ಚಂಡೀಗರ್ ನಲ್ಲಿ ಕೊರೊನಾ ವೈರಸ್ ಮಹಾಮಾರಿಗೆ 3 ದಿನದ ಮಗು ಸಾವು
ಚಂಡೀಗರ್, ಮೇ.26: ನೊವೆಲ್ ಕೊರೊನಾ ವೈರಸ್ ಸೋಂಕಿನ ಅಟ್ಟಹಾಸಕ್ಕೆ ಚಂಡೀಗರ್ ನಲ್ಲಿ ಮೂರು ದಿನದ ಕಂದಮ್ಮ ಬಲಿಯಾಗಿದೆ. ಇದರಿಂದ ಕೇಂದ್ರಾಡಳಿತ ಪ್ರದೇಶದಲ್ಲಿ ಕೊವಿಡ್-19ಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಮೂರು ದಿನಗಳ ಹಿಂದೆ ಜನಿಸಿದ ಮಗು ಸಾವಿನ ನಂತರದಲ್ಲಿ ಮಗುವಿನ ರಕ್ತ ಮತ್ತು ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಕೊರೊನಾ ವೈರಸ್ ಸೋಂಕು ತಪಾಸಣೆಗೆ ಕಳುಹಿಸಿ ಕೊಡಲಾಗಿತ್ತು. ಈ ವೇಳೆ ಮಗುವಿನಲ್ಲಿ ಕೊವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದೆ.
ಇದೀಗ ತಾಯಿಯ ರಕ್ತ ಹಾಗೂ ಗಂಟಲು ದ್ರವ್ಯದ ಮಾದರಿಯನ್ನು ಸಂಗ್ರಹಿಸಿರುವ ವೈದ್ಯರು ವೈದ್ಯಕೀಯ ತಪಾಸಣೆಗೆ ಕಳುಹಿಸಿಕೊಟ್ಟಿದ್ದಾರೆ. ತಾಯಿಗೂ ಕೊರೊನಾ ವೈರಸ್ ಸೋಂಕು ತಗಲಿದೆಯೇ ಎನ್ನುವುದು ವರದಿ ಬಂದ ನಂತರವಷ್ಟೇ ತಿಳಿದು ಬರಬೇಕಿದೆ.

ಚಂಡೀಗರ್ ನಲ್ಲಿ ಕೊವಿಡ್-19 ಅಂಕಿ-ಸಂಖ್ಯೆ:
ಭಾರತದ ಕೇಂದ್ರಾಡಳಿತ ಪ್ರದೇಶವಾಗಿರುವ ಚಂಡೀಗರ್ ನಲ್ಲಿ ಕೊರೊನಾ ವೈರಸ್ ಮಹಾಮಾರಿಗೆ ಇದುವರೆಗೂ ನಾಲ್ವರು ಬಲಿಯಾಗಿದ್ದಾರೆ. 266 ಜನರಲ್ಲಿ ಕೊವಿಡ್-19 ಸೋಂಕು ತಗಲಿರುವುದು ಪತ್ತೆಯಾಗಿದ್ದು, ಈ ಪೈಕಿ 187 ಸೋಂಕಿತರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. 75 ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications