ಸೋಲುವ ಭಯದಲ್ಲಿ ಗುಂಡ್ಲುಪೇಟೆಯಲ್ಲಿ ಯಡಿಯೂರಪ್ಪ ಠಿಕಾಣಿ: ಡಿಕೆಶಿ
ಗುಂಡ್ಲುಪೇಟೆ ಚುನಾವಣೆ ಕಣಕ್ಕೆ ಸಚಿವ ಡಿಕೆ ಶಿವಕುಮಾರ್ ಪ್ರವೇಶ ಆಗಿದೆ. ಅವರ ಜತೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ
ಗುಂಡ್ಲುಪೇಟೆ, ಮಾರ್ಚ್ 27: ಉಪ ಚುನಾವಣೆಯ ಪ್ರಚಾರ ಭರಾಟೆ ಹೆಚ್ಚಾಗಿದ್ದು, ಬಿಜೆಪಿಗೆ ಪೈಪೋಟಿ ನೀಡಲು ಸಿದ್ದರಾಮಯ್ಯ ಸಚಿವ ಸಂಪುಟದ ಮೂವರು ಸಚಿವರು ಕಾಂಗ್ರೆಸ್ ಪರ ಪ್ರಚಾರ ಆರಂಭಿಸಿದ್ದಾರೆ. ಇಂಧನ ಸಚಿವ ಡಿ.ಕೆ.ಶಿವಕುಮಾರ್ ಗ್ರಾಮೀಣ ಪ್ರದೇಶಗಳಿಗೆ ತೆರಳಿದರೆ, ಉಳಿದ ಸಚಿವರು ವಿವಿಧ ವಾರ್ಡ್ ಹಾಗೂ ಗ್ರಾಮಗಳಲ್ಲಿ ಪಾದಯಾತ್ರೆ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಯಾಚಿಸುತ್ತಿದ್ದಾರೆ.
ಸೋಮವಾರ ಬೆಳಗ್ಗೆ 11ಕ್ಕೆ ಗುಂಡ್ಲುಪೇಟೆ ಪಟ್ಟಣದ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್, ವಿಶ್ವಕರ್ಮ ಜನಾಂಗದ ಮುಖಂಡರ ಸಭೆ ನಡೆಸಿದರು. ಜನಾಂಗದ ಅಭಿವೃದ್ಧಿಗೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾಮಹದೇವಪ್ರಸಾದ್ ಪರವಾಗಿ ಮತ ನೀಡುವಂತೆ ಮನವಿ ಮಾಡಿದರು.[ಮೈಸೂರು: ದಾಖಲೆ ಇಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ 23 ಲಕ್ಷ ರು ವಶ]

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಉಪ ಚುನಾವಣೆಯಲ್ಲಿ ಇನ್ನೂ ಕಾಂಗ್ರೆಸ್ ಸಕ್ರಿಯವಾಗಿ ಭಾಗವಹಿಸಿಲ್ಲ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕ್ಷೇತ್ರದಲ್ಲಿ 15 ದಿನಗಳಿಂದ ಸುತ್ತಾಡುತ್ತಿದ್ದು, ಎರಡನೇ ಸುತ್ತಿನ ಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿಯವರಿಗೆ ಚುನಾವಣೆಯ ಫಲಿತಾಂಶದ ಬಗ್ಗೆ ಗಾಬರಿಯಾದಂತಿದೆ. ಆದ್ದರಿಂದ ಕ್ಷೇತ್ರದಲ್ಲಿಯೇ ಠಿಕಾಣಿ ಹೂಡಿದ್ದಾರೆ ಎಂದರು.[ಸಿಎಂ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡುವೆ: ಬಿಎಸ್ ವೈ]

ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ಯಡಿಯೂರಪ್ಪರವರು ಅಧಿಕಾರದಲ್ಲಿದ್ದಾಗ 15 ವಿಧಾನಸಭಾ ಕ್ಷೇತ್ರಗಳನ್ನು ದತ್ತು ತೆಗೆದುಕೊಳ್ಳುತ್ತೇನೆ ಎಂದು ಮತದಾರರನ್ನು ನಂಬಿಸಿದ್ದರು. ಚುನಾವಣೆ ಬಳಿಕ ಕ್ಷೇತ್ರವನ್ನು ತಬ್ಬಲಿ ಮಾಡಿ ಹೋಗಿದ್ದಾರೆ ಎಂದು ಆರೋಪಿಸಿದರು.[ಇದು ಉಪಚುನಾವಣೆ ದಸರಾ! ಮೈಸೂರು ಹೋಟೆಲುಗಳು ಹೌಸ್ ಫುಲ್]

ಈಗ ಲೋಕಸಭಾ ಅಧಿವೇಶನ ನಡೆಯುತ್ತಿದ್ದರೂ ಅಲ್ಲಿ ಭಾಗವಹಿಸದ ಯಡಿಯೂರಪ್ಪ, ಇಲ್ಲೇ ಠಿಕಾಣಿ ಹೂಡಿರುವ ಹಿಂದಿನ ಉದ್ದೇಶವೇನು ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಅಭ್ಯರ್ಥಿ ಗೀತಾಮಹದೇವಪ್ರಸಾದ್, ಜಿ.ಪಂ.ಸದಸ್ಯ ಮಹೇಶ್ ಮತ್ತು ಕಾಂಗ್ರೆಸ್ ಮುಖಂಡರು ಇದ್ದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications