ವಸತಿ ಸಚಿವ ವಿ.ಸೋಮಣ್ಣ ಮುನಿಸಿಗೆ ಹೈಕಮಾಂಡ್ ಮುಲಾಮು, ಇಲ್ಲಿದೆ ವರದಿ
ಬಿಜೆಪಿಯೊಂದಿಗಿನ ವಸತಿ ಸಚಿವ ವಿ. ಸೋಮಣ್ಣ ಅವರ ಮುನಿಸು ಶಮನವಾಗಿದ್ದು, ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅವರಿಗೆ ಉಸ್ತುವಾರಿ ನೀಡಲು ಹೈಕಮಾಂಡ್ ಒಲವು ತೋರಿದೆ.
ಚಾಮರಾಜನಗರ, ಮಾರ್ಚ್, 16: ಬಿಜೆಪಿ ಸರ್ಕಾರ ಹಳೇ ಮೈಸೂರು ಪ್ರಾಂತ್ಯದ ಮೇಲೆ ಕಣ್ಣಿಟ್ಟಿದ್ದು, ಈ ಬಾರಿ ಇಲ್ಲಿ ಶತಾಯಗತಾಯ ಹೆಚ್ಚಿನ ಸ್ಧಾನ ಗೆಲ್ಲಲೇಬೇಕು ಎನ್ನುವ ಪಣತೊಟ್ಟು ನಿಂತಿದೆ. ಆದರೆ, ಈವರಗೆ ಮಾಡಿದ ತಂತ್ರಗಳು ಕೈ ಹಿಡಿದಿಲ್ಲ. ಹಾಗೆಯೇ ಸಾರಥ್ಯ ವಹಿಸಿಕೊಳ್ಳಲು ಯಾವ ನಾಯಕರು ಮುಂದೆಬರುತ್ತಿಲ್ಲ.
ಇದೀಗ ಬಿಜೆಪಿಯೊಂದಿಗಿನ ವಸತಿ ಸಚಿವ ವಿ. ಸೋಮಣ್ಣ ಅವರ ಮುನಿಸು ಶಮನವಾಗಿದ್ದು, ಹಳೇ ಮೈಸೂರು ಪ್ರಾಂತ್ಯದಲ್ಲಿ, ಅದರಲ್ಲೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅವರಿಗೆ ಉಸ್ತುವಾರಿ ನೀಡಲು ಹೈಕಮಾಂಡ್ ಒಲವು ತೋರಿದೆ. ಬಿಜೆಪಿ ಉನ್ನತ ಮೂಲಗಳ ಪ್ರಕಾರ ಸೋಮಣ್ಣ ಮುನಿಸಿಗೆ ಸಾರಥ್ಯ ವಹಿಸಿಕೊಡುವ ಮುಲಾಮು ಹಚ್ಚಿದೆ ಎನ್ನಲಾಗಿದೆ.

ಸೋಮಣ್ಣನವರ ರಾಜಕೀಯದ ಹಾದಿ
ನಾಲ್ಕು ದಶಕಗಳ ಸುಧೀರ್ಘ ರಾಜಕಾರಣದಲ್ಲಿ ಸೋಮಣ್ಣನವರು ಚಾಮರಾಜನಗರ ಜಿಲ್ಲೆಯೊಂದಿಗೆ ಎರಡು ದಶಕಗಳ ಒಡನಾಟ ಹೊಂದಿದ್ದಾರೆ. ಸೋಮಣ್ಣ ಎರಡು ಬಾರಿ ಚಾಮರಾಜನಗರ, ಒಮ್ಮೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಅಲ್ಲದೆ, ಕಾಂಗ್ರೆಸ್
ಮತ್ತು ಬಿಜೆಪಿ ಎರಡು ಪಕ್ಷದಲ್ಲೂ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದರು. ಈ ಹಿಂದೆ ಚಾಮುಂಡೇಶ್ವರಿ ಮತ್ತು ನಂಜನಗೂಡು ಉಪ ಚುನಾವಣೆಯಲ್ಲೂ ಕೆಲಸ ಮಾಡಿದ್ದಾರೆ. ಆದರೆ, ಈ ಭಾಗದ ಚುನಾವಣಾ ಸಾರಥ್ಯ ಮಾತ್ರ ಸಿಕ್ಕಿರಲಿಲ್ಲ.
ನಾಯಕತ್ವದ ಕೊರತೆ
ಈ ಭಾಗದಲ್ಲಿ ನಾಯಕತ್ವದ ಕೊರತೆಯಿಂದಾಗಿ ಬಿಜೆಪಿ ಅಲೆ ಇದ್ದ ಕಾಲದಲ್ಲೂ ಒಂದು -ಎರಡು ಸ್ಧಾನಕಷ್ಟೇ ಬಿಜೆಪಿ ತೃಪ್ತಿಪಟ್ಟಿಕೊಳ್ಳುತ್ತಿತ್ತು. ಬಿಜೆಪಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಾಬಲ್ಯವಿರುವ ಚಾಮರಾಜನಗರ ಲೋಕಸಭಾ ಕ್ಷೇತ್ರ
ವ್ಯಾಪ್ತಿಯಲ್ಲಿ ಈ ಬಾರಿಯ ಹೆಚ್ಚಿನ ಸ್ಧಾನ ಗೆಲ್ಲಲೇಬೇಕು ಎನ್ನವ ಹಠಕ್ಕೆ ಬಿದ್ದಿದೆ.

ಈ ಭಾಗದ ಉಸ್ತುವಾರಿ ಸಚಿವರಾಗಿ ಅನುಭವ ಹೊಂದಿರುವ ವಿ. ಸೋಮಣ್ಣನವರಿಗೆ ಸಾರಥ್ಯ ನೀಡಲು ಹೈಕಮಾಂಡ್ ಅಳೆದು ತೂಗಿ ನಿರ್ಧಾರ ಕೈಗೊಂಡಿದೆ. ಇದರೊಟ್ಟಿಗೆ, ಸೋಮಣ್ಣಗೆ ಹಿಡಿತವಿರುವ ಚಾಮರಾಜನಗರ ಭಾಗದಲ್ಲಿ ಸಾರಥ್ಯ ಕೊಟ್ಟಂತೆಯೂ ಆಗಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications