ಹರ್ಯಾಣದಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ
ಕರ್ನಲ್, ಡಿಸೆಂಬರ್ 12: ಹರ್ಯಾಣದಲ್ಲಿ 12 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.
ಬಾಲಕಿ ಹೇಳಿಕೆ ಮೇರೆಗೆ ಪೊಲೀಸರು ಓರ್ವನನ್ನು ಬಂಧಿಸಿದ್ದು, ಶೀಘ್ರವೇ ಉಳಿದ ಮೂವರನ್ನು ಪತ್ತೆ ಹಚ್ಚುವುದಾಗಿ ಪೊಲೀಸರು ತಿಳಿಸಿದ್ದಾರೆ. ಒಟ್ಟು ಮೂವರ ಮೇಲೆ ಐಪಿಸಿ ಹಾಗೂ ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಲಾಗಿದೆ. ಸಂತ್ರಸ್ತೆಯನ್ನು ಕೌನ್ಸೆಲಿಂಗ್‌ನಲ್ಲಿ ಇಡಲಾಗಿದೆ. ಚಿಕಿತ್ಸೆಗೆ ಒಳಪಡಿಸಲಾಗಿದೆ.
ಇತ್ತೀಚೆಗೆ ಹೈದರಾಬಾದಿನಲ್ಲಿ ಪಶುವೈದ್ಯೆಯೊಬ್ಬಳ ಮೇಲೆ ನಾಲ್ವರು ದುಷ್ಕರ್ಮಿಗಳು ಅತ್ಯಾಚಾರ ನಡೆಸಿ ಬೆಂಕಿ ಹಚ್ಚಿ ಕೊಲೆ ಮಾಡಿದ್ದರು. ಬಳಿಕ ಪೊಲೀಸರು ಅವರನ್ನು ಎನ್‌ಕೌಂಟರ್ ಒಂದರಲ್ಲಿ ಹತ್ಯೆ ಮಾಡಿದ್ದರು.

ಇನ್ನೊಂದೆಡೆ ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿ ಹೇಳಲು ಹೊರಟಿದ್ದ ಸಂತ್ರಸ್ತೆ ಮೇಲೆ ನಡು ರಸ್ತೆಯಲ್ಲೇ ಪೆಟ್ರೋಲ್ ಸುರಿದು ಆರೋಪಿಗಳು ಬೆಂಕಿ ಹಚ್ಚಿದ್ದರು. ಇನ್ನು ಅನೇಕ ಕಹಿ ಘಟನೆಗಳು ಮಾಸುವ ಮುನ್ನವೇ ಮತ್ತೊಂದು ಘಟನೆ ನಮ್ಮ ಕಣ್ಣಮುಂದಿದೆ.












Click it and Unblock the Notifications