ಗುಂಡ್ಲುಪೇಟೆ: ಹಾಡಹಗಲೇ ಜಮೀನುಗಳಿಗೆ ನುಗ್ಗಿ ಬೆಳೆ ನಾಶಪಡಿಸಿದ ಒಂಟಿ ಸಲಗ
ಚಾಮರಾಜನಗರ, ನವೆಂಬರ್, 28: ಚಾಮರಾಜನಗರದಲ್ಲಿ ಆಗಾಗ ಪ್ರಾಣಿಗಳು ಹಾವಳಿ ಮಾಡುತ್ತಲೇ ಇರುತ್ತವೆ. ಹಾಗೆಯೇ ಇದೀಗ ಹಾಡಹಗಲೇ ಜಮೀನುಗಳಲ್ಲಿ ಒಂಟಿ ಸಲಗ ಓಡಾಟ ನಡೆಸಿ ಫಸಲು ನಾಶ ಪಡಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮಂಚಹಳ್ಳಿ, ಹಸಗೂಲಿ ಗ್ರಾಮಗಳಲ್ಲಿ ನಡೆದಿದ್ದು, ಜಮೀನಿಗೆ ತೆರಳಲು ರೈತರು ಭಯಬೀತರಾಗಿದ್ದಾರೆ.
ರಾತ್ರಿ ವೇಳೆ ಆಹಾರ ಅರಸಿ ನಾಡಿಗೆ ಲಗ್ಗೆ ಕಾಡಾನೆಗಳ ಭೀತಿ ಒಂದೆಡೆಯಾದರೆ, ಹಗಲಿನಲ್ಲೇ ಈ ಸಲಗ ಜಮೀನುಗಳಲ್ಲಿ ಓಡಾಡುತ್ತಿರುವುದು ರೈತರು ಜಮೀನಿಗೆ ತೆರಳಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.

ಕಳೆದ ಒಂದು ವಾರದಿಂದ ಸಲಗ ಓಡಾಡುತ್ತಿದ್ದು, ಗುರುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಮಂಚಹಳ್ಳಿಯ ಶ್ರೀ ನಡುಬೆಟ್ಟ ಮಹಾದೇಶ್ವರ ದೇವಸ್ಥಾನದ ಹತ್ತಿರ ರಸ್ತೆ ಮಾರ್ಗವಾಗದಲ್ಲೇ ಆನೆ ಓಡಾಡುತ್ತಿದೆ. ಈ ಆನೆ ಸಿಕ್ಕ ಸಿಕ್ಕ ಜಮೀನುಗಳಲ್ಲಿ ಫಸಲನ್ನು ತುಳಿದು ತಿಂದು ನಾಶ ಮಾಡುತ್ತಾ ಹೋಗುತ್ತಿದ್ದು, ರೈತರು ಹಗಲಲ್ಲೇ ಜಮೀನಿನ ಕೆಲಸಕ್ಕೆ ತೆರಳಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ನೇನೆಕಟ್ಟೆ, ಶೆಟ್ಟಹಳ್ಳಿ, ಮಂಚಹಳ್ಳಿ, ಹಸಗೂಲಿ ಗ್ರಾಮದ ಆಸುಪಾಸಿನಲ್ಲೇ ಆನೆ ಓಡಾಟವಿದ್ದು, ಅರಣ್ಯ ಇಲಾಖೆಯು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಬಂಡೀಪುರದಲ್ಲಿ ಹೆಣ್ಣಾನೆ ಆಂಥ್ರಾಕ್ಸ್‌ಗೆ ಬಲಿ ಶಂಕೆ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯ ವ್ಯಾಪ್ತಿಯ ಬಾಚಹಳ್ಳಿ ಗ್ರಾಮದ ಸರ್ವೇ ನಂ-516ರ ಪ್ರದೇಶದಲ್ಲಿ ಹೆಣ್ಣಾನೆಯೊಂದರ ಮೃತದೇಹ ಪತ್ತೆಯಾಗಿದ್ದು, ಆನೆಯು ಆಂಥ್ರಾಕ್ಸ್ ನೆರಡಿ ಕಾಯಿಲೆಯಿಂದ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ.
ಮೃತ ಹೆಣ್ಣಾನೆಗೆ ಅಂದಾಜು 30 ವರ್ಷ ವಯಸ್ಸಾಗಿದ್ದು, ಅರಣ್ಯ ಇಲಾಖೆ ಗಸ್ತು ತಿರುಗುತಿದ್ದಾಗ ಬೆಳಕಿಗೆ ಬಂದಿದೆ. ಮಾಹಿತಿ ಅರಿತ ಕೂಡಲೇ ಸ್ಥಳಕ್ಕೆ ಆಗಮಿಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್ ಹಾಗೂ ವಲಯ ಅರಣ್ಯಾಧಿಕಾರಿ ಮಲ್ಲೇಶ್ ಪರಿಶೀಲನೆ ನಡೆಸಿದ್ದಾರೆ. ಮೃತ ಕಾಡಾನೆಯ ಬಾಯಿ, ಗುದದ್ವಾರ, ಕಿವಿ, ಬಾಲದಲ್ಲಿ ರಕ್ತ ಸೋರಿಕೆ ಆಗಿರುವುದು ಕಂಡು ಬಂದಿದ್ದು, ಮೃತ ಕಾಡಾನೆ ಪರಿಶೀಲನೆ ಸಮಯದಲ್ಲಿ ಪಶು ವೈದ್ಯ ಡಾ.ಮಿರ್ಜಾ ವಾಸೀಂ ಅಂಥ್ರಾಕ್ಸ್ ರೋಗದ ಗುಣ ಲಕ್ಷಣಗಳು ಮೇಲ್ನೋಟಕ್ಕೆ ಕಂಡಿದೆ ಎಂದಿದ್ದಾರೆ.
ಮೃತ ಆನೆಯ ಅಂಗಾಂಗಗಳ ಮಾದರಿಗಳನ್ನು ಸಂಗ್ರಹಿಸಿ, ವಿಜ್ಞಾನ ಪ್ರಯೋಗ ಶಾಲೆ ಬೆಂಗಳೂರು ಇಲ್ಲಿಗೆ ಕಳುಹಿಸಲಾಗಿದೆ. ಹೆಣ್ಣಾನೆ ಮೃತ ದೇಹವನ್ನು ಸುಡುವ ಮೂಲಕ ಅಂತ್ಯಕ್ರಿಯೆ ನೆರವೇರಿಸಲಾಯಿತು. ನೆರಡಿ ರೋಗ ಎಂದು ಕರೆಯುವ ಈ ಖಾಯಿಲೆ ಭಯಾನಕವಾಗಿದ್ದು, ಸಾಂಕ್ರಾಮಿಕ ಖಾಯಿಲೆಯಾಗಿದೆ. ಜಾನುವಾರುಗಳಿಗೆ ಅಷ್ಟೇ ಅಲ್ಲದೆ, ಹಲವು ಕಾಡು ಪ್ರಾಣಿಗಳಿಗೂ ಈ ರೋಗ ಬರಲಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications