ಪಂಜಾಬ್ ಭೇಟಿ ವೇಳೆ ಭದ್ರತಾ ವೈಫಲ್ಯ; ತನಿಖೆಗೆ ತ್ರಿಸದಸ್ಯ ಸಮಿತಿ

ಚಂಡೀಗಢ, ಜನವರಿ 7: ಪಂಜಾಬ್‌ಗೆ ಭೇಟಿಯ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಕೇಂದ್ರ ಗೃಹ ಸಚಿವಾಲಯವು ಗುರುವಾರ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ.

"05.01.2022ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪಂಜಾಬ್‌ನ ಫಿರೋಜ್‌ಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಯಲ್ಲಿನ ಗಂಭೀರ ಲೋಪವು ವಿವಿಐಪಿಗಳ ಭದ್ರತಾ ಅಪಾಯದ ಬಗ್ಗೆ ಬಹಿರಂಗಪಡಿಸಿದೆ. ಈ ಹಿನ್ನೆಲೆ ತನಿಖೆ ನಡೆಸಲು ಗೃಹ ವ್ಯವಹಾರಗಳ ಸಚಿವಾಲಯ (MHA) ಸಮಿತಿಯನ್ನು ರಚಿಸಿದೆ," ಎಂದು MHA ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

Recommended Video

      ಭದ್ರತಾ ಲೋಪದ ಹೆಸರಿನಲ್ಲಿ ಮೋದಿ ವಿರುದ್ಧ ಸಂಚು ನಡೆದಿತ್ತಾ? | Oneindia Kannada
      3 member committee to probe lapse in security cover during PM Modi’s Punjab visit

      ತ್ರಿಸದಸ್ಯ ಸಮಿತಿಯು ಸಂಪುಟ ಸಚಿವಾಲಯದ ಕಾರ್ಯದರ್ಶಿ (ಭದ್ರತೆ) ಸುಧೀರ್ ಕುಮಾರ್ ಸಕ್ಸೇನಾ, ಗುಪ್ತಚರ ಬ್ಯೂರೋ ಜಂಟಿ ನಿರ್ದೇಶಕ ಬಲ್ಬೀರ್ ಸಿಂಗ್ ಮತ್ತು ವಿಶೇಷ ರಕ್ಷಣಾ ಗುಂಪಿನ ಇನ್ಸ್‌ಪೆಕ್ಟರ್ ಜನರಲ್ ಎಸ್ ಸುರೇಶ್ ನೇತೃತ್ವ ವಹಿಸಲಿದ್ದಾರೆ. "ಸಮಿತಿಗೆ ಆದಷ್ಟು ಬೇಗ ವರದಿ ಸಲ್ಲಿಸಲು ಸೂಚಿಸಲಾಗಿದೆ," ಎಂದು MHA ಹೇಳಿಕೆ ತಿಳಿಸಿದೆ.

      ಭದ್ರತಾ ಲೋಪ ಎಂದು ಬಿಜೆಪಿ ದೂರಿದೆ
      ಕಾರ್ಯಕ್ರಮ ನಿಗದಿಯಾಗಿದ್ದ ಸ್ಥಳದಲ್ಲಿ ಹೆಲಿಕಾಪ್ಟರ್‌ನಲ್ಲಿ ಮೋದಿ ಆಗಮಿಸಬೇಕಿತ್ತು. ಆದರೆ ವಾತಾವರಣ ಸರಿ ಇಲ್ಲದ ಕಾರಣ ಅನಿವಾರ್ಯವಾಗಿ ಕಾರಿನಲ್ಲಿ ಬರಬೇಕಾಯಿತು. ಹುಸೇನಿವಾಲಾದಲ್ಲಿನ ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಸುಮಾರು 30-ಕಿಮೀ ದೂರದಲ್ಲಿ, ಪ್ರಧಾನ ಮಂತ್ರಿಯ ಬೆಂಗಾವಲು ಪಡೆ ಫ್ಲೈಓವರ್ ಅನ್ನು ತಲುಪಿದಾಗ, ಕೆಲವು ಪ್ರತಿಭಟನಾಕಾರರು ರಸ್ತೆಯನ್ನು ನಿರ್ಬಂಧಿಸಿರುವುದು ಕಂಡುಬಂದಿದೆ. ಪ್ರಧಾನಿ 15-20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಲುಕಿಕೊಂಡರು. ಇದನ್ನು ಭದ್ರತಾ ಲೋಪ ಎಂದು ಬಿಜೆಪಿ ದೂರಲಾಗುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+