ಚಾಮರಾಜನಗರ: ಅಕ್ರಮವಾಗಿ ಮದ್ಯ ಮಾರುತ್ತಿದ್ದ ಮಹಿಳೆಗೆ ಕೋಳ ತೊಡಿಸಿದ ಅಬಕಾರಿ ಪೊಲೀಸರು
ಚಾಮರಾಜನಗರ, ಜೂನ್, 02: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಅಬಕಾರಿ ಇಲಾಖೆ ಪೊಲೀಸರು ಬಂಧಿಸಿದ ಘಟನೆ ಮಲೆ ಮಹದೇಶ್ವರ ಬೆಟ್ಟದ ಹೊಸಕೊಳದ ಬೀದಿಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಸನ್ನಿಧಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಪೊಲೀಸರು ಬಂಧಿಸಿದದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪುಟ್ಟಮ್ಮ ಎಂಬ ಆರೋಪಿತ ಮಹಿಳೆಯನ್ನು ಬಂಧಿಸಿದ್ದು, ಬಂಧಿತಳಿಂದ 8.640 ಲೀಟರ್ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ಚಾಮರಾಜನಗರ ಜಿಲ್ಲಾ ಅಬಕಾರಿ ಅಧಿಕಾರಿಗಳು ಸ್ಥಳೀಯರಿಂದ ಖಚಿತ ಮಾಹಿತಿ ಪಡೆದು ಕಾರ್ಯಚರಣೆ ನಡೆಸಿ ಪುಟ್ಟಮ್ಮನ ಮನೆ ಮೇಲೆ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಮತ್ತೊಂದೆಡೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಜೂಜಾಟ ಹಾಗೂ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಆರೋಪವೂ ಜೋರಾಗಿ ಕೇಳಿಬಂದಿದೆ.
ಅಕ್ರಮವಾಗಿ ಸಾಗಿಸುತ್ತಿದ್ದ ಹಣ ವಶ
ಇನ್ನು ಇತ್ತೀಚೆಗಷ್ಟೇ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಕೋಟಿ ಕೋಟಿ ಹಣವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ನರಗುಂದದ ಬಳಿ ನಡೆದಿತ್ತು.
ನರಗುಂದದ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ 70 ಲಕ್ಷ ರೂಪಾಯಿ ಹಣವನ್ನು ಖಚಿತ ಮಾಹಿತಿ ಮೇರೆಗೆ ನರಗುಂದ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದರು. ಹಾಗೆಯೆ ಕ್ರೇಟಾ ಕಾರಿನಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ವಿಕ್ರಂ ಸಿಂಗ್ ಹಾಗೂ ಚಾಲಕ ಶಿವಬಸಯ್ಯ ಹಿರೇಮಠ ಅವರನ್ನು ನರಗುಂದ ಪೊಲೀಸರು ಬಲೆಗೆ ಕೆಡವಿದ್ದರು.
ಆರೋಪಿಗಳು ಬಾಗಲಕೋಟೆಯಿಂದ ಹುಬ್ಬಳ್ಳಿ ಕಡೆಗೆ ಅಕ್ರಮ ಹಣವನ್ನು ಸಾಗಿಸುತ್ತಿರುವ ವೇಳೆ ನಮ್ಮ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ಗದಗ ಎಸ್‌ಪಿ ಬಿ.ಎಸ್.ನೇಮಗೌಡ ಮಾಹಿತಿ ನೀಡಿದ್ದರು. ಹಾಗೆಯೆ ನರಗುಂದ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ ಎನ್ನುವ ಮಾಹಿತಿಯೂ ಲಭ್ಯವಾಗಿತ್ತು.












Click it and Unblock the Notifications