Get Updates
Get notified of breaking news, exclusive insights, and must-see stories!

ಕಾಂಗ್ರೆಸ್‌ಗೆ ಕಗ್ಗಂಟಾದ ಕೊಳ್ಳೇಗಾಲ ಕ್ಷೇತ್ರ: ಅಭ್ಯರ್ಥಿ ಘೋಷಣೆಯಾಗಿಲ್ಲ ಯಾಕೆ?

ಚಾಮರಾಜನಗರ, ಮಾರ್ಚ್ 25; 2023ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆಯಾದರೂ ಕೆಲವು ಜಿದ್ದಾಜಿದ್ದಿ, ಗೊಂದಲವಿರುವ ಕ್ಷೇತ್ರಗಳ ಪಟ್ಟಿಯನ್ನು ತಡೆಹಿಡಿಯಲಾಗಿದೆ. ಈ ಪೈಕಿ ಜಿಲ್ಲೆಯ ಕೊಳ್ಳೇಗಾಲ ಕ್ಷೇತ್ರವೂ ಒಂದಾಗಿದೆ. ಇಷ್ಟಕ್ಕೂ ಈ ಕ್ಷೇತ್ರದ ಅಭ್ಯರ್ಥಿಯನ್ನು ಏಕೆ ಬಿಡುಗಡೆ ಮಾಡಿಲ್ಲ ಎನ್ನುವುದನ್ನು ನೋಡುವುದಾದರೆ ಇಲ್ಲಿಯೂ ಅಭ್ಯರ್ಥಿಗಳ ಆಯ್ಕೆ ಗೊಂದಲವಿರುವುದು ಎದ್ದು ಕಾಣುತ್ತಿದೆ.

ಜಿಲ್ಲೆಯ ಬೇರೆಲ್ಲ ಕ್ಷೇತ್ರಗಳಿಗೆ ಹೋಲಿಸಿದರೆ ಗೊಂದಲ ಏರ್ಪಟ್ಟಿರುವುದು ಮತ್ತು ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ ಇರುವುದು ಕೊಳ್ಳೇಗಾಲ ಕ್ಷೇತ್ರದಲ್ಲಿ ಮಾತ್ರ. ಏಕೆಂದರೆ ಇಲ್ಲಿ ಸ್ಪರ್ಧಿಸಲು ಟಿಕೆಟ್ ಬಯಸಿದವರು ಘಟಾನುಘಟಿ ನಾಯಕರಾದ ಬಾಲರಾಜ್, ಎ.ಆರ್.ಕೃಷ್ಣಮೂರ್ತಿ ಮತ್ತು ಜಯಣ್ಣ ಅವರಾಗಿದ್ದು, ಈ ಮೂವರ ನಡುವೆ ತೀವ್ರ ಪೈಪೋಟಿ ಇರುವುದರಿಂದ ಮೊದಲ ಪಟ್ಟಿಯಲ್ಲಿ ಕೊಳ್ಳೇಗಾಲ ಕ್ಷೇತ್ರದ ಅಭ್ಯರ್ಥಿಯನ್ನು ಬಿಡುಗಡೆ ಮಾಡಿಲ್ಲ ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

balaraj and congress

ಚಾಮರಾಜನಗರ ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. ಆದರೀಗ ಜಿಲ್ಲೆಯಲ್ಲಿರುವ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೆ, ಇನ್ನೆರಡು ಕ್ಷೇತ್ರದಲ್ಲಿ ಬಿಜೆಪಿಯಿದೆ. ಜತೆಗೆ ಸಂಸದರು ಕೂಡ ಬಿಜೆಪಿಯವರೇ ಆಗಿದ್ದಾರೆ. ಈಗ ಹೇಗಾದರೂ ಮಾಡಿ ಹಳೆಯ ಕ್ಷೇತ್ರಗಳನ್ನು ಉಳಿಸಿಕೊಂಡು ಇನ್ನೆರಡು ಕ್ಷೇತ್ರಗಳಲ್ಲಿ ತೀವ್ರ ಪೈಪೋಟಿ ನೀಡುವುದರೊಂದಿಗೆ ಗೆಲುವು ಸಾಧಿಸಬೇಕೆನ್ನುವುದು ಬಿಜೆಪಿ ನಾಯಕರ ಬಯಕೆಯಾಗಿದೆ. ಹಾಗಾಗಿಯೇ ಗೆಲುವಿಗೆ ಕಸರತ್ತು ನಡೆಸಲು ತಯಾರಿ ನಡೆಸಿದ್ದು, ಬಿ.ವೈ.ವಿಜಯೇಂದ್ರ ಎಂಟ್ರಿಕೊಟ್ಟಿದ್ದಾರೆ.

ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಚಾಮರಾಜನಗರ

ಸದ್ಯ ಕೊಳ್ಳೇಗಾಲ ಮತ್ತು ಗುಂಡ್ಲುಪೇಟೆ ಕ್ಷೇತ್ರದಲ್ಲಿ ಹಾಲಿ ಶಾಸಕರೇ ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿಗಳು ಎನ್ನುವುದು ಖಚಿತವಾಗಿದೆ. ಇನ್ನು ಚಾಮರಾಜನಗರ ಮತ್ತು ಹನೂರು ಕ್ಷೇತ್ರಗಳಲ್ಲಿ ಯಾರನ್ನು ಕಣಕ್ಕಿಳಿಸುತ್ತಾರೆ ಎಂಬುದು ಸದ್ಯಕ್ಕೆ ಗೌಪ್ಯವಾಗಿದೆ. ಇದೆರಡು ಕ್ಷೇತ್ರಗಳಲ್ಲಿ ಆಕಾಂಕ್ಷಿಗಳು ಹೆಚ್ಚಿದ್ದು ಯಾರಿಗೆ ನೀಡಬೇಕು ಎನ್ನುವುದು ಬಿಜೆಪಿಗೆ ಸವಾಲ್ ಆಗಿದ್ದರೆ ಅತ್ತ ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದೆ. ಅದರಂತೆ ಚಾಮರಾಜನಗರಕ್ಕೆ ಸಿ.ಪುಟ್ಟರಂಗಶೆಟ್ಟಿ, ಗುಂಡ್ಲುಪೇಟೆ ಹೆಚ್.ಎಂ.ಗಣೇಶ್ ಪ್ರಸಾದ್, ಹನೂರುಗೆ ನರೇಂದ್ರ ಅವರು ಅಭ್ಯರ್ಥಿಗಳಾಗಿದ್ದಾರೆ.

balaraj

ಚಾಮರಾಜನಗರ ಮತ್ತು ಹನೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಾರುಪತ್ಯ ಸಾಧಿಸಿದೆ. ಜತೆಗೆ ಸಿ.ಪುಟ್ಟರಂಗಶೆಟ್ಟಿ ಮತ್ತು ನರೇಂದ್ರ ಅವರು ಗೆಲುವಿನ ಪತಾಕೆ ಹಾರಿಸಿಕೊಂಡೇ ಬಂದಿದ್ದಾರೆ. ಈ ಎರಡು ಕ್ಷೇತ್ರಗಳಿಗೆ ಬಿಜೆಪಿ ಯಾರನ್ನು ಕಣಕ್ಕಿಳಿಸುತ್ತಾರೆ ಎಂಬ ಕುತೂಹಲ ಇದ್ದೇ ಇದೆ. ಇನ್ನು ಗುಂಡ್ಲುಪೇಟೆಯಲ್ಲಿ ನಿರಂಜನಕುಮಾರ್ ಹಾಗೂ ಕೊಳ್ಳೇಗಾಲದಲ್ಲಿ ಮಹೇಶ್ ಅವರು ಬಿಜೆಪಿಯಿಂದ ಕಣಕ್ಕಿಳಿಯಲಿದ್ದಾರೆ.

ಕಾಂಗ್ರೆಸ್‌ಗೆ ಮುಖ್ಯವಾಗಿ ಕೊಳ್ಳೇಗಾಲ ಕ್ಷೇತ್ರ ಕಗ್ಗಂಟಾಗಿ ಉಳಿದಿದೆ. ಇಲ್ಲಿ ಪ್ರಭಾವಿ ನಾಯಕರಾದ ಬಾಲರಾಜ್, ಎ.ಆರ್.ಕೃಷ್ಣಮೂರ್ತಿ ಮತ್ತು ಜಯಣ್ಣ ಅವರು ಆಕಾಂಕ್ಷಿಗಳಾಗಿದ್ದು, ಈ ಪೈಕಿ ಬಾಲರಾಜ್ ಡಿ.ಕೆ.ಶಿವಕುಮಾರ್ ಅವರಿಗೆ ಆಪ್ತರಾಗಿದ್ದರೆ, ಎ.ಆರ್.ಕೃಷ್ಣಮೂರ್ತಿ ಮತ್ತು ಜಯಣ್ಣ ಅವರು ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದಾರೆ.

krishnamurthy

ಕೊಳ್ಳೇಗಾಲ ಅಭ್ಯರ್ಥಿ ಯಾರು?

ಇದೀಗ ಮೂವರಲ್ಲಿ ಯಾರನ್ನು ಆಯ್ಕೆ ಮಾಡಬೇಕು ಎಂಬುದು ಕಾಂಗ್ರೆಸ್ ನಾಯಕರಿಗೆ ಕಗ್ಗಂಟಾಗಿ ಉಳಿದಿದೆ. ಹೀಗಾಗಿ ಬಹುಶಃ ಎರಡನೇ ಪಟ್ಟಿಯಲ್ಲಿ ಅಭ್ಯರ್ಥಿಯನ್ನು ಘೋಷಣೆ ಮಾಡಬಹುದೇನೋ? ಆದರೆ ಕ್ಷೇತ್ರದಲ್ಲಿ ಮೂವರು ನಾಯಕರು ಲಾಭಿ ಮಾಡುತ್ತಿದ್ದು, ಯಾರಿಗೆ ಟಿಕೆಟ್ ಎಂಬ ಕುತೂಹಲ ಇನ್ನೂ ಕೂಡ ಜೀವಂತವಾಗಿ ಉಳಿಯುವಂತೆ ಮಾಡಿದೆ.

ಕಾಂಗ್ರೆಸ್‌ನಲ್ಲಿನ ಗೊಂದಲ ಕ್ಷೇತ್ರದ ಬಿಜೆಪಿ ಶಾಸಕ ಎನ್.ಮಹೇಶ್ ಅವರಿಗೆ ವರದಾನವಾಗಿ ಪರಿಣಮಿಸಿದರೂ ಅಚ್ಚರಿಪಡಬೇಕಾಗಿಲ್ಲ. ಕ್ಷೇತ್ರದ ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳು ಯಾರು ಎಂಬುದು ಘೋಷಣೆಯಾಗದ್ದರಿಂದ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರಲ್ಲಿ ಗೊಂದಲ ಮನೆ ಮಾಡಿದೆ. ಜತೆಗೆ ಕ್ಷೇತ್ರದಲ್ಲಿ ಚರ್ಚೆಯೂ ನಡೆಯುತ್ತಿದೆ. ಮುಂದೇನು ಎಂಬುದನ್ನು ಕಾದು ನೋಡಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+