ನರೇಂದ್ರ ಮೋದಿಯವರು ಸಫಾರಿಗೆ ಬಂಡೀಪುರವನ್ನೇ ಆಯ್ಕೆ ಮಾಡಿಕೊಂಡಿದ್ದು ಏಕೆ?, "ಆ" ನಾಲ್ಕು ಕಾರಣಗಳು ಇಲ್ಲಿವೆ ತಿಳಿಯಿರಿ

ಚಾಮರಾಜನಗರ, ಏಪ್ರಿಲ್‌, 09: ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ನಡೆಸಿ ಗಮನ ಸೆಳೆದಿದ್ದಾರೆ. ಬಂಡೀಪುರಕ್ಕೆ ಭೇಟಿ ಕೊಡುತ್ತಿರುವ ಮೊದಲ ಪ್ರಧಾನಿ ನರೇಂದ್ರ ಮೋದಿ ಅವರಾಗಿದ್ದು, ಅವರು ಸಫಾರಿಗೆ ಬಂಡೀಪುರವನ್ನೇ ಆಯ್ಕೆ ಮಾಡಿಕೊಳ್ಳಲು ಕಾರಣ ಏನು ಅನ್ನುವ ಮಾಹಿತಿ ಇಲ್ಲಿದೆ ತಿಳಿಯಿರಿ.

ಕಾರಣ: 1 ಮೋದಿ ಭೇಟಿ, ಉದ್ದೇಶ ಏನು?

ಅವನತಿಯತ್ತ ತಲುಪಿದ್ದ ಹುಲಿಯನ್ನು ಹೇಗಾದರೂ ಮಾಡಿ ಉಳಿಸಲೇಬೇಕೆಂದು 1973ರಲ್ಲಿ ಅಂದಿನ ಪಿಎಂ ಇಂದಿರಾಗಾಂಧಿ ಹುಲಿ ರಕ್ಷಿತಾರಣ್ಯಗಳನ್ನು ಘೋಷಣೆ ಮಾಡಿ ಪ್ರಾಜೆಕ್ಟ್ ಟೈಗರ್ ಯೋಜನೆಯನ್ನು ಆರಂಭಿಸಿದರು. ಅಂದು ಆರಂಭಗೊಂಡ ಹುಲಿ ರಕ್ಷಿತ ಅರಣ್ಯಗಳಲ್ಲಿ ಬಂಡೀಪುರವೂ ಒಂದಾಗಿದ್ದು, ಈಗ ಇದು ಸುವರ್ಣ ಸಂಭ್ರಮದಲ್ಲಿ ಇದೆ. ಈ ಹಿನ್ನೆಲೆಯಲ್ಲಿ ಮೋದಿ ಅವರು ಇಲ್ಲಿಗೆ ಭೇಟಿ ಕೊಟ್ಟಿದ್ದಾರೆ.

Why did Narendra Modi choose Bandipur Tiger Reserve for safari?, Know four reason

ಕಾರಣ: 2 ಆನೆ ಉಳಿಸಿದ್ದವರಿಗೆ ಶಹಬ್ಬಾಸ್‌ ಗಿರಿ

ಕೆಲ ತಿಂಗಳುಗಳ ಹಿಂದೆಯಷ್ಟೇ ವಿದ್ಯುತ್ ಶಾಕ್‌ನಿಂದ ಪ್ರಜ್ಞೆ ಕಳೆದುಕೊಂಡು ಸಾವಿನಂಚಿಗೆ ತಲುಪಿದ್ದ ಆನೆಯನ್ನು ಬಂಡೀಪುರ ಅರಣ್ಯ ಸಿಬ್ಬಂದಿ ಸತತ ಪ್ರಯತ್ನ ನಡೆಸಿ ಉಳಿಸಿಕೊಂಡಿದ್ದರು‌. ಇದನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಪ್ರಶಂಸೆ ವ್ಯಕ್ತಪಡಿಸಿದ್ದರು. ಜೊತೆಗೆ ಬಂಡೀಪುರಕ್ಕೆ ಅಂಟಿಕೊಂಡಂತೆ ಇರುವ ತೆಪ್ಪಕಾಡು ಅರಣ್ಯ ಪ್ರದೇಶಕ್ಕೆ ಭೇಟಿ ಕೊಟ್ಟು ಬೊಮ್ಮ-ಬೆಳ್ಳಿಯನ್ನು ಸನ್ಮಾನಿಸಬೇಕಾದ್ದರಿಂದ ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ.

ಕಾರಣ: 3 ನ. 1 ಸ್ಥಾನಕ್ಕೇರುವ ನಿರೀಕ್ಷೆಯಲ್ಲಿ ಬಂಡೀಪುರ

ಬಂಡೀಪುರ ಹುಲಿ ಸಂರಕ್ಷಿತ ಸುವರ್ಣ ಸಂಭ್ರಮದಲ್ಲಿದೆ. ಜೊತೆಗೆ ಇದು ಹುಲಿ ಸಂರಕ್ಷಿತ ಪ್ರದೇಶದಲ್ಲೇ 100ಕ್ಕೇ 97 ಅಂಕ ಪಡೆದಿದ್ದು, ದೇಶದಲ್ಲೇ ನಂ 1 ಇಲ್ಲವೇ ನಂ 2 ಹುಲಿ ಸಂರಕ್ಷಿತ ಪ್ರದೇಶ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎನಿಸಿಕೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮೋದಿ ಬಂಡೀಪುರಕ್ಕೆ ಭೇಟಿ ಕೊಡಲಿದ್ದಾರೆ ಎನ್ನಬಹುದು.

ಕಾರಣ: 4 ನಂಬರ್‌ 1 ಸ್ಥಾನಕ್ಕೇರುವ ನಿರೀಕ್ಷೆಯಲ್ಲಿ ಕರ್ನಾಟಕ

ಕೆಲವೇ ಕೆಲವು ಹುಲಿಗಳ ಅಂತರದಲ್ಲಿ ಹುಲಿಗಳ ಸಂಖ್ಯೆಯಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದ ಕರ್ನಾಟಕ ಈ ಬಾರಿ ನಂ1 ಸ್ಥಾನಕ್ಕೇರುವ ನಿರೀಕ್ಷೆಯಲ್ಲಿದೆ. ಜೊತೆಗೆ ಕರ್ನಾಟಕದಲ್ಲಿ ಅತ್ಯಧಿಕ ಹುಲಿಗಳಿರುವ ಪ್ರದೇಶವೂ ಬಂಡೀಪುರವೇ ಆಗಿರುವುದರಿಂದ ಬಂಡೀಪುರಕ್ಕೆ ಮೋದಿ ಭೇಟಿ ಕೊಡುತ್ತಿದ್ದಾರೆ.

Why did Narendra Modi choose Bandipur Tiger Reserve for safari?, Know four reason

ಓಪನ್ ಜೀಪ್‌ನಲ್ಲಿ ವನ್ಯಜೀವಿ ಸಫಾರಿ

ಹುಲಿ ಯೋಜನೆ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಕೊಟ್ಟಿದ್ದು, ಈ ವೇಳೆ ಅವರು ಓಪನ್ ಜೀಪ್‌ನಲ್ಲಿ ವನ್ಯಜೀವಿ ಸಫಾರಿ ನಡೆಸಿ ಗಮನ ಸೆಳೆದಿದ್ದಾರೆ.

ನರೇಂದ್ರ ಮೋದಿ ಅವರು ಟೋಪಿ, ಗಾಗಲ್ಸ್ ಜೊತೆಗೆ ಸಫಾರಿ ದಿರಿಸಿ ತೊಟ್ಟು ಓಪನ್ ಜೀಪ್‌ನಲ್ಲಿ ಕಾಡಿನಲ್ಲಿ ಸಫಾರಿ ನಡೆಸಿ ಮಿಂಚಿದ್ದಾರೆ‌. ಒಟ್ಟು 9 ವಾಹನಗಳು ಪ್ರಧಾನಿ ಮೋದಿಯವರ ಜೊತೆಗಿದ್ದು, ಸದ್ಯ ಸಫಾರಿ ಮುಗಿಸಿ ತಮಿಳುನಾಡಿನ ತೆಪ್ಪಕಾಡಿಗೆ ಭೇಟಿ ಕೊಡುತ್ತಿದ್ದಾರೆ. ಸಫಾರಿ ವೇಳೆ ನರೇಂದ್ರ ಮೋದಿ ಹುಲಿಯನ್ನು ವಿಕ್ಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಮೋದಿಯವರ ಸಫಾರಿ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ‌. ಅಲ್ಲದೇ ನಂತರ ತೆಪ್ಪಕಾಡಿನಲ್ಲಿ ಬೊಮ್ಮ-ಬೆಳ್ಳಿ ದಂಪತಿಯನ್ನು ಕೂಡ ಮೋದಿ ಭೇಟಿ ಮಾಡಿ ಸನ್ಮಾನಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಏಪ್ರಿಲ್‌ 08) ಮೈಸೂರಿಗೆ ಬಂದಿಳಿದಿದ್ದು, ಭಾನುವಾರ (ಏಪ್ರಿಲ್‌ 9) ಬೆಳಗ್ಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವನ್ಯಜೀವಿ ಸಫಾರಿ ನಡೆಸಿ ಗಮನ ಸೆಳೆದಿದ್ದಾರೆ.

ಭಾನುವಾರ ಬೆಳಗ್ಗೆ 7:30ರ ಸುಮಾರಿಗೆ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಸಮೀಪ ನಿರ್ಮಿಸಿರುವ ಹೆಲಿಪ್ಯಾಡ್‌ಗೆ ಬಂದಿಳಿದ ಪ್ರಧಾನಿ ಮೋದಿ, ಬಳಿಕ ಎಪ್‌ಪಿಜಿ ಭದ್ರತೆಯೊಂದಿಗೆ ಸಫಾರಿ ವಾಹನ ಹತ್ತಿ ಕಾಡಿನಲ್ಲಿ ಸುತ್ತಾಟ ಆರಂಭಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+