ನೆರೆಮನೆಯವರ ಹಿಂಸೆಗೆ ಯುವತಿ ಬಲಿ: ಏನಿದು ವಿಚಿತ್ರ ಘಟನೆ?
ಚಾಮರಾಜನಗರ, ಜನವರಿ 28: ನೆರೆ ಮನೆಯವರ ಮಾನಸಿಕ ಕಿರುಕುಳದಿಂದ ಬೇಸತ್ತು ಡೆತ್ ನೋಟ್ ಬರೆದಿಟ್ಟು ಯುವತಿಯೊಬ್ಬಳು ಸಾವಿಗೆ ಶರಣಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚನ್ನಮಲ್ಲೇಪುರ ಗ್ರಾಮದಲ್ಲಿ ನಡೆದಿದೆ. ತನಗಾದ ಅನ್ಯಾಯದ ಬಗ್ಗೆ ಯುವತಿ ಪೋಷಕರಿಗೆ ತಿಳಿಸದೇ ಇಪ್ಪತ್ತನಾಲ್ಕನೇ ವಯಸ್ಸಿಗೆ ಸಾವಿನ ಮನೆ ಸೇರಿರುವುದು ದುರಂತವೇ ಸರಿ.
ಬದುಕಿ ಬಾಳಬೇಕಾಗಿದ್ದ ಯುವತಿಯೊಬ್ಬಳು ಪಕ್ಕದ ಮನೆಯವರು ಮಾನಸಿಕ ಹಿಂಸೆ ನೀಡಿದರು ಎನ್ನುವ ಕಾರಣಕ್ಕೆ ಸಾವಿಗೆ ಶರಣಾದ ಘಟನೆ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಕೂಲಿ ಕೆಲಸ ಮಾಡಿ ಬದುಕುತ್ತಿದ್ದ ಕುಟುಂಬ ಮಗಳಿಗೆ ಯಾವುದೇ ತೊಂದರೆ ಬಾರದಂತೆ ನೋಡಿಕೊಂಡಿದ್ದರು. ಆದರೀಗ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಕಂಗಾಲಾಗಿದ್ದು, ನೆರೆ ಮನೆಯವರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚನ್ನಮಲ್ಲೇಪುರ ಗ್ರಾಮದ ಕವನ (24) ಮಾತ್ರೆ ನುಂಗಿ ಸಾವಿಗೆ ಶರಣಾದ ಮೃತ ದುರ್ದೈವಿ. ಕವನ ಮಾತ್ರೆ ನುಂಗಿ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಬಿಳಿ ಹಾಳೆಯಲ್ಲಿ ಹಾಗೂ ಬಾಗಿಲ ಹಿಂಭಾಗದಲ್ಲಿ ನನ್ನ ಸಾವಿಗೆ ನೆರೆ ಮನೆಯ ಕಾವೇರಿ, ಕೀರ್ತಿ, ಕವಿತ, ವೃಷಬೇಂದ್ರ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದಾಳೆ. ಹೀಗಾಗಿ ಅದರ ಆಧಾರದ ಮೇಲೆ ಆಕೆಯ ತಾಯಿ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಕವನ ತಾಯಿ ನೀಡಿದ ದೂರಿನ ಮೇರೆಗೆ ಗುಂಡ್ಲುಪೇಟೆ ಠಾಣೆ ಪೊಲೀಸರು ವೃಷಬೇಂದ್ರ ಮತ್ತು ಕುಟುಂಬದ ವಿರುದ್ಧ ತನಿಖೆ ನಡೆಸುತ್ತಿದ್ದಾರೆ.
ಅಷ್ಟಕ್ಕೂ ಆಗಿದ್ದೇನು?
ಮೃತ ಕವನ, ತಾಯಿ ಗಾಯತ್ರಿ ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ ಮನೆಯ ಎರಡು ಬಾಗಿಲಿಗೆ ಚಿಲಕ ಹಾಕಿ ಮಾತ್ರೆ ನುಂಗಿ ನಿತ್ರಾಣಳಾಗಿದ್ದಳು. ಅಲ್ಲದೇ ಮನೆಯಿಂದ ಹೊರಗಿದ್ದ ಸಹೋದರಿ ಕಾವ್ಯಾಗೆ ವಿಡಿಯೋ ಕಾಲ್ ಮಾಡಿ ನನಗೆ ಅವಮಾನವಾಗಿದೆ ಹೀಗಾಗಿ ಮಾತ್ರೆ ನುಂಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆ ಎನ್ನಲಾಗಿದೆ.
ಕೂಡಲೇ ಸಹೋದರಿ ಕಾವ್ಯ ಕೆಲಸಕ್ಕೆ ಹೋಗಿದ್ದ ತಾಯಿ ಗಾಯತ್ರಿಗೆ ಮೊಬೈಲ್ ಮೂಲಕ ಸಂಪರ್ಕಿಸಿ ಕವನ ಮಾತ್ರೆ ನುಂಗಿದ್ದಾಗಿ ಹೇಳಿರುವ ವಿಷಯವನ್ನು ತಿಳಿಸಿ, ಕೂಡಲೇ ಮನೆಗೆ ಹೋಗುವಂತೆ ಹೇಳಿದ್ದಾಳೆ. ವಿಷಯ ತಿಳಿದು ಗಾಯತ್ರಿ ಮನೆಗೆ ಹೋಗಿ ನೋಡಿದಾಗ ಮನೆಯ ಬಾಗಿಲಿಗೆ ಚಿಲುಕ ಹಾಕಲಾಗಿತ್ತು. ಸ್ಥಳೀಯರ ಸಹಕಾರದಿಂದ ಬಾಗಿಲು ತೆರೆದು ನೋಡಿದಾಗ ಮಾತ್ರೆ ನುಂಗಿದ ಕವನ ಸಂಪೂರ್ಣ ಅಸ್ವಸ್ತಗೊಂಡ ಸ್ಥಿತಿಯಲ್ಲಿದ್ದಳು.
ಕೂಡಲೇ ಕವನಳನ್ನು ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ. ಆದರೆ ಅದಾಗಲೇ ನಿತ್ರಾಣಗೊಂಡಿದ್ದ ಆಕೆಗೆ ವೈದ್ಯರು ಚಿಕಿತ್ಸೆ ನೀಡಿ ಉಳಿಸುವ ಪ್ರಯತ್ನ ಮಾಡಿದರೂ ಅದು ಸಾಧ್ಯವಾಗಲಿಲ್ಲ. ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ಕವನ ಮೃತಪಟ್ಟಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿ ನೆರೆಮನೆಯವರು ಯಾವ ರೀತಿಯ ಅವಮಾನ ಮಾಡಿದರು ಎಂಬುದರ ಬಗ್ಗೆ ಬಹಿರಂಗಪಡಿಸಬೇಕಿದೆ. ಯುವತಿ ತನಗಾದ ಅನ್ಯಾಯದ ವಿರುದ್ಧ ಪೊಲೀಸರಿಗೆ ದೂರು ನೀಡಿ ಪರಿಹಾರ ಕಂಡುಕೊಳ್ಳುವ ಬದಲಿಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೇಸರದ ಸಂಗತಿ ಎಂದು ಗ್ರಾಮಸ್ಥರು ಕವನ ಸಾವಿಗೆ ಸಂತಾಪ ಸೂಚಿಸಿದ್ದಾರೆ.
Note- Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.
-
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications