್ಯವಿಲ್ಲ ಎಂದರು. ಇನ್ನು ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಒತ್ತಾಯಕ್ಕೆ ಮಾತನಾಡಿ, ನಾಳೆ ಸಿಎಂಗೆ ಕ್ಲೀನ್ ಚಿಟ್ ಆಗಲಿದೆ. ನಿರಾಣಿ, ಜೊಲ್ಲೆ ಅವರೆಲ್ಲರೂ ಕೊಳಚೆಯಲ್ಲಿ ಬಿದ್ದು ಒದ್ದಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ಸಹಕಾರದಿಂದ ಸಿಎಂ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಇದು ಅಷ್ಟು ಸುಲಭವಾಗಿ ಯಶಸ್ಸು ಕಾಣಲ್ಲ ಎಂದರು.
ಇನ್ನು ಇದರಲ್ಲಿ ರಾಜ್ಯಪಾಲರು ಬಿಜೆಪಿ ಕೈಗೊಂಬೆಯಾಗಿದ್ದಾರೆ. ಆದರೆ ನ್ಯಾಯ ಪರ ಇದೆ, ನಾಳೆ ನ್ಯಾಯಾಲಯ ಸಿಎಂಗೆ ಕ್ಲೀನ್ ಚಿಟ್ ನೀಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚಿತ್ರದುರ್ಗ ನಗರಸಭೆ ಅಧ್ಯಕ್ಷ ಸ್ಥಾನ ಕೈ ವಶ: ತೀವ್ರ ಕುತೂಹಲ ಕೆರಳಿಸಿದ್ದ ಚಿತ್ರದುರ್ಗ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಅಂತಿಮ ಹಂತ ತಲುಪಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮೇಲುಗೈ ಸಾಧಿಸಿದ್ದಾರೆ. ಹಾಗಾದರೆ ಯಾರಿಗೆ ಯಾವ್ಯಾವ ಸ್ಥಾನ ಯಾರಿಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಎರಡು ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ, ಅಧ್ಯಕ್ಷರಾಗಿ ಸುಮೀತಾ.ಬಿ.ಎನ್. ಹಾಗೂ ಉಪಾಧ್ಯಕ್ಷರಾಗಿ ಶ್ರೀದೇವಿ.ಜಿ.ಎಸ್ ಆಯ್ಕೆ ಆಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಘೋಷಣೆ ಮಾಡಿದರು.
ಅಧ್ಯಕ್ಷ ಸ್ಥಾನಕ್ಕೆ ಸದಸ್ಯರಾದ ಸುನೀತಾ.ಬಿ.ಎಂ ಹಾಗೂ ತಾರಕೇಶ್ವರಿ ಎಸ್.ಸಿ, ಉಪಾಧ್ಯಕ್ಷ ಸ್ಥಾನಕ್ಕೆ ಸದಸ್ಯರಾದ ಶ್ರೀದೇವಿ.ಜಿ.ಎಸ್ ಹಾಗೂ ರೋಹಿಣಿ.ಬಿ.ಎಸ್ ನಾಮಪತ್ರ ಸಲ್ಲಿಸಿದ್ದರು. ಚಿತ್ರದುರ್ಗ ನಗರಸಭೆ 35 ಜನ ಚುನಾಯಿತ ಸದಸ್ಯ ಬಲ ಹೊಂದಿದ್ದು, ಇದರಲ್ಲಿ ಓರ್ವ ಸದಸ್ಯರು ಮೃತ ಪಟ್ಟಿದ್ದರಿಂದ ಚುನಾಯಿತ ನಗರ ಸಭೆ ಸದಸ್ಯರ ಬಲ 34ಕ್ಕೆ ಇಳಿದಿತ್ತು.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ನಗರಸಭೆ ವ್ಯಾಪ್ತಿ ಪ್ರತಿನಿಧಿಸುವ ವಿಧಾನಸಭಾ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ (ಆಗಸ್ಟ್ 26) ನಡೆದ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಒಟ್ಟು 35 ಸದಸ್ಯರು ಮತ ಚಲಾಯಿಸಿದರು. ಈ ಪೈಕಿ ಸುನಿತಾ.ಬಿ.ಎನ್ ಹಾಗೂ ಶ್ರೀದೇವಿ.ಜಿ.ಎಸ್ ತಲಾ 22 ಮತಗಳನ್ನು ಪಡೆಯುವ ಮೂಲಕ ಅನುಕ್ರಮವಾಗಿ ನಗರಸಭೆ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ಗಾದಿಗೆ ಏರಿದ್ದಾರೆ.
ಚುನಾವಣಾ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ, ನಗರದ ಅಭಿವೃದ್ಧಿಗಾಗಿ ಸದಸ್ಯರು ಸುಮೀತಾ.ಬಿ.ಎನ್ ಅವರನ್ನು ಅಧ್ಯಕ್ಷರಾಗಿ ಹಾಗೂ ಶ್ರೀದೇವಿ.ಜಿ.ಎಸ್ ಉಪಾಧ್ಯಕ್ಷರನ್ನಾಗಿ ಬಹುಮತದಿಂದ ಆಯ್ಕೆ ಮಾಡಿದ್ದಾರೆ. ಇವರ ಆಯ್ಕೆಗೆ ಸಹರಿಸಿದ ಎಲ್ಲಾ ಸದಸ್ಯರಿಗೆ ಧನ್ಯವಾದಗಳನ್ನು ತಿಳಿಸಿದರು.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ











Click it and Unblock the Notifications