ಕಾಲೇಜಿನ ಹೊರಗೆ ವಿದ್ಯಾರ್ಥಿನಿ ಮೇಲೆ ಗುಂಡು ಹಾರಿಸಿ ಹತ್ಯೆ

ಚಂಡೀಗಡ, ಅಕ್ಟೋಬರ್ 27: ಹರಿಯಾಣದ ಫರೀದಾಬಾದ್ ಜಿಲ್ಲೆಯ ಬಲ್ಲಾಬ್‌ಗಡದಲ್ಲಿ 21 ವರ್ಷದ ವಿದ್ಯಾರ್ಥಿನಿಯನ್ನು ಆಕೆಯ ಕಾಲೇಜಿನ ಹೊರ ಭಾಗದಲ್ಲಿ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾದ ಇಬ್ಬರು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಗುಂಡು ಹಾರಿಸಿದ ವ್ಯಕ್ತಿ ಕಾರಿನಲ್ಲಿ ಪರಾರಿಯಾಗಿದ್ದಾನೆ. ಈ ಹತ್ಯೆಗೆ ಕಾರಣ ಏನು ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ್ದು ಕಾರಣ ಎನ್ನಲಾಗುತ್ತಿದೆ. ಈ ಘಟನೆಯ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

21 Year Old Girl Student Shot Dead Outside Faridabad College

ಅಂತಿಮ ವರ್ಷದ ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಪರೀಕ್ಷೆ ಬರೆದು ಮಧ್ಯಾಹ್ನ 3.30ರ ಸುಮಾರಿಗೆ ಹೊರಬಂದಾಗ ಆರೋಪಿಯು ಆಕೆಯೊಂದಿಗೆ ಮಾತನಾಡಿದ್ದಾನೆ. ಬಳಿಕ ಅಲ್ಲಿಯೇ ಇದ್ದ ಕಾರ್‌ನೊಳಗೆ ಆಕೆಯನ್ನು ತಳ್ಳಲು ಪ್ರಯತ್ನಿಸಿದ್ದಾನೆ. ಅದಕ್ಕೆ ಆಕೆ ಪ್ರತಿರೋಧ ವ್ಯಕ್ತಪಡಿಸಿದಾಗ ರಿವಾಲ್ವರ್ ಹೊರತೆಗೆದು ಗುಂಡು ಹಾರಿಸಿದ್ದಾನೆ. ಆಗ ಆಕೆಯೊಂದಿಗೆ ಸ್ನೇಹಿತೆ ಕೂಡ ಇದ್ದಳು.

ಗುಂಡೇಟಿನಿಂದ ಗಾಯಗೊಂಡ ಆಕೆಯನ್ನು ಆಸ್ಪತ್ರೆಗೆ ಕರೆತರಲಾಯಿತು. ಆದರೆ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದರು. ಆರೋಪಿಗಳಲ್ಲಿ ಒಬ್ಬಾತನನ್ನು ತೌಸಿಫ್ ಎಂದು ಗುರುತಿಸಲಾಗಿದೆ. ಆತ ಕಿರುಕುಳ ಮತ್ತು ದೌರ್ಜನ್ಯ ಎಸಗಿದ್ದಾನೆ ಎಂದು ಯುವತಿಯ ಸಂಬಂಧಿಕರೊಬ್ಬರು ಕೆಲವು ತಿಂಗಳ ಹಿಂದೆ ಆತನ ವಿರುದ್ಧ ದೂರು ನೀಡಿದ್ದರು. ಆ ಪ್ರಕರಣ ರಾಜಿ ಮೂಲಕ ಇತ್ಯರ್ಥಪಡಿಸಲಾಗಿತ್ತು ಎಂದು ಬಲ್ಲಾಬ್‌ಗಡದ ಎಸಿಪಿ ಜೈವೀರ್ ರಾಥಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+